ಅ.24, ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ
ಚಾಮರಾಜನಗರ

ಅ.24, ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ

October 22, 2018

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.24ರಂದು ಚಾ.ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಪ್ರವಾಸಿ ಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಚಾಲನೆ ನೀಡುವರು.

ಬೆಳಿಗ್ಗೆ 11 ಗಂಟೆಗೆ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ನಡೆಯಲಿರುವ ಸಮಾ ರಂಭದ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ವಹಿಸುವರು. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಮಾಜಿ ಸಚಿವ ಎನ್.ಮಹೇಶ್ ಸಮಾರಂಭ ಉದ್ಘಾಟಿಸುವರು. ಸಂಸದ ಆರ್. ಧ್ರುವನಾರಾಯಣ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.

ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಎಸ್. ನಾಗರಾಜು (ಸಂದೇಶ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಜೆ. ಯೋಗೀಶ್, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎನ್. ಉಮಾವತಿ, ಸಾಮಾಜಿಕ ತಾಲೂಕು ಪಂಚಾಯತ್ ಅಧ್ಯಕ್ಷೆ ದೊಡ್ಡಮ್ಮ, ಉಪಾಧ್ಯಕ್ಷ ಪಿ.ಎನ್. ದಯಾನಿಧಿ ಸಮಾರಂಭದ ಮುಖ್ಯ ಅತಿಥಿ ಗಳಾಗಿ ಪಾಲ್ಗೊಳ್ಳುವರು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಎಂ. ಎನ್. ರಘು ಮುಖ್ಯ ಭಾಷಣಕಾರರಾಗಿ ಆಗಮಿಸುವರು. ಬೆಳಿಗ್ಗೆ 9.30 ಗಂಟೆಗೆ ವೇದಿಕೆಯಲ್ಲಿ ಸುರೇಶ್ ನಾಗ್ ಮತ್ತು ತಂಡದವರಿಂದ ಜನಪದ ಹಾಗೂ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Translate »