SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ
ಮೈಸೂರು

SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ

November 30, 2019

ಬೆಂಗಳೂರು, ನ.29: ಮಾರ್ಚ್/ಏಪ್ರಿಲ್-2020ರ ಎಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದ್ದು, ಮಾ.27ರಿಂದ ಏ.9ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಪರೀಕ್ಷಾ ವೇಳಾಪಟ್ಟಿ: ಮಾ.27ರಂದು ಪ್ರಥಮ ಭಾಷೆ(ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ), ಮಾ.30ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ ಹಾಗೂ ಹಿಂದೂಸ್ತಾನಿ ಸಂಗೀತ. ಏ.1ರಂದು ದ್ವಿತೀಯ ಭಾಷೆ(ಇಂಗ್ಲಿಷ್ ಹಾಗೂ ಕನ್ನಡ).ಏ.3ರಂದು ತೃತೀಯ ಭಾಷೆ(ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ ಹಾಗೂ ತುಳು) ಹಾಗೂ ಎನ್‍ಎಸ್‍ಕ್ಯೂಎಫ್ ಪರೀಕ್ಷಾ ವಿಷಯಗಳು. ಏ.4ರಂದು ಅರ್ಥಶಾಸ್ತ್ರ, ಎಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್. ಏ.7ರಂದು ಗಣಿತ ಹಾಗೂ ಸಮಾಜ ಶಾಸ್ತ್ರ. ಏ.9ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.

ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.45ರವರೆಗೆ, ದ್ವಿತೀಯ ಮತ್ತು ತೃತೀಯ ಭಾಷೆ ಬೆಳಿಗ್ಗೆ 9.30ರಿಂದ 12.30ರವರೆಗೆ ನಿಗದಿಪಡಿಸಲಾಗಿದೆ. ಇಂಜಿನಿಯರಿಂಗ್ ಡ್ರಾಯಿಂಗ್ ಪರೀಕ್ಷೆ ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ ಹಾಗೂ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ ಪರೀಕ್ಷೆ ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ ನಡೆಯಲಿದೆ.

Translate »