ಜೂ. 6ರಂದು ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ
ಮೈಸೂರು

ಜೂ. 6ರಂದು ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ

June 4, 2019

ಮೈಸೂರು: ಸಕಾಲದಲ್ಲಿ ಮಳೆಗಾಗಿ ಪ್ರಾರ್ಥಿಸಲು ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಈ ಕುರಿತು ಮೇ 31ರಂದು ಸುತ್ತೋಲೆ ಹೊರಡಿಸಿ ರುವ ಕಂದಾಯ ಇಲಾಖೆ (ಮುಜರಾಯಿ) ಅಧೀನ ಕಾರ್ಯದರ್ಶಿ ಎಂ. ತಿಪ್ಪೀರಮ್ಮ ಅವರು, ಜೂನ್ 6 ರಂದು ಬ್ರಾಹ್ಮೀ ಮುಹೂರ್ತದಲ್ಲಿ ಪರ್ಜನ್ಯ ಜಪ ಮತ್ತು ವಿಶೇಷ ಪೂಜೆ ನಡೆಸುವಂತೆ ಆದೇಶಿಸಿದ್ದಾರೆ. ರಾಜ್ಯದಲ್ಲಿ ಸಕಾಲದಲ್ಲಿ ಮಳೆಯಾಗದೆ ಜನರು ಹಾಗೂ ಜಾನುವಾರುಗಳಿಗೆ ಕುಡಿ ಯುವ ನೀರಿನ ಅಭಾವ ಹೆಚ್ಚಾಗಿ ರುವುದರಿಂದ ಈ ಹಿಂದಿನಿಂದ ನಡೆಸಿ ಕೊಂಡು ಬಂದಿರುವಂತೆ ಪ್ರಸಕ್ತ ಸಾಲಿ ನಲ್ಲಿ ರಾಜ್ಯ ಎದುರಿಸುತ್ತಿರುವ ಬರಗಾಲದ ಸಂಕಷ್ಟದಿಂದ ಪಾರಾ ಗಲು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯ ಗಳಲ್ಲಿ ಪರ್ಜನ್ಯ ಜಪ ಹಾಗೂ ವಿಶೇಷ ಪೂಜೆ ನಡೆಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

ಜೂನ್ 6 ರಂದು ಬೆಳಿಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಅಭಿಷೇಕ, ಪರ್ಜನ್ಯ ಜಪ ಹಾಗೂ ಹೋಮಗಳೊಂದಿಗೆ ವಿಶೇಷ ಪೂಜಾ ಕೈಂಕರ್ಯ ನಡೆಸಬೇಕು. ಅದರ ವೆಚ್ಚವನ್ನು ದೇವಾಲಯಗಳ ನಿಧಿಯಿಂದ 10,001 ರೂ.ಗಳಿಗೆ ಮೀರದಂತೆ ಭರಿಸುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅದರನ್ವಯ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಮೈಸೂರಿನ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನ, ಅರಮನೆ ಆವರಣದಲ್ಲಿರುವ ದೇವಸ್ಥಾನಗಳು, ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನ, ಉತ್ತನಹಳ್ಳಿಯ ಶ್ರೀ ಜ್ವಾಲಾಮುಖಿ ತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇವಸ್ಥಾನಗಳ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳು ಅರ್ಚಕರೊಂದಿಗೆ ಸಮಾಲೋಚನೆ ನಡೆಸಿದ್ದು, ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆಗೆ ಸಿದ್ಧತೆ ಮಾಡಿಕೊಳ್ಳಬೇಕೆಂದು ತಿಳಿಸಿದ್ದಾರೆ.

Translate »