ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಸೋ.ಪೇಟೆಯಲ್ಲಿ 2,778 ವಿದ್ಯಾರ್ಥಿಗಳು
ಕೊಡಗು

ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಸೋ.ಪೇಟೆಯಲ್ಲಿ 2,778 ವಿದ್ಯಾರ್ಥಿಗಳು

July 19, 2021

ಸೋಮವಾರಪೇಟೆ, ಜು.18-ತಾಲೂ ಕಿನ ಒಟ್ಟು 2,778 ವಿದ್ಯಾರ್ಥಿಗಳು ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಎದುರಿ ಸಲಿದ್ದಾರೆ. ಅವರಲ್ಲಿ 1,401 ವಿದ್ಯಾರ್ಥಿ ಗಳು ಹಾಗೂ 1,377 ವಿದ್ಯಾರ್ಥಿನಿಯರು ಪರೀಕ್ಷೆಗೆ ಸಿದ್ಧತೆ ಕೈಗೊಂಡಿದ್ದು, 17 ಪರೀಕ್ಷಾ ಕೇಂದ್ರಗಳನ್ನು ಶಿಕ್ಷಣ ಇಲಾಖೆ ಗುರುತಿಸಿ, ವ್ಯವಸ್ಥೆಗೆ ಕ್ರಮ ವಹಿಸಿದೆ. ಜು.19 ಹಾಗೂ 22ರಂದು ಪರೀಕ್ಷೆಗಳು ನಡೆಯಲಿವೆ.

ತಾಲೂಕಿನ 2482 ಮಂದಿ ರೆಗ್ಯು ಲರ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯ ಲಿದ್ದು, ಇವರಲ್ಲಿ 1,224 ವಿದ್ಯಾರ್ಥಿಗಳು ಹಾಗೂ 1,268 ವಿದ್ಯಾರ್ಥಿನಿಯರು, 53 ವಲಸೆ ವಿದ್ಯಾರ್ಥಿಗಳು, 131 ರೆಗ್ಯೂಲರ್ ರಿಪೀಟ್ ವಿದ್ಯಾರ್ಥಿಗಳು, 66 ಖಾಸಗಿ ಶಾಲಾ ವಿದ್ಯಾರ್ಥಿಗಳು, 36 ಖಾಸಗಿ ಶಾಲಾ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈವರೆಗೆ ತಾಲೂಕಿ ನಲ್ಲಿ 11 ಕೇಂದ್ರಗಳಲ್ಲಿ ಪರೀಕ್ಷೆ ನಡೆಯು ತ್ತಿತ್ತು. ಕೋವಿಡ್ ಮುನ್ನೆಚ್ಚರಿಕೆಯಿಂದ ಈ ಬಾರಿ ಇದರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಸೋಮವಾರಪೇಟೆ ವ್ಯಾಪ್ತಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಓಎಲ್‍ವಿ ಆಂಗ್ಲಮಾಧ್ಯಮ ಶಾಲೆ, ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆ, ವಿಶ್ವಮಾನವ ಕುವೆಂಪು ಪ್ರೌಢಶಾಲೆ, ಕೊಡ್ಲಿಪೇಟೆಯ ಪದವಿ ಪೂರ್ವ ಕಾಲೇಜು, ಕುಶಾಲ ನಗರದ ಫಾತಿಮಾ ಪ್ರೌಢಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಫಾತಿಮಾ ಅನುದಾನಿತ ಪ್ರೌಢಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ.

ಇದರೊಂದಿಗೆ ಸುಂಟಿಕೊಪ್ಪದ ಸರ್ಕಾರಿ ಪ್ರೌಢಶಾಲೆ, ಸಂತ ಮೇರಿಸ್ ಪ್ರೌಢಶಾಲೆ, ಹೆಬ್ಬಾಲೆಯ ಪದವಿಪೂರ್ವ ಕಾಲೇಜು, ನೆಲ್ಲಿಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆ, ಕೂಡಿಗೆ ಅಂಜೆಲಾ ವಿದ್ಯಾನಿಕೇತನ, ಆಲೂರು ಸಿದ್ದಾಪುರದ ಪದವಿ ಪೂರ್ವ ಕಾಲೇಜು, ಮಾದಾಪುರದ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜುಗಳ ಪರಿಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಮುಖ್ಯ ಅಧೀಕ್ಷಕರು, ಪ್ರಶ್ನೆಪತ್ರಿಕೆ ಅಧೀಕ್ಷಕರು, ಪರೀಕ್ಷಾ ಕೇಂದ್ರದಲ್ಲಿ ಕೇಂದ್ರ ಸಹಾಯ ಕರು, ಸಾಮಾಜಿಕ ಅಂತರ ನಿರ್ವಹಣಾ ಅಧಿಕಾರಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು, ಕರ್ತವ್ಯ ನಿರ್ವಹಿಸಲಿದ್ದಾರೆ. ಕೇಂದ್ರದ ಗೇಟ್ ನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ವಿದ್ಯಾರ್ಥಿಗಳನ್ನು ಥರ್ಮೋ ಸ್ಕ್ರೀನಿಂಗ್ ಮಾಡಲಾಗುವುದು. ವಿಶ್ರಾಂತಿ ಕೊಠಡಿ ಸ್ಥಾಪನೆ, ಶೌಚಾಲಯಗಳ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದು ಶಿಕ್ಷಣಾಧಿಕಾರಿ ಹೆಚ್.ಕೆ.ಪಾಂಡು ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರದ ಹೊರಭಾಗದಲ್ಲೂ ಅಂತರ ಕಾಯ್ದುಕೊಳ್ಳುವ ಸಲುವಾಗಿ ಸಾಮಾಜಿಕ ಅಂತರ ನಿರ್ವಹಣಾ ಅಧಿಕಾರಿ ಗಳು, ಇಬ್ಬರು ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲು ಶಿಕ್ಷಣ ಇಲಾಖೆಯೊಂದಿಗೆ ಕಂದಾಯ ಇಲಾಖೆ ಅಧಿಕಾರಿಗಳೂ, ತಹಸೀಲ್ದಾರ್, ತಾಪಂ ಇಓ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಗಳು, ಖಜಾನಾಧಿಕಾರಿಗಳು, ಪೊಲೀಸ್ ಇಲಾಖೆ ಕೈಜೋಡಿಸುತ್ತಿದ್ದು, ಗೊಂದಲ ರಹಿತ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಲಾಗಿದೆ.

Translate »