ಆದಿ ಜಗದ್ಗುರು ಸುತ್ತೂರು ಶಿವರಾತ್ರೀಶ್ವರ ಶಿವ ಯೋಗಿಗಳ 1069ನೇ ಜಯಂತಿ ಮಹೋತ್ಸವದ ಸರಳ ರೀತಿ ಆಚರಣೆಗೆ ಸುತ್ತೂರಲ್ಲಿ ಸಚಿವ ವಿ.ಸೋಮಣ್ಣ ಚಾಲನೆ
ಮೈಸೂರು

ಆದಿ ಜಗದ್ಗುರು ಸುತ್ತೂರು ಶಿವರಾತ್ರೀಶ್ವರ ಶಿವ ಯೋಗಿಗಳ 1069ನೇ ಜಯಂತಿ ಮಹೋತ್ಸವದ ಸರಳ ರೀತಿ ಆಚರಣೆಗೆ ಸುತ್ತೂರಲ್ಲಿ ಸಚಿವ ವಿ.ಸೋಮಣ್ಣ ಚಾಲನೆ

December 25, 2019

ಮೈಸೂರು,ಡಿ.24(ಆರ್‍ಕೆಬಿ)-ಆದಿ ಜಗದ್ಗುರು ಸುತ್ತೂರು ಶಿವರಾತ್ರೀಶ್ವರ ಶಿವ ಯೋಗಿಗಳ 1069ನೇ ಜಯಂತಿ ಮಹೋತ್ಸವದ ಸರಳ ಆಚರಣೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮಂಗಳವಾರ ಸುತ್ತೂರಿ ನಲ್ಲಿ ಚಾಲನೆ ನೀಡಿದರು.

ಸುತ್ತೂರು ಶ್ರೀಕ್ಷೇತ್ರದ ಆವರಣದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ಬಳಿಕ ಆದಿ ಜಗದ್ಗುರು ಶಿವರಾತ್ರಿ ಶಿವಯೋಗಿಗಳ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಮೆರವಣಿಗೆಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಜೆಎಸ್‍ಎಸ್ ಮಹಾವಿದ್ಯಾಪೀಠದ ನೂತನ ವರ್ಷದ ಕ್ಯಾಲೆಂಡರ್ ಅನ್ನೂ ಬಿಡುಗಡೆ ಮಾಡಿದರು.

ಪ್ರತಿ ವರ್ಷ ಒಂದೊಂದು ಊರಿನಲ್ಲಿ ಆದಿ ಜಗದ್ಗುರುಗಳ ಜಯಂತಿ ಮಹೋತ್ಸವ ನಡೆಯುತ್ತಾ ಬಂದಿದ್ದು, ಈ ವರ್ಷ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯ ಬೇಕಿತ್ತು. ಆದರೆ ರಾಜ್ಯದಲ್ಲಿ ಅತಿವೃಷ್ಟಿ ಕಾರಣದಿಂದಾಗಿ ಈ ವರ್ಷ ಸುತ್ತೂರು ಶ್ರೀಕ್ಷೇತ್ರದಲ್ಲಿಯೇ ಸರಳ ರೀತಿಯಲ್ಲಿ ಆಚರಿಸಲಾಯಿತು.

ಮೆರವಣಿಗೆಯಲ್ಲಿ ನಂದಿ ಧ್ವಜ ಕುಣಿತ, ವೀರಭದ್ರ ಕುಣಿತ, ಡೊಳ್ಳು ಕುಣಿತ ಸೇರಿ ದಂತೆ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ಮೈಸೂರು -ಕೊಡಗು ಸಂಸದ ಪ್ರತಾಪ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು, ಮರಿತಿಬ್ಬೇಗೌಡ, ಮಾಜಿ ಸಚಿವರಾದ ಕೋಟೆ ಎಂ.ಶಿವಣ್ಣ, ನರೇಂದ್ರಸ್ವಾಮಿ, ಮಾಜಿ ಸಂಸದ ಆರ್. ಧ್ರುವನಾರಾಯಣ್, ಮಾಜಿ ಶಾಸಕರಾದ ವಾಸು, ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ಹೆಚ್ಚು ವರಿ ಎಸ್ಪಿ ಸ್ನೇಹಾ, ಜಯಂತಿ ಮಹೋತ್ಸವ ಸಮಿತಿ ಕಾರ್ಯದರ್ಶಿ ಎಸ್.ಶಿವಕುಮಾರ ಸ್ವಾಮಿ ಇನ್ನಿತರರು ಉಪಸ್ಥಿತರಿದ್ದರು.

Translate »