ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲೇ ಸ್ಪೋಕನ್ ಇಂಗ್ಲಿಷ್
ಮೈಸೂರು

ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲೇ ಸ್ಪೋಕನ್ ಇಂಗ್ಲಿಷ್

April 6, 2022

ಬೆAಗಳೂರು, ಏ. ೫- ಉದ್ದೇಶಿತ ‘ಸರ್ಕಾರಿ ಮಾದರಿ ಶಾಲೆ’ ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿAದಲೇ ‘ಸ್ಪೋಕನ್ ಇಂಗ್ಲಿಷ್’ ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣ ದಲ್ಲಿ ಆಯೋಜಿಸಲಾಗಿದ್ದ ‘ಕನ್ನಡ ಶಾಲೆ ಉಳಿಸಿ: ಕನ್ನಡ ಬೆಳೆಸಿ’ ಕುರಿತು ದುಂಡು ಮೇಜಿನ ಸಮ್ಮೇಳನವನ್ನು ಉದ್ಘಾಟಿಸಿ ಸಚಿ ವರು ಮಾತನಾಡಿದರು. ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಕನ್ನಡ ಮಾಧ್ಯಮದ ಜೊತೆಗೆ ಸರ್ಕಾರಿ ಮಾದರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುತ್ತದೆ ಎಂದರು.

ಹೋಬಳಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದೊAದು ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸುವ ಉದ್ದೇಶವಿದೆ. ಈ ಸಾಲಿನ ಬಜೆಟ್‌ನಲ್ಲಿ ಈ ಅಂಶವನ್ನು ಘೋಷಣೆ ಮಾಡಲಾ ಗಿದೆ. ಶಾಲೆಯ ಎಲ್ಲ ತರಗತಿಗಳಿಗೆ ಅಗತ್ಯ ಕೊಠಡಿಗಳು ಮತ್ತು ಎಲ್ಲ ಭಾಷೆ ಮತ್ತು ವಿಷಯಕ್ಕೆ ತಲಾ ಒಬ್ಬರು ಶಿಕ್ಷಕರು ಲಭ್ಯವಿರು ವಂತಹ ವ್ಯವಸ್ಥೆ ಮಾಡಲಾಗುತ್ತದೆ. ಇಂತಹ ಶಾಲೆಗಳಲ್ಲಿ ಕನ್ನಡ ಕಲಿಕೆ ಜೊತೆಗೆ ಇಂಗ್ಲೀಷ್ ಕಲಿಕೆ ಹಾಗೂ ಶಿಕ್ಷಕರಿಂದ ಸ್ಪೋಕನ್ ಇಂಗ್ಲಿಷ್ ಕಲಿಸಿಕೊಡಲಾಗುತ್ತದೆ. ಇದೇ ಸಲಹೆಯನ್ನು ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರೂ ನೀಡಿದ್ದು, ಅದನ್ನು ಸ್ವೀಕರಿಸಲಾಗುತ್ತದೆ ಎಂದು ಸಚಿವ ನಾಗೇಶ್ ನುಡಿದರು.

ಖಾಸಗಿ ಶಾಲೆಗಳು ಮತ್ತು ಇಂಗ್ಲಿಷ್ ಮಾಧ್ಯಮ ಶಿಕ್ಷಣದ ವ್ಯಾಮೋಹ ಬಹಳಷ್ಟು ಜನರಲ್ಲಿದೆ. ಗುಣಮಟ್ಟ ಹೇಗಾದರೂ ಇರಲಿ ಮಕ್ಕಳಿಗೆ ಇಂಗ್ಲಿಷ್ ಕಲಿಸಬೇಕು ಎನ್ನುವ ಆಸೆ ಪಾಲಕರಲ್ಲಿ ಇದೆ. ರಾಜ್ಯದಲ್ಲಿನ ಕೆಪಿಎಸ್ ಶಾಲೆಗಳಲ್ಲೂ ಕೂಡ ಇಂಗ್ಲಿಷ್ ಮಾಧ್ಯಮಕ್ಕೆ ಮಕ್ಕಳನ್ನು ಸೇರಿಸಲು ಪಾಲಕರು ಆಸಕ್ತಿ ತೋರಿಸು ತ್ತಿದ್ದಾರೆ. ಹೀಗಾಗಿ, ಮಾದರಿ ಶಾಲೆಗಳಲ್ಲಿ ಇಂಗ್ಲಿಷ್‌ನ್ನು ಸ್ಪೋಕನ್ ಇಂಗ್ಲಿಷ್ ಆಗಿ ಕಲಿಸುವ ಉದ್ದೇಶವಿದೆ ಎಂದು ಹೇಳಿದರು.

ಪ್ರಾಥಮಿಕ ಶಾಲಾ ಹಂತದಿAದಲೇ ಗಣ ತ ಮತ್ತು ಪರಿಸರ ಅಧ್ಯಯನ ವಿಷಯಗಳ ಪಠ್ಯ ಪುಸ್ತಕಗಳನ್ನು ದ್ವಿಭಾಷೆಯಲ್ಲಿ ಮುದ್ರಿಸಲಾಗುತ್ತಿದೆ. ಹಾಳೆಯ ಒಂದು ಬದಿ ಕನ್ನಡ ಇದ್ದರೆ, ಮತ್ತೊಂದು ಬದಿ ಇಂಗ್ಲಿಷ್‌ನಲ್ಲಿ ಮುದ್ರಿಸಲಾಗುತ್ತಿದೆ. ೧ರಿಂದ ೪ನೇ ತರಗತಿವರೆಗೆ ಈ ಎರಡು ವಿಷಯಗಳನ್ನು ದ್ವಿಭಾಷೆಯಲ್ಲಿ ಮುದ್ರಿಸಲಾಗುತ್ತದೆ. ೨೦೧೯-೨೦ರಿಂದ ೨೦೨೧-೨೨ರವರೆಗೆ ಪ್ರತಿ ವರ್ಷ ಒಂದೊAದು ತರಗತಿಯಂತೆ ೧ರಿಂದ ೩ನೇ ತರಗತಿವರೆಗೆ ದ್ವಿಭಾಷೆಯಲ್ಲಿ ಮುದ್ರಿಸಲಾಗುತ್ತಿತ್ತು. ಈ ಶೈಕ್ಷಣ ಕ ವರ್ಷದಿಂದ ೧ರಿಂದ೪ನೇ ತರಗತಿವರೆಗೆ ಮುದ್ರಿಸಲಾಗುತ್ತಿದೆ. ಮಕ್ಕಳಿಗೆ ಪ್ರಾಥ ಮಿಕ ಶಾಲಾ ಹಂತದಿAದಲೇ ಕನ್ನಡದ ಜೊತೆಗೆ ಇಂಗ್ಲಿಷ್ ಭಾಷೆಯ ಪರಿಚಯ ಆಗಬೇಕು ಎನ್ನುವ ಉದ್ದೇಶವಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಸ್ಪರ್ಧಾತ್ಮಕ ಲೋಕದಲ್ಲಿ ಸ್ಪರ್ಧಿಸಲಾಗದು. ಇಂಗ್ಲಿಷ್‌ನಲ್ಲೇ ಓದಬೇಕು ಎಂಬ ಮಾನಸಿಕತೆ ಜನರಲ್ಲಿ ಬಂದಿದೆ. ಇತ್ತೀಚಿನ ವರ್ಷಗಳಲ್ಲಿ ಕನ್ನಡ ಶಾಲೆಗಳು ಮುಚ್ಚಿರುವುದು ಕೂಡ ಅದಕ್ಕೆ ಸಾಕ್ಷಿಯಾಗಿದೆ. ೪೭ ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಪೈಕಿ ೩,೮೦೦ ಶಾಲೆಗಳಲ್ಲಿ ೧೦ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಒಬ್ಬ ವಿದ್ಯಾರ್ಥಿ

ಇರುವ ೫೬೨ ಶಾಲೆಗಳನ್ನು ರಾಜ್ಯ ಸರ್ಕಾರ ನಡೆಸುತ್ತಿದೆ ಎಂದು ನಾಗೇಶ್ ತಿಳಿಸಿದರು.
ಕನ್ನಡ ಶಾಲೆಗಳ ಉಳಿವಿಗೆ ತಜ್ಞರ ಸಲಹೆಗಳನ್ನು ಸೂಚನೆಗಳನ್ನು ಸ್ವೀಕರಿಸಲಾಗುತ್ತದೆ. ಎಲ್ಲ ಸಲಹೆಗಳನ್ನು ಸ್ವೀಕರಿಸಿ ಕನ್ನಡ ಉಳಿಸಿ ಬೆಳೆಸುವ ಪ್ರಯತ್ನ ಮಾಡಲಾಗುತ್ತದೆ ಎಂದರು. ಸರಸ್ವತಿ ಸಮ್ಮಾನ್ ಪುರಸ್ಕöÈತ ಸಾಹಿತಿ ಎಸ್.ಎಲ್.ಭೈರಪ್ಪ, ಕಸಾಪ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ, ನಿಡುಮಾಮಿಡಿ ಮಹಾಸಂಸ್ಥಾನದ ಶ್ರೀ ವೀರಭದ್ರ ಚೆನ್ನಮಲ್ಲ ಮಹಾಸ್ವಾಮೀಜಿ, ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾ ಸ್ವಾಮೀಜಿ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಣ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

Translate »