ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಪೂರಕ :ಸಿ.ಬಸವರಾಜು
ಮೈಸೂರು

ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಪೂರಕ :ಸಿ.ಬಸವರಾಜು

January 10, 2019

ಮೈಸೂರು: ಶಾರದಾ ವಿಲಾಸ ಪದವಿ ಪೂರ್ವಕಾಲೇಜಿನ ವಾರ್ಷಿಕ ಕ್ರೀಡಾಕೂಟ ‘ಸಮಷ್ಟಿ’ 2018 ಸಂಸ್ಥೆಯ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೈಸೂರು ಜಿಲ್ಲಾ ಕಬಡ್ಡಿ ಅಸೋಸಿಯೇ ಷನ್‍ನ ಅಧ್ಯಕ್ಷ ಸಿ.ಬಸವರಾಜು ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ‘ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಪೂರಕ ವಾತಾವರಣವನ್ನು ನಿರ್ಮಿಸುತ್ತದೆ. ಕ್ರೀಡೆಗಳಾದ ಕಬಡ್ಡಿ, ಖೋಖೋ, ಕುಂಟೆಬಿಲ್ಲೆ, ಲಗೋರಿ, ಹಗ್ಗ ಜಿಗಿತ ಸ್ಪರ್ಧೆಗಳಲ್ಲಿ ಇಂದಿನ ಯುವ ಜನಾಂಗ ಹೆಚ್ಚು ಹೆಚ್ಚು ಭಾಗವಹಿಸದೇ ಇರುವುದಕ್ಕೆ ವಿಷಾದ ವ್ಯಕ್ತಪಡಿಸಿದರು.

ಪಠ್ಯಪುಸ್ತಕದ ಜೊತೆಗೆ ಸಹ ಪಠ್ಯೇತರ ಚಟುವಟಿಕೆಯಾದ ಕ್ರೀಡೆಯೂ ಸಹ ಮನುಷ್ಯನ ಆರೋಗ್ಯವನ್ನು ಸದೃಢಗೊಳಿ ಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಸ್ಪರ್ಧೆಯಲ್ಲಿ ಭಾಗವಹಿಸು ವುದು ಮುಖ್ಯವೇ ಹೊರತು ಸೋಲು, ಗೆಲುವು ಅಲ್ಲ. ಹಾಗಾಗಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಶಾಲಾ ಕಾಲೇಜುಗಳಲ್ಲಿ ತಮಗೆ ಸಿಗುವ ಅವಕಾಶಗಳನ್ನು ಸದುಪ ಯೋಗಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಕರೆ ನೀಡಿದರು.

ಸಂಸ್ಥೆಯ ಗೌರವ ಕಾರ್ಯದರ್ಶಿ ಹೆಚ್.ಕೆ. ಶ್ರೀನಾಥ್ ಮಾತನಾಡಿ, ಇಂದಿನ ವಿದ್ಯಾರ್ಥಿ ಗಳು ಪರೀಕ್ಷಾ ದೃಷ್ಟಿಯಿಂದ ಮಾತ್ರ ಓದುವುದನ್ನು ಬಿಟ್ಟು, ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಮನಸ್ಸು ಮತ್ತು ದೇಹವನ್ನು ಸದೃಢ ಆರೋಗ್ಯಕರವಾಗಿ ಇರಿಸಿಕೊಳ್ಳ ಬೇಕೆಂದು ಅಭಿಪ್ರಾಯಪಟ್ಟರು.

ಕಾಲೇಜಿನ ಪ್ರಾಂಶುಪಾಲರಾದ ಸಿ.ಕೆ.ಅಶೋಕಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯ ರಾದ ಎಸ್.ನಾಗರಾಜು, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಶಿವಶಂಕರ್, ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿ ಕಾರಿ ರಾಜೇಂದ್ರ ಪ್ರಸಾದ್ ಹೊನ್ನಲಗೆರೆ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಶ್ರೀಕಾಂತ್ ಪ್ರಾರ್ಥಿಸಿದರೆ, ಉಪನ್ಯಾಸಕ ರಾದ ರಾಜೇಂದ್ರ ಪ್ರಸಾದ್ ಹೊನ್ನಲಗೆರೆ ಸ್ವಾಗತಿಸಿ, ಪರಿಚಯಿಸಿದರು. ಉಪನ್ಯಾಸಕಿ ಕವಿತಾ ವಂದಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕ ರಾಘವೇಂದ್ರ ಬೆಟಗೇರಿ ನೆರವೇರಿಸಿಕೊಟ್ಟರು.

Translate »