ಫೆ.11ರಂದು ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ
ಮೈಸೂರು

ಫೆ.11ರಂದು ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ

January 21, 2020

ಮೈಸೂರು, ಜ.20- ಶ್ರೀ ಸವಿತಾ ಮಹರ್ಷಿ ಜಯಂತಿಯನ್ನು ಫೆ.11ರಂದು ಆಚರಿಸಲು ಅಪರ ಜಿಲ್ಲಾಧಿಕಾರಿ ಬಿ.ಆರ್. ಪೂರ್ಣಿಮಾ ಅಧ್ಯಕ್ಷತೆಯಲ್ಲಿ ಜಿಲ್ಲಾಧಿ ಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಶ್ರೀ ಸವಿತಾ ಮಹರ್ಷಿ ಜಯಂತ್ಯುತ್ಸವ ಸಮಿತಿ ಸಹಯೋಗದಲ್ಲಿ ಫೆ.11ರಂದು ಬೆಳಿಗ್ಗೆ 11 ಗಂಟೆಗೆ ಕಲಾಮಂದಿರ ದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಉದ್ಘಾಟನೆ ಮಾಡುವರು. ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು ಎಂದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಚನ್ನಪ್ಪ, ಜಯಂತ್ಯುತ್ಸವ ಸಮಿತಿಯ ಜಿಲ್ಲಾ ಅಧ್ಯಕ್ಷ ಎನ್.ಆರ್.ನಾಗೇಶ್, ಉಪಾಧ್ಯಕ್ಷ ಮಂಜು ನಾಥ್, ಪ್ರಧಾನ ಕಾರ್ಯದರ್ಶಿ ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Translate »