ಪದವಿ ಕಾಲೇಜುಗಳಲ್ಲಿ ವಿಶೇಷ ಲಸಿಕೆ ಅಭಿಯಾನ ಲಸಿಕೆ ಪಡೆಯಲು ವಿದ್ಯಾರ್ಥಿಗಳಲ್ಲಿ ಉತ್ಸಾಹ
ಮೈಸೂರು

ಪದವಿ ಕಾಲೇಜುಗಳಲ್ಲಿ ವಿಶೇಷ ಲಸಿಕೆ ಅಭಿಯಾನ ಲಸಿಕೆ ಪಡೆಯಲು ವಿದ್ಯಾರ್ಥಿಗಳಲ್ಲಿ ಉತ್ಸಾಹ

June 30, 2021

ಮೈಸೂರು, ಜೂ.29(ಆರ್‍ಕೆಬಿ)- ಶೀಘ್ರ ದಲ್ಲೇ ಕಾಲೇಜುಗಳನ್ನು ಪ್ರಾರಂಭಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಾರಂ ಭಿಸಿರುವ ವಿಶೇಷ ಲಸಿಕಾ ಅಭಿಯಾನದ ಅಂಗವಾಗಿ ಮೈಸೂರಿನ ವಿವಿಧ ಕಾಲೇಜು ಗಳಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯ ಆರಂಭವಾಗಿದೆ.

ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕಾ ಅಭಿ ಯಾನಕ್ಕೆ ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮಂಗಳವಾರ ಶಾರದಾ ವಿಲಾಸ್ ಕಾಲೇಜಿನಲ್ಲಿ ಚಾಲನೆ ನೀಡಿ ಮಾತ ನಾಡಿ, ಜಿಲ್ಲೆಯಲ್ಲಿ ಹಲವಾರು ಕಾಲೇಜು ಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ 1,58,000 ಮಂದಿ ಇದ್ದಾರೆ. ಕೊರೊನಾ ಸಾಂಕ್ರಾಮಿಕದಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸರ್ಕಾರ ವಿಶೇಷ ಅಭಿಯಾನ ಹಮ್ಮಿ ಕೊಂಡಿದೆ ಎಂದರು.
ಕೋವಿಡ್ ಲಸಿಕೆ ಶೇಕಡಾ ನೂರರಷ್ಟು ಸುರಕ್ಷತೆ ಎಂದು ತಿಳಿಯಬೇಡಿ. ಒಂದು ಅಥವಾ ಎರಡು ಡೋಸ್ ಲಸಿಕೆ ಹಾಕಿಸಿ ಕೊಂಡಿದ್ದೇನೆಂದು ಮೈ ಮರೆಯಬೇಡಿ. ಕೊರೊನಾ ಸಾಂಕ್ರಾಮಿಕ ಹೋಗುವವರೆಗೂ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸು ವುದನ್ನು ಮುಂದುವರಿಸಬೇಕು. ಸಾಮಾ ಜಿಕ ಅಂತರ ಕಾಯ್ದುಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಕುಟುಂಬದ ಸದಸ್ಯರ ಹಿತದೃಷ್ಟಿಯಿಂದ ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ನಿರ್ಲಕ್ಷಿಸಬಾರದು ಎಂದು ಸಲಹೆ ನೀಡಿದರು.

ಮೈಸೂರು ನಗರದಲ್ಲಿ ಹೆಚ್ಚಿನ ದ್ವಿಚಕ್ರ ವಾಹನ ಸವಾರರು ಮತ್ತು ಪಿಲಿಯನ್ ಸವಾ ರರು ಮುಖವಾಡ ಧರಿಸದೇ ಸಂಚರಿಸು ತ್ತಿರುವುದನ್ನು ನೋಡಿದ್ದೇವೆ. ಕೊರೊನಾ ಸಾಂಕ್ರಾಮಿಕ ರೋಗವು ದೇಶದಲ್ಲಿ ಇನ್ನೂ ಸಕ್ರಿಯವಾಗಿರುವುದರಿಂದ ನಮ್ಮ ನಿರ್ಲಕ್ಷ್ಯ ಸಲ್ಲದು ಎಂದು ಜಿಲ್ಲಾಧಿಕಾರಿ ಹೇಳಿದರು.

ಮಾಸ್ಕ್ ಧರಿಸಿ, ಲಸಿಕೆ ತೆಗೆದುಕೊಳ್ಳಿ. ನಿಮ್ಮ ಕುಟುಂಬದವರು, ಸ್ನೇಹಿತರು, ನೆರೆ ಹೊರೆಯ ಜನರನ್ನೂ ಸಹ ಕರೆದೊಯ್ದು ಲಸಿಕೆ ಹಾಕಿಸಿ, ಮಾಸ್ಕ್ ಮತ್ತು ಸಾಮಾ ಜಿಕ ಅಂತರದ ಮಹತ್ವದ ಬಗ್ಗೆ ತಿಳಿಹೇಳಿ. ಇದೇ ನಮ್ಮನ್ನು ಕೊರೊನಾ ಸಾಂಕ್ರಾಮಿಕ ರೋಗದಿಂದ ರಕ್ಷಿಸಿಕೊಳ್ಳುವ ಏಕೈಕ ಮಾರ್ಗ ಎಂದು ತಿಳಿಸಿದರು.

 

ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ ಮಾತನಾಡಿ, ಕ್ಷೇತ್ರದ ಎಲ್ಲಾ ಕಾಲೇಜುಗಳಲ್ಲಿ ವಿಶೇಷ ಕೋವಿಡ್ ಪರೀಕ್ಷೆ ಮತ್ತು ಲಸಿಕಾ ಅಭಿಯಾನ ನಡೆಸ ಲಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ವ್ಯಾಪಿಸಿ ರುವ ಕೊರೊನಾ ಸಾಂಕ್ರಾಮಿಕದಿಂದಾಗಿ ವಿದ್ಯಾರ್ಥಿಗಳಿಗೆ ಆಫ್‍ಲೈನ್ ತರಗತಿಯಲ್ಲಿ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕೈಗೊಳ್ಳಲಾಗಿರುವ ಲಸಿಕೆ ಪೂರ್ಣ ಗೊಂಡ ಬಳಿಕ ಕಾಲೇಜು ತೆರೆಯುವ ಯೋಜನೆಯನ್ನು ರಾಜ್ಯ ಸರ್ಕಾರ ಹೊಂದಿದೆ. ಹಾಗಾಗಿ ಎಲ್ಲರೂ ಲಸಿಕೆ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ. ದೇವಿಕಾ ಮಾತನಾಡಿ, ಸುಮಾರು 1,000 ವಿದ್ಯಾರ್ಥಿಗಳಿದ್ದು, ಅವರಲ್ಲಿ ಕೆಲವರು ಈಗಾಗಲೇ ಲಸಿಕೆ ತೆಗೆದುಕೊಂಡಿದ್ದಾರೆ. ತೆಗೆದುಕೊಳ್ಳದವರಿಗೆ ಶೀಘ್ರದಲ್ಲೇ ಲಸಿಕೆ ನೀಡಲಾಗುವುದು ಎಂದರು.

ನಂತರ ಮೈಸೂರಿನ ಎಂಎಂಕೆ ಮತ್ತು ಎಸ್‍ಡಿಎಂ ಮಹಿಳಾ ಪ್ರಥಮ ದರ್ಜೆ ಕಾಲೇಜು, ಮಹಾರಾಜ ಕಾಲೇಜು ಸೇರಿ ದಂತೆ ಮೈಸೂರಿನ ವಿವಿಧ ಕಾಲೇಜು ಗಳಲ್ಲಿ ಲಸಿಕಾ ಅಭಿಯಾನ ನಡೆಯಿತು. ಜುಲೈ 15ರ ಮೊದಲು ಎಲ್ಲಾ ವಿದ್ಯಾರ್ಥಿ ಗಳಿಗೆ ಲಸಿಕೆ ಹಾಕುವ ಯೋಜನೆ ಇದೆ. ಲಸಿಕೆ ಪಡೆದ ವಿದ್ಯಾರ್ಥಿಗಳು ಆಫ್‍ಲೈನ್ ತರಗತಿಗಳಿಗೆ ಹಾಜರಾಗಬಹುದು ಎಂದು ಎಂಎಂಕೆ ಮತ್ತು ಎಸ್‍ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಸಾಯಿ ನಾಥ್ ಮಲ್ಲಿಗೆಮಾಡು `ಮೈಸೂರು ಮಿತ್ರ’ನಿಗೆ ತಿಳಿಸಿದರು.

Translate »