ನಾಳೆಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಹಾಸನ

ನಾಳೆಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

March 20, 2019

ಹಾಸನ: ಜಿಲ್ಲೆಯ 91 ಪರೀಕ್ಷಾ ಕೇಂದ್ರಗಳಲ್ಲಿ ಮಾ.21ರಿಂದ ಏ.4ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯ ಲಿದ್ದು, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇ ಶಕ ಹೆಚ್.ಮಂಜುನಾಥ್ ತಿಳಿಸಿದ್ದಾರೆ.

2019ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ 10,840 ಹೆಣ್ಣು ಮಕ್ಕಳು, 11,164 ಗಂಡು ಮಕ್ಕಳು ಸೇರಿದಂತೆ ಒಟ್ಟು 22, 004 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.
ಜಿಲ್ಲಾಧಿಕಾರಿ ಅಕ್ರಂ ಪಾಷ ಅಧ್ಯಕ್ಷತೆ ಯಲ್ಲಿ ಮತ್ತು ಜಿಪಂ ಸಿಇಓ ಡಾ.ಕೆ.ಎನ್. ವಿಜಯಪ್ರಕಾಶ್ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀ ಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆಯನ್ನು ಮಾ.12 ರಂದು ನಡೆಸಿ ಮಾರ್ಗದರ್ಶನ ವನ್ನು ಈಗಾಗಲೇ ನೀಡಲಾಗಿದೆ.

ವಿದ್ಯಾರ್ಥಿಗಳು ಯಾವುದೇ ಆತಂಕ ಪಡಬೇಡಿ. ಯಾವುದೇ ಅಕ್ರಮ ನಡೆಯ ದಂತೆ ಜಿಲ್ಲಾಡಳಿತ ಈಗಾಗಲೇ ಮುಂಜಾ ಗ್ರತೆ ವಹಿಸಿದೆ. ಅಲ್ಲದೆ ಎಲ್ಲಾ ವಿದ್ಯಾರ್ಥಿ ಗಳಿಗೆ ಪೂರಕ ಮೂಲ ಸೌಕರ್ಯ ಒದಗಿ ಸಲು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಆತ್ಮ ವಿಶ್ವಾಸದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಕಿವಿಮಾತು ಹೇಳಿದ್ದಾರೆ.

ವಿವಿಧ ಇಲಾಖೆಗಳಿಂದ 67 ಮಂದಿ ವೀಕ್ಷಕರನ್ನು ನೇಮಿಸಲಾಗಿದೆ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸ್ಥಾನಿಕ ಜಾಗೃತಿ ದಳದವರನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಕೇಂದ್ರಗಳಿಲ್ಲ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ 200ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಗೊಳಿಸಲಾಗಿದ್ದು, ಪೊಲೀಸ್ ಭದ್ರತೆ ಮತ್ತು ಆರೋಗ್ಯ ಸಹಾಯಕರನ್ನು ನೇಮಕ ಮಾಡ ಲಾಗಿದೆ. ಜಿಲ್ಲಾ ಕೇಂದ್ರದಿಂದ ಎಲ್ಲಾ ತಾಲೂಕು ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಬಂಡಲ್‍ಗಳು ವಿತರಿಸಿದ್ದು, ತಾಲೂಕು ಖಜಾನೆಗಳಲ್ಲಿ ಭದ್ರ ಪಡಿಸಲಾಗಿದೆ. ವೇಳಾಪಟ್ಟಿ ಪ್ರಕಾರ ಪೊಲೀಸ್ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಮಾರ್ಗಾ ಧಿಕಾರಿಗಳ ಮೂಲಕ ಪ್ರಶ್ನೆ ಪತ್ರಿಕೆ ಬಂಡಲ್ ಗಳನ್ನು ತಲುಪಿಸಲಾಗುವುದು. ಜಿಲ್ಲಾ ಹಂತದಿಂದ 4 ಸಂಚಾರಿ ಜಾಗೃತಿ ದಳ ರಚಿಸಲಾಗಿದೆ. ಕೆಎಸ್‍ಆರ್‍ಟಿಸಿಯಿಂದ ಪ್ರವೇಶ ಪತ್ರ ತೋರಿಸಿ ಪರೀಕ್ಷಾ ಕೇಂದ್ರಕ್ಕೆ ಉಚಿತ ಪ್ರಯಾಣ ಮಾಡಲು ವ್ಯವಸ್ಥೆ ಮಾಡಲಾಗಿದೆ. ಆಲೂರು ಮತ್ತು ಸಕಲೇಶಪುರ ತಾಲೂಕುಗಳಲ್ಲಿ ಪರೀಕ್ಷೆ ಬರೆ ಯುವ ವಿದ್ಯಾರ್ಥಿಗಳಿಗೆ ಸುಗಮ ಸಂಚಾರಕ್ಕೆ ಅರಣ್ಯ ಇಲಾಖೆಯಿಂದ ರಕ್ಷಣೆ ಕೋರಲಾ ಗಿದೆ ಎಂದು ತಿಳಿಸಿದರು.

Translate »