ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಂತರ ಸಿಇಟಿ ಪರೀಕ್ಷೆ
ಮೈಸೂರು

ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಂತರ ಸಿಇಟಿ ಪರೀಕ್ಷೆ

May 9, 2020

ಬೆಂಗಳೂರು, ಮೇ 8- ಕೊರೊನಾ ಲಾಕ್‍ಡೌನ್ ಹಿನ್ನೆಲೆ ಯಲ್ಲಿ ಮುಂದಿನ ಶೈಕ್ಷ ಣಿಕ ವರ್ಷದ ಅವಧಿ ಎಷ್ಟಿರಬೇಕು ಎನ್ನುವ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳ ಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಶೀಘ್ರದಲ್ಲೇ ಶೈಕ್ಷ ಣಿಕ ವೇಳಾಪಟ್ಟಿ ಪ್ರಕಟವಾಗಲಿದ್ದು, ಹೆಚ್ಚುವರಿ ಶೈಕ್ಷಣಿಕ ಚಟುವಟಿಕೆಗಳು ಇರುವುದಿಲ್ಲ. ಸೀಮಿತ ಅವಧಿಯಲ್ಲಿ ಯಾವ ಯಾವ ಚಟುವಟಿಕೆಗಳನ್ನು ಕೈಗೊಳ್ಳ ಬೇಕು ಎನ್ನುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಎಸ್‍ಎಸ್‍ಎಲ್ಸಿ ಪರೀಕ್ಷೆ ಮುಗಿದ ತಕ್ಷಣವೇ ಸಿಇಟಿ ಪರೀಕ್ಷೆಗಳನ್ನೂ ನಡೆಸಿ ವೃತ್ತಿ ಶಿಕ್ಷಣ ಕೋರ್ಸ್‍ಗಳ ಪ್ರವೇಶಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಬೋಧನಾ ಚಟುವಟಿಕೆ ಗಳನ್ನು ಇಲಾಖೆ ಯುಟ್ಯೂಬ್ ವಾಹಿ ನಿಗೆ ಅಪೆÇ್ಲೀಡ್ ಮಾಡಲಾಗುವುದು. ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ರೀತಿ ಯಲ್ಲಿ ಅನುಕೂಲವಾಗಲಿದೆ ಎಂದಿದ್ದಾರೆ.

Translate »