ಶ್ರೀ ಅಂಬಿಕಾ ಶಾಲೆಯ ಶಾಲಾ ವಾರ್ಷಿಕೋತ್ಸವ ವಿದ್ಯಾರ್ಥಿಗಳಿಗೆ ಕೌಶಲ್ಯಾಧರಿತ ಶಿಕ್ಷಣ ಅಗತ್ಯ
ಹಾಸನ

ಶ್ರೀ ಅಂಬಿಕಾ ಶಾಲೆಯ ಶಾಲಾ ವಾರ್ಷಿಕೋತ್ಸವ ವಿದ್ಯಾರ್ಥಿಗಳಿಗೆ ಕೌಶಲ್ಯಾಧರಿತ ಶಿಕ್ಷಣ ಅಗತ್ಯ

December 20, 2018

ಶ್ರವಣಬೆಳಗೊಳ: ವಿದ್ಯಾರ್ಥಿ ಗಳಿಗೆ ಕೌಶಲ್ಯಾಧಾರಿತ ಶಿಕ್ಷಣ ಅತ್ಯಗತ್ಯವಾ ಗಿದ್ದು, ಶಿಕ್ಷಣ ತಜ್ಞರು ಈ ಬಗ್ಗೆ ಆಲೋ ಚನೆ ನಡೆಸಿ ಯೋಜನೆ ರೂಪಿಸಲಾಗು ತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಮಂಜುನಾಥ್ ಹೇಳಿದರು. ಪಟ್ಟಣದ ಶ್ರೀ ಅಂಬಿಕಾ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ತರಗತಿ ಶಿಕ್ಷಣ ಜೊತೆಗೆ ಪಠ್ಯೇತರ ಶಿಕ್ಷಣಕ್ಕೂ ಒತ್ತು ನೀಡಬೇಕು. ಎಲ್ಲಾ ಆಯಾ ಮಗಳಲ್ಲೂ ವಿದ್ಯಾರ್ಥಿಗೆ ಶಿಕ್ಷಣ ದೊರೆತರೆ ಮಾತ್ರ ಸ್ಪರ್ಧಾತ್ಮಕ ಸನ್ನಿವೇಶ ದಲ್ಲಿ ಉತ್ತಮ ಶಿಕ್ಷಣ ಪಡೆಯಬಹುದು. ಇತ್ತೀಚೆಗೆ ಸರ್ಕಾರಿ ಶಾಲೆ ಎಂದರೆ ಕಡೆ ಗಣನೆ ಮಾಡು ವವರೇ ಹೆಚ್ಚಾಗಿದ್ದಾರೆ. ಆದರೆ, ಸರ್ಕಾರಿ ಶಾಲೆಗಳಲ್ಲೂ ಉತ್ತಮ ಫಲಿತಾಂಶ ಬರುತ್ತಿದ್ದು, ಸರ್ಕಾರದಿಂದ ಹಲವು ಯೋಜನೆಗಳನ್ನು ರೂಪಿಸಲಾ ಗುತ್ತಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಲು ಸಾಧ್ಯವಾಗಿದೆ. ಜಿಲ್ಲೆಯ ಎಲ್ಲಾ ಶಿಕ್ಷಕರ ಪರಿಶ್ರಮದಿಂದ ಎಸ್‍ಎಸ್‍ಎಲ್‍ಸಿ ಫಲಿ ತಾಂಶದಲ್ಲಿ ಹಾಸನ ಜಿಲ್ಲೆ 5ನೇ ಸ್ಥಾನ ಪಡೆ ದಿದೆ. ಇದನ್ನು ಪ್ರಥಮ ಸಾಲಿಗೆ ಕೊಂಡೊ ಯ್ಯಲು ಶ್ರಮಿಸಬೇಕು ಎಂದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕ ಎಸ್.ಜಿ. ನಾಗೇಶ್ ಮಾತನಾಡಿ, ಸ್ವಾಮೀಜಿಯವರು ಶ್ರವಣಬೆಳ ಗೊಳದಲ್ಲಿ ಪೂರ್ವ ಪ್ರಾಥಮಿಕ ತರಗತಿ ಯಿಂದ ತಾಂತ್ರಿಕ ಪದವಿವರೆಗೆ ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸಿ, ಈ ಭಾಗದ ಸಾವಿ ರಾರು ವಿದ್ಯಾರ್ಥಿಗಳಿಗೆ ಆಸರೆಯಾ ಗಿದ್ದಾರೆ. ಸಿಬಿಎಸ್‍ಸಿ ಮಾದರಿ ಶಿಕ್ಷಣ ಹಾಗೂ ಪದವಿ ಶಿಕ್ಷಣ ಈ ಭಾಗದಲ್ಲಿ ಅವಶ್ಯಕವಾ ಗಿದ್ದು, ಶ್ರೀಗಳು ಮುಂದಾದರೆ ಇಲಾಖೆ ಯಿಂದ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಈ ವೇಳೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಂಬಿಕಾ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದಿಂದ ಪ್ರೋತ್ಸಾಹ ಧನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಲತಾ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪುಷ್ಪಲತಾ, ಬಿಇಒ ವರಲಕ್ಷ್ಮಿ, ಶಿಕ್ಷಣ ಸಂಯೋಜಕ ಹೆಚ್.ಎಂ.ರುದ್ರೇಶ್, ಎಸ್‍ಎಸ್ ಡಿಜೆಜೆಪಿ ಸಂಘದ ಕಾರ್ಯದರ್ಶಿ ಎಸ್.ಪಿ. ಮಹೇಶ್, ಹಳೆ ವಿದ್ಯಾರ್ಥಿ ಸಂಘದ ಸದ ಸ್ಯರು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.

Translate »