ವಿಷ ಪ್ರಸಾದ ಸೇವನೆ ಪ್ರಕರಣ: ನ್ಯಾಯಾಂಗ ತನಿಖೆಗೆ ಶ್ರೀನಿವಾಸ ಪೂಜಾರಿ ಒತ್ತಾಯ

ಮೈಸೂರು: ಸುಳವಾಡಿ ಮಾರಮ್ಮ ದೇವಾಲಯದ ವಿಷ ಪ್ರಸಾದ ಸೇವಿಸಿ 13 ಸಾವು ಹಾಗೂ 91 ಮಂದಿ ಅಸ್ವಸ್ಥರಾದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ವಿಧಾನ ಪರಿಷತ್‍ನ ಪ್ರತಿಪಕ್ಷದ ನಾಯಕ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ.

ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಳವಾಡಿ ದುರಂತದ ಸಂತ್ರಸ್ಥರನ್ನು ಭಾನುವಾರ ಬೆಳಿಗ್ಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಅವರು, ಪತ್ರಕರ್ತರೊಂದಿಗೆ ಮಾತನಾಡಿ, ಮಾರಮ್ಮ ದೇವಾಲಯದ ವಿಷ ಪ್ರಸಾದ ಸೇವನೆ ಪ್ರಕ ಣಕ್ಕೆ ಸರ್ಕಾರ ಕಾರಣವಲ್ಲ. ಆದರೆ ಪ್ರಕರಣದ ನಂತರ ಘಟನೆಯನ್ನು ನಿಭಾಯಿ ಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ರೋಗಿಗಳನ್ನು ಸಾಗಿಸುವ ಆಂಬ್ಯುಲೆನ್ಸ್‍ನಲ್ಲಿ ವೆಂಟಿಲೇಟರ್ ಇಲ್ಲದೇ ಇರುವುದು ಹಾಗೂ ಪ್ರಥಮ ಚಿಕಿತ್ಸೆ ನೀಡು ವುದಕ್ಕೆ ವ್ಯವಸ್ಥೆ ಇಲ್ಲದ ಕಾರಣ ರೋಗಿಗಳ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಇದನ್ನು ಗಮನಿಸಿದರೆ ಸರ್ಕಾರದ ವಿಫಲತೆ ಎದ್ದು ಕಾಣುತ್ತದೆ ಎಂದು ಆರೋಪಿಸಿದರು.

ಇದೊಂದು ದೊಡ್ಡ ದುರಂತವಾಗಿದೆ. ಭಕ್ತಿಯಿಂದ ದೇವಾಲಯಕ್ಕೆ ತೆರಳಿದ್ದವರು ವಿಷ ಮಿಶ್ರಣವಾದ ಪ್ರಸಾದವನ್ನು ಭಕ್ತಿಯಿಂದಲೇ ಸೇವಿಸಿ ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿಯಾಗಿದೆ. ಅಸ್ವಸ್ಥರಾದ 100ಕ್ಕೂ ಹೆಚ್ಚು ಮಂದಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರು ಇಲ್ಲದೇ ಇರುವುದರಿಂದ ಚಿಕಿತ್ಸೆ ನೀಡಲು ಸಾಧ್ಯವಾಗಿಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂ ರಿಗೆ ಕರೆತರುವ ಸಂದರ್ಭದಲ್ಲಿಯೂ ಆಂಬ್ಯುಲೆನ್ಸ್‍ಗಳಲ್ಲಿ ಸೂಕ್ತ ವ್ಯವಸ್ಥೆ ಇಲ್ಲದೇ ಹೆಚ್ಚಿನ ರೋಗಿಗಳ ಸ್ಥಿತಿ ಗಂಭೀರವಾಗಲು ಕಾರಣವಾಗಿದೆ.

ದೊಡ್ಡ ನಗರಗಳಲ್ಲಿ ಒಂದಾದ ಕೆ.ಆರ್.ಆಸ್ಪತ್ರೆಯಲ್ಲಿ ಕನಿಷ್ಠ 50 ವೆಂಟಿಲೇ ಟರ್ ವ್ಯವಸ್ಥೆ ಇರಬೇಕಾಗಿತ್ತು. ಆದರೆ 12 ವೆಂಟಿಲೇಟರ್ ಮಾತ್ರ ಇರುವುದು ರೋಗಿಗಳಿಗೆ ತೊಂದರೆಯಾಗಿದೆ ಎಂದು ವಿಷಾ ದಿಸಿದರು. ಈ ಪ್ರಕರಣದಲ್ಲಿ ಮೃತಪಟ್ಟಿರುವ ಎಲ್ಲರೂ ಬಡ ಕುಟುಂಬಕ್ಕೆ ಸೇರಿ ದವರೇ ಆಗಿದ್ದಾರೆ. ಒಬ್ಬ ಮಹಿಳೆ ಪತಿ ಮತ್ತು ಮಗುವನ್ನು ಕಳೆದುಕೊಂಡು ಅನಾಥವಾಗಿ ದ್ದಾರೆ. ಕೆಲವರ ಬದುಕು ಅತಂತ್ರವಾಗಿದೆ. ಸರ್ಕಾರ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಘೋಷಣೆ ಮಾಡಿದೆ. ಇದು ಸಾಕಾಗು ವುದಿಲ್ಲ. ಈ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ತಲಾ 10 ಲಕ್ಷ ಪರಿ ಹಾರ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಶಾಸಕ ಎಲ್. ನಾಗೇಂದ್ರ, ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್. ಮಂಜು ನಾಥ್, ಮಾಜಿ ಶಾಸಕರಾದ ಪರಿಮಳಾ ನಾಗಪ್ಪ, ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ, ಜಿ.ಎನ್.ನಂಜುಂಡಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಸಚಿವ ಎಂ.ಶಿವಣ್ಣ, ಡಾ.ಎಸ್. ದತ್ತೇಶ್‍ಕುಮಾರ್ ಇನ್ನಿತರರು ಇದ್ದರು.