ಜ.12, 13 ಶ್ರೀನಿವಾಸ ಕಲ್ಯಾಣೋತ್ಸವ
ಹಾಸನ

ಜ.12, 13 ಶ್ರೀನಿವಾಸ ಕಲ್ಯಾಣೋತ್ಸವ

January 6, 2019

ಚನ್ನರಾಯಪಟ್ಟಣ: ಪ್ರತಿ ವರ್ಷದಂತೆ ಈ ಬಾರಿಯೂ ಲೋಕ ಕಲ್ಯಾಣಕ್ಕಾಗಿ ಶ್ರೀ ಶ್ರೀನಿವಾಸ ಕಲ್ಯಾಣೋ ತ್ಸವವನ್ನು ಆಧ್ಯಾತ್ಮಿಕ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕತ್ತರಿಘಟ್ಟದ ಮೆಳೆಯಮ್ಮ ಆಧ್ಯಾತ್ಮಿಕ ಕೇಂದ್ರದ ಮುಖ್ಯಸ್ಥ ಚಂದ್ರಶೇಖರ ಗುರೂಜಿ ತಿಳಿಸಿದರು.

ತಾಲೂಕಿನ ಕತ್ತರಿಘಟ್ಟ ಗ್ರಾಮದ ಮೆಳೆಯಮ್ಮ ಆಧ್ಯಾತ್ಮಿಕ ಕೇಂದ್ರದ ಆವರಣದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜ. 12 ಮತ್ತು 13ರಂದು ಶ್ರೀನಿವಾಸ ಕಲ್ಯಾ ಣೋತ್ಸವ ನಡೆಯಲಿದ್ದು, ವಿವಿಧೆಡೆ ಯಿಂದ ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ ಎಂದರು.

ಅಂದು ಬೆಳಿಗ್ಗೆ 6 ಗಂಟೆಗೆ ಗಂಗಾ ಪೂಜೆ, ನವಗ್ರಹ ಪೂಜೆ, ದುರ್ಗಾಪೂಜೆ, ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಹೋಮ ಜರುಗಲಿದೆ. ಜ. 13ರಂದು ಬೆಳಿಗ್ಗೆ 9 ಗಂಟೆಗೆ ಆಧ್ಯಾತ್ಮಿಕ ಕೇಂದ್ರದಲ್ಲಿ ಪೂಜಾ ಕೈಂಕರ್ಯ ಪ್ರಾರಂಭವಾಗಲಿದ್ದು, ಶ್ರೀನಿವಾಸ ಕಲ್ಯಾಣೋತ್ಸವ, ಗಣಪತಿ ಪ್ರಾರ್ಥನೆ, ಸುಹಾಸಿನಿಯರಿಂದ ಗಂಗಾ ಪೂಜೆ, ಪುಣ್ಯಾಹ, ಪಂಚಾಮೃತ ಅಭಿಷೇಕ ಮತ್ತು ವಿವಿಧ ಧಾರ್ಮಿಕ ವಿಧಿ ವಿಧಾನ ನಡೆಯಲ್ಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಹೊಸದುರ್ಗ ತಾಲೂಕಿನ ಬೆಲಗೂರು ಕ್ಷೇತ್ರದ ಬಿಂದು ಮಾಧವ ಶರ್ಮ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ, ವಿವಿಧ ಕ್ಷೇತ್ರದ ಗಣ್ಯರು ಮತ್ತು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ಚಂದ್ರಶೇಖರ ಗುರೂಜಿ ತಿಳಿಸಿದರು.

Translate »