ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಂಬಂಧ ಮೇ 18ಕ್ಕೆ ನಿರ್ಧಾರ
ಮೈಸೂರು

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಂಬಂಧ ಮೇ 18ಕ್ಕೆ ನಿರ್ಧಾರ

May 16, 2020

ಚಾಮರಾಜನಗರ, ಮೇ 15 (ಎಸ್‍ಎಸ್) -ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ನಡೆ ಸುವ ಕುರಿತು ಮೇ 18ರಂದು ಶಿಕ್ಷಣ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲಾ ಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವ ಬಗ್ಗೆ ಗೊಂದಲವಿದ್ದು, ಈ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ, ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸ ಬೇಕು ಎಂಬ ಒಲವು ಸರ್ಕಾರಕ್ಕೆ ಇದೆ. ಬಹುತೇಕ ಜನರು ಪರೀಕ್ಷೆ ನಡೆಸುವಂತೆ ತಿಳಿಸಿದ್ದಾರೆ. ಅದೇ ರೀತಿ ಕೆಲವು ಶಿಕ್ಷಣ ತಜ್ಞರು ಪರೀಕ್ಷೆ ಬೇಡ ಎಂಬ ಸಲಹೆ ಯನ್ನು ನೀಡಿದ್ದಾರೆ. ಈ ಬಗ್ಗೆ ಮುಕ್ತ ವಾಗಿ ಚರ್ಚಿಸಲು ಸಭೆ ಕರೆಯಲಾಗಿದೆ. ನಾನು ಬರಗೂರು ರಾಮಚಂದ್ರಪ್ಪ, ಪ್ರೊ. ಬಿ.ಕೆ.ಚಂದ್ರಶೇಖರ್, ಬಿ.ಎಲ್.ಶಂಕರ್, ಹನುಮಂತಯ್ಯ ಸೇರಿದಂತೆ ಹಲವು ಶಿಕ್ಷಣ ತಜ್ಞರೊಂದಿಗೆ ಚರ್ಚೆ ನಡೆಸುತ್ತಿದ್ದೇನೆ. ನಾಳೆ(ಮೇ 16) ಶಿಕ್ಷಕರ ಹಾಗೂ ಪದವೀ ಧರ ಕ್ಷೇತ್ರದ ವಿಧಾನ ಪರೀಷತ್ ಸದಸ್ಯ ರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಲಿದ್ದೇನೆ ಎಂದರು. ಪರೀಕ್ಷೆ ನಡೆಸು ವುದೇ ಆದರೆ ಸಾಮಾಜಿಕ ಅಂತರ ಕಾಯ್ದು ಕೊಳ್ಳುವ ದೃಷ್ಟಿಯಿಂದಹೆಚ್ಚು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಲಾಗುವುದು, ಸ್ಯಾನಿಟೈಸರ್ ಪೂರೈಕೆ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಲಿದೆ. ದೂರದರ್ಶನದ ಚಂದನ ವಾಹಿನಿ ಯಲ್ಲಿ ಪ್ರಸಾರವಾಗುತ್ತಿರುವ ಎಸ್‍ಎಸ್‍ಎಲ್‍ಸಿ ಪುನರ್‍ಮನನ ತರಗತಿಗೆÀ ಉತ್ತಮ ರೀತಿಯ ಸ್ಪಂದನೆ ವ್ಯಕ್ತವಾಗಿದೆ. ಇಂಗ್ಲಿಷ್ ಹಾಗೂ ಹಿಂದಿ ಮಾಧ್ಯಮದಲ್ಲಿ ಪಾಠ ಮಾಡುವಂತೆ ಬೇಡಿಕೆ ಬಂದಿದೆ. ಶೇ.85ರಿಂದ 90ರಷ್ಟು ಮಕ್ಕಳಿಗೆ ಇದರಿಂದ ಉಪಯೋಗ ವಾಗಿದೆ ಎಂದರು. ಶಿಕ್ಷಣದ ಉದೇಶಕ್ಕಾಗಿಯೇ ದೂರದರ್ಶನದ ಒಂದು ಚಾನಲ್ ಅನ್ನು ಶಿಕ್ಷಣ ಇಲಾಖೆ ತೆಗೆದುಕೊಳ್ಳಬೇಕು ಎಂಬ ಯೋಚನೆ ಇದೆ. ಈ ಸಂಬಂಧ ದೂರದರ್ಶನದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು. ಲಾಕ್‍ಡೌನ್‍ನಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಷ್ಟು ಅವಧಿ ಕಡಿತವಾಗುತ್ತದೆ, ಎಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಬೇಕು ಎಂಬುದರ ಬಗ್ಗೆ ಅಧ್ಯಯನ ನಡೆಸುವ ಜವಾಬ್ದಾರಿಯನ್ನು ಡಿಎಸ್‍ಇಆರ್‍ಟಿಗೆ ನೀಡಲಾಗಿದೆ. ಕೆಲವು ಖಾಸಗಿ ಶಾಲೆಗಳು ಎಲ್‍ಕೆಜಿ, ಯುಕೆಜಿ ಮಕ್ಕಳಿಗೂ ಆನ್‍ಲೈನ್ ಮೂಲಕ ಶಿಕ್ಷಣ ನೀಡುವ ಪ್ರಯತ್ನಕ್ಕೆ ಮುಂದಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

Translate »