ಮಾ.24ರಂದು ವಿಶೇಷ ‘ಸ್ವಾತಿ’ ಪೂಜೆ
ಮೈಸೂರು

ಮಾ.24ರಂದು ವಿಶೇಷ ‘ಸ್ವಾತಿ’ ಪೂಜೆ

March 22, 2019

ಮೈಸೂರು: ಮೈಸೂರು ನಗರದ ಜಯಲಕ್ಷ್ಮೀಪುರಂ, ಕಾಳಿದಾಸ ರಸ್ತೆ ಯಲ್ಲಿರುವ ಮೇಲುಕೋಟೆಯ ಯದುಗಿರಿ ಯತಿ ರಾಜ ಮಠದ ಶಾಖಾ ಮಠದಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮಾ.24ರಂದು ಶ್ರೀ ವಿಳಂಭಿ ನಾಮಸಂವತ್ಸರ, ಶುಕ್ಲ ಪಕ್ಷ, ಪಾಲ್ಗುಣ ಮಾಸ ಭಾನುವಾರ ‘ಸ್ವಾತಿ’ ವಿಶೇಷ ಪೂಜೆಯನ್ನು ಆಯೋಜಿಸಲಾಗಿದೆ.

ಶ್ರೀ ಶ್ರೀಯವರ ಆದೇಶಾನುಸಾರ ಅಂದು ಬೆಳಿಗ್ಗೆ 7.30 ಗಂಟೆಗೆ ಮಹಾ ಸುದರ್ಶನ ಸಂಕಲ್ಪ ಹೋಮ, ವಿಶೇಷ ಅಭಿಷೇಕ ಸೇವೆ, ಬೆಳಿಗ್ಗೆ 12.30 ಗಂಟೆಗೆ ಶ್ರೀಯವರಿಗೆ ವಿಶೇಷ ಅಲಂಕಾರ ಸೇವೆ, ಮಧ್ಯಾಹ್ನ 1.00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗವಿರುತ್ತದೆ. ಸಂಜೆ 7.30ಕ್ಕೆ ಪ್ರಾಕಾರೋತ್ಸವ ಮತ್ತು 8.00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗವಿರುತ್ತದೆ. ಎಲ್ಲಾ ಭಕ್ತಾದಿಗಳು ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳಬಹುದು ಎಂದು ದೇವಸ್ಥಾನದ ವ್ಯವಸ್ಥಾಪಕರಾದ ಯೋಗಾನರಸಿಂಹನ್ (ಯೋಗಾ ಮಾಮ) ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »