ಮೇ 8ಕ್ಕೆ ಶ್ರೀ ಪಟ್ಟಾಭಿರಾಮಸ್ವಾಮಿ ಬ್ರಹ್ಮರಥೋತ್ಸವ

ರಾಮನಾಥಪುರ: ದಕ್ಷಿಣಕಾಶಿ ಎಂದೇ ಹೆಸರಾದ ರಾಮನಾಥಪುರದ ಕಾವೇರಿ ನದಿ ದಂಡೆಯಲ್ಲಿರುವ ಶ್ರೀಪಟ್ಟಾಭಿರಾಮಸ್ವಾಮಿ ಬ್ರಹ್ಮ ರಥೋತ್ಸವ ಮೇ 8ರಂದು ಸಡ ಗರ ಸಂಭ್ರಮದಿಂದ ನಡೆಯಲಿದೆ.

ಬ್ರಹ್ಮರಥೋತ್ಸವದಂದು ಮುಂಜಾನೆಯಿಂದಲೇ ಸ್ವಾಮಿಗೆ ಪಂಚಾಮೃತ ಅಭಿಷೇಕ, ವೇದ ಘೋಷಗಳೊಂದಿಗೆ ಮಹಾ ಮಂಗಳಾರತಿ, ಉತ್ಸವಗಳು ಹಾಗೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜೆ ನಡೆಯಲಿದೆ. ಈಗಾಗಲೇ ದೇವರ ಸನ್ನಿಧಾನಕ್ಕೆ ಭಕ್ತರ ದಂಡು ಆಗಮಿಸುತ್ತಿದ್ದು, ಇಲ್ಲಿನ ಕಾವೇರಿ ನದಿಯಲ್ಲಿ ಮಿಂದು ದೇವರ ದರ್ಶನ ಪಡೆಯುತ್ತಿದ್ದಾರೆ. ಅಲ್ಲದೇ ಇಲ್ಲಿನ ದೇವಾಲಯದ ಆಡಳಿತ ಮಂಡಳಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.