ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ
ಚಾಮರಾಜನಗರ

ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ

July 20, 2021

ಚಾಮರಾಜನಗರ, ಜು.19(ಎಸ್‍ಎಸ್)- ಜಿಲ್ಲೆಯಲ್ಲಿ ಸೋಮವಾರ ಎಸ್‍ಎಸ್ ಎಲ್‍ಸಿ ಪರೀಕ್ಷೆಯು ಯಾವುದೇ ಗೊಂದಲ ಗಳು ಇಲ್ಲದೆ ಸುಸೂತ್ರವಾಗಿ ನಡೆಯಿತು. ಶೇ. 99.73ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಪರೀಕ್ಷೆಯ ಮೊದಲ ದಿನವಾದ ಸೋಮವಾರ ಕೋರ್ ವಿಷಯಗಳಾದ ವಿಜ್ಞಾನ, ಗಣಿತ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯಿತು. ಈ ವಿಷಯಗಳಿಗೆ ಜಿಲ್ಲೆಯಲ್ಲಿ ಒಟ್ಟು 11,963 ವಿದ್ಯಾರ್ಥಿಗಳು ಪರೀಕ್ಷೆಗೆ ತೆಗೆದುಕೊಂಡಿದ್ದರು. ಈ ಪೈಕಿ 6,226 ಬಾಲಕರು, 5,705 ವಿದ್ಯಾರ್ಥಿ ಗಳು ಸೇರಿ ಒಟ್ಟು 11,931 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 32 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಅನಾರೋಗ್ಯದ ಕಾರಣದಿಂದ ಮೂವರು ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಟಿ.ಜವರೇಗೌಡ ‘ಮೈಸೂರು ಮಿತ್ರ’ನಿಗೆ ತಿಳಿಸಿದರು.

ಇಂದಿನ ಪರೀಕ್ಷೆಯನ್ನು ಚಾಮರಾಜನಗರ ತಾಲೂಕಿನಲ್ಲಿ 3,987 ವಿದ್ಯಾರ್ಥಿಗಳು ತೆಗೆದು ಕೊಂಡಿದ್ದರು. ಈ ಪೈಕಿ 3,975 ವಿದ್ಯಾರ್ಥಿ ಗಳು ಪರೀಕ್ಷೆಗೆ ಹಾಜರಾಗಿದ್ದು (ಶೇ.99.70) 12 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಗುಂಡ್ಲುಪೇಟೆ ತಾಲೂಕಿನಲ್ಲಿ 2,753 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದರು. ಇದರಲ್ಲಿ 2,747 ವಿದ್ಯಾರ್ಥಿ ಗಳು ಹಾಜರಾಗಿದ್ದರು. (ಶೇ.99.78) 6 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಹನೂರು ತಾಲೂಕಿನಲ್ಲಿ 2,188 ವಿದ್ಯಾರ್ಥಿ ಗಳು ಪರೀಕ್ಷೆ ತೆಗೆದುಕೊಂಡಿದ್ದರು. ಇದ ರಲ್ಲಿ 2,182 ವಿದ್ಯಾರ್ಥಿಗಳು ಹಾಜರಾಗಿ ದ್ದಾರೆ. (ಶೇ.99.73) 6 ವಿದ್ಯಾರ್ಥಿಗಳು ಪರೀಕ್ಷೆ ಗೈರು ಹಾಜರಾಗಿದ್ದರು.

ಕೊಳ್ಳೇಗಾಲ ತಾಲೂಕಿನಲ್ಲಿ 2,127 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದರು. ಈ ಪೈಕಿ 2,120 ವಿದ್ಯಾರ್ಥಿ ಗಳು ಹಾಜರಾಗಿದ್ದಾರೆ. (ಶೇ.99.67) ಉಳಿದ 7 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಯಳಂದೂರು ತಾಲೂಕಿನಲ್ಲಿ 908 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿ ದ್ದರು. ಇದರಲ್ಲಿ 907 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. (ಶೇ.99.73) ಓರ್ವ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿಲ್ಲ.

ಇಂದಿನ ಪರೀಕ್ಷೆಗೆ ಗೈರು ಹಾಜರಾಗಿದ್ದ 32 ವಿದ್ಯಾರ್ಥಿಗಳಲ್ಲಿ 18 ಬಾಲಕರು, 14 ಬಾಲಕಿಯರಾಗಿದ್ದಾರೆ. ಅನಾರೋಗ್ಯ ಕಾರಣದಿಂದ ಮೂವರು ಬಾಲಕರು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು.

ತಪಾಸಣೆ: ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ ಪರೀಕ್ಷಾರ್ಥಿಗಳ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಕೇಂದ್ರ ಗಳಲ್ಲಿ ನೋಡಿಕೊಳ್ಳಲಾಯಿತು. ಮೊದಲೇ ನಿಗದಿಪಡಿಸಿದ್ದ ಚೌಕಾದಲ್ಲಿ ವಿದ್ಯಾರ್ಥಿ ಗಳು ಕ್ಯೂ ನಿಂತರು. ನಂತರ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ರೀನಿಂಗ್ ಮೂಲಕ ತಪಾಸಣೆಗೆ ಒಳಪಡಿಸಿಕೊಂಡು ಅದನ್ನು ದಾಖಲಿಸಿಕೊಳ್ಳಲಾಯಿತು. ನಂತರ ಕೈಗಳಿಗೆ ಸ್ಯಾನಿಟೈಸರ್ ಹಾಕಲಾಯಿತು. ಇದಾದ ಬಳಿಕವಷ್ಟೇ ವಿದ್ಯಾರ್ಥಿಗಳು ತಮಗೆ ನಿಯೋ ಜಿಸಿದ್ದ ಪರೀಕ್ಷಾ ಕೊಠಡಿಗೆ ತೆರಳಿದರು.

ಶಾಸಕ, ಡಿಸಿ ಭೇಟಿ: ಶಾಸಕ ಸಿ.ಪುಟ್ಟರಂಗ ಶೆಟ್ಟಿ ಹಾಗೂ ಜಿಲ್ಲಾಧಿಕಾರಿ ಡಾ.ಎಂ. ಆರ್.ರವಿ ಅವರು ವಿವಿಧ ಪರೀಕ್ಷಾ ಕೇಂದ್ರ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಶುಭಕೋರಿ, ಯಾವುದೇ ರೀತಿಯ ಭಯ ಇಲ್ಲದೆ ಚೆನ್ನಾಗಿ ಪರೀಕ್ಷೆ ಬರೆಯುವಂತೆ ಸೂಚಿಸಲಾಯಿತು.

Translate »