ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳಿ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಸಲಹೆ
ಕೊಡಗು

ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳಿ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಸಲಹೆ

August 5, 2018

ಮಡಿಕೇರಿ: ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳು ವತ್ತ ಗಮನಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಸಲಹೆ ಮಾಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಶುಕ್ರ ವಾರ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು.

ಸಾರ್ವಜನಿಕರಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಕಾಳಜಿಯನ್ನು ಅರ್ಥ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಚಿ ವರು ನಿರ್ದೇಶನ ನಿಡಿದರು.

ಸಭೆಯ ಆರಂಭದಲ್ಲಿ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಳೇ ಮನೆಗಳನ್ನು ಕೆಡವಿ ಹೊಸ ಮನೆ ನಿರ್ಮಾಣಕ್ಕೆ ಅವಕಾಶ ನೀಡುತ್ತಿಲ್ಲ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರತ್ತಿದ್ದು, ಈ ಸಂಬಂಧ ಸರ್ಕ ರದ ನಿರ್ದೇಶನದಂತೆ 50 ವರ್ಷಕ್ಕೂ ಹಳೆಯದಾದ ಮನೆಗಳನ್ನು (1976 ಕ್ಕೂ ಮೊದಲಿನ) ಹೊಸದಾಗಿ ನಿರ್ಮಿಸಲು ಅನುಮತಿ ನೀಡುವಂತೆ ನಗರ ಯೋಜನಾ ನಿರ್ದೇಶಕರಿಗೆ ಸಚಿವ ಸಾ.ರಾ.ಮಹೇಶ್ ಸಲಹೆ ಮಾಡಿದರು. ಹಳೇ ಮನೆ ಕೆಡವಿ, ಹೊಸ ಮನೆ ನಿರ್ಮಿಸಲು ಅನುಮತಿ ಏಕೆ ನೀಡುತ್ತಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಯನ್ನು ಪ್ರಶ್ನಿಸಿದರು. ಈ ಸಂಬಂಧ ನಗರ ಯೋಜನಾ ಇಲಾಖೆಯ ನಿರ್ದೇಶಕರಿಗೆ ದೂರವಾಣಿ ಕರೆ ಮಾಡಿ ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇ ಶನ ನೀಡುವಂತೆ ಸಚಿವರು ಸಲಹೆ ಮಾಡಿದರು. ಹಣ ಇರುವವರು ಅನುಮತಿ ಪಡೆಯದೆ ಮನೆ ನಿರ್ಮಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದರಿಂದ ಸರ್ಕಾರಕ್ಕೆ ಆದಾಯವೂ ನಷ್ಟ ಉಂಟಾಗಲಿದೆ. ಇದನ್ನೆಲ್ಲ ಅರಿತು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತು ವಾರಿ ಸಚಿವರು ನಿರ್ದೇಶನ ನೀಡಿದರು.

ಈ ಬಗ್ಗೆ ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ ಹಿತ್ತಲು, ಮನೆ ದಳ ಎಂದರೆ ಏನು ತಿಳಿಸಿದುಕೊಂಡಿದ್ದೀರ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಹಳೇ ಮನೆಯನ್ನು ಕೆಡವಿ ಹೊಸ ಮನೆ ನಿರ್ಮಾಣಕ್ಕೆ ಅನುಮತಿ ನೀಡದಿದ್ದಲ್ಲಿ ಭೂ ಪರಿವರ್ತನೆ ಹೇಗೆ ಮಾಡಿದಿರಿ ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಪ್ರಶ್ನಿಸಿದರು. ಸಮಸ್ಯೆಯನ್ನು ಇತ್ಯರ್ಥಪಡಿಸುವುದು ಇಲಾಖೆಯ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ಹಾನಿಯಾಗಿದ್ದು, ತ್ವರಿತವಾಗಿ ಪರಿಹಾರ ವಿತರಿಸುವಂತೆ ಸಂಬಂಧಪಟ್ಟ ಅಧಿಕಾರಿ ಗಳಿಗೆ ನಿರ್ದೇಶನ ನೀಡಿದರು.

ಈ ಬಗ್ಗೆ ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ, ಬೆಳೆ ಹಾನಿ ಸಂಬಂಧ ಇದು ವರೆಗೆ ಪರಿಹಾರ ವಿತರಿಸಿಲ್ಲ ಎಂದು ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ ಅವರು, ಬೆಳೆ ಹಾನಿ ಸಂಬಂಧ 957 ಅರ್ಜಿಗಳು ಸಲ್ಲಿಕೆಯಾಗಿದ್ದು, ಈಗಾಗಲೇ ಜಂಟಿ ಸಮೀಕ್ಷೆಯಾಗಿದ್ದು, ಸದ್ಯ 72 ಅರ್ಜಿಗಳಿಗೆ ಪರಿಹಾರ ವಿತರಿಸಲುಸಿದ್ಧ ವಾಗಿದೆ ಎಂದು ಅವರು ಮಾಹಿತಿ ನೀಡಿದರು.
ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಸಂಬಂಧ ಆದಾಯ ಮಿತಿ ಹೆಚ್ಚಳ ಮಾಡಬೇಕು ಎಂಬುದು ಕೇಳಿ ಬರುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟವರ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.

ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಶಾಸಕ ಕೆ.ಜಿ.ಬೋಪಯ್ಯ ಅವರು ಜಿಲ್ಲೆಯಲ್ಲಿ ವಸತಿ ಯೋಜನೆಗಳು ಪ್ರಗತಿಯಾಗುತ್ತಿಲ್ಲ ಎಂದು ಸಚಿವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರು ವಸತಿ ರಹಿತರ ಪಟ್ಟಿ ಸಿದ್ಧಪಡಿಸಲಾಗಿದ್ದು, ವಸತಿ ರಹಿತರಿಗೆ ಮನೆ ನಿರ್ಮಿಸಲಾಗುವುದು ಎಂದು ಅವರು ಹೇಳಿದರು. ಆಶ್ರಯ ಮನೆ ಪಡೆಯುವಂತಾಗಲು ಆದಾಯವು 30 ಸಾವಿರ ರೂ.ದೊಳಗಿರಬೇಕು. ಇದನ್ನು ಹೆಚ್ಚಿಸಬೇಕಿದೆ. ಗ್ರಾಮ ಲೆಕ್ಕಿಗರು ಮತ್ತು ಕಂದಾಯ ನಿರೀಕ್ಷಕರು ಯಾವ ಮಾನದಂಡ ನೋಡದೇ ಆದಾಯ ಪತ್ರ ನೀಡುತ್ತಾರೆ. ಮಾನವೀಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಕೆ.ಜಿ. ಬೋಪಯ್ಯ ಸಲಹೆ ಮಾಡಿದರು.

ಇದೇ ಸಂಧರ್ಭದಲ್ಲಿ ರಿವರ್ ರ್ಯಾಫ್ಟಿಂಗ್ ನಡೆಸುವವರ ಮನವಿ ಆಲಿಸಿದರು. ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನೀಲ್ ಸುಬ್ರಮಣಿ, ಜಿಲ್ಲಾ ಪಂಚಾ ಯಿತಿ ಅಧ್ಯಕ್ಷ ಬಿ.ಎ. ಹರೀಶ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್, ಉಪ ವಿಭಾಗಾ ಧಿಕಾರಿ ಡಾ.ನಂಜುಂಡೇಗೌಡ, ತಹಶೀ ಲ್ದಾರರು, ನಾನಾ ಇಲಾಖೆ ಅಧಿಕಾರಿಗಳು ಇದ್ದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು ಜಿಲ್ಲೆಯ ಅಭಿವೃದ್ಧಿ ಸಂಬಂಧ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು. ಮಡಿ ಕೇರಿಯಲ್ಲಿ ಕೆಎಸ್‍ಆರ್‍ಟಿಸಿ ವಿಭಾಗೀಯ ಕಚೇರಿ ತೆರೆಯಲು ಅಗತ್ಯ ಪ್ರಯತ್ನಿಸ ಲಾಗುವುದು ಎಂದು ಸಚಿವರು ತಿಳಿಸಿದರು.

Translate »