ನಿಗದಿತ ಸಮಯಕ್ಕೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ
ಮೈಸೂರು

ನಿಗದಿತ ಸಮಯಕ್ಕೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ

February 23, 2020

ವಿದ್ಯಾರ್ಥಿಗಳು, ಪೋಷಕರಿಗೆ ಅನುಮಾನ ಬೇಡ: ಸುರೇಶ್‍ಕುಮಾರ್ ಸ್ಪಷ್ಟನೆ
ಬೆಂಗಳೂರು, ಫೆ. 22(ಕೆಎಂಶಿ)- ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಬಗ್ಗೆ ಮಕ್ಕಳು ಮತ್ತು ಪೋಷಕರು ಯಾವುದೇ ಗೊಂದಲ ಮತ್ತು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ.

ಹಿಂದೆ ನಡೆದುಕೊಂಡು ಬಂದಂತೆಯೇ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಯಶಸ್ವಿಯಾಗಿ ಪರೀಕ್ಷೆಯನ್ನು ನಡೆಸು ತ್ತೇವೆ ಎನ್ನುವ ಭರವಸೆಯನ್ನು ವಿದ್ಯಾರ್ಥಿಗಳು ಮತ್ತು ಪೋಷಕ ರಿಗೆ ನೀಡಿದ್ದಾರೆ. ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಗೊಂದಲಗಳು ಮಾ.27ರಿಂದ ಆರಂಭವಾಗುವ ಮುಖ್ಯ ಪರೀಕ್ಷೆಯಲ್ಲೂ ಇದೇ ಪುನರಾ ವರ್ತನೆಯಾಗಬಹುದೇ ಎಂಬ ಆತಂಕ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಉಂಟಾ ಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ಫೇಸ್‍ಬುಕ್‍ನಲ್ಲಿ ಮಾತನಾಡಿ ಸ್ಪಷ್ಟೀಕರಣ ನೀಡಿರು ವುದಲ್ಲದೆ, ಮಕ್ಕಳಲ್ಲಿರುವ ಆತಂಕ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನುವ ಕುರಿತು ಎಲ್ಲೆಡೆ ವರದಿಯಾಗಿದ್ದು, ಈ ಪರೀಕ್ಷೆ ಮುಂದೂಡಲಾಗುತ್ತದೆ ಎನ್ನುವ ಆತಂಕ ಮಕ್ಕಳಲ್ಲಿ ಎದುರಾಗಿದೆ. ಆದರೆ ಆಯಾ ದಿನಾಂಕಗಳಲ್ಲೇ ಆಯಾ ಪರೀಕ್ಷೆಗಳು ನಡೆಯುತ್ತವೆ.

ಪೂರ್ವ ಸಿದ್ಧತಾ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಗೂ ವ್ಯತ್ಯಾಸವಿದ್ದು, ಮುಖ್ಯ ಪರೀಕ್ಷೆಯ ಮಾದರಿ ಹೇಗಿರುತ್ತದೆ ಎನ್ನುವುದನ್ನು ತಿಳಿಸಲು ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಯು ವುದು ಮುಖ್ಯೋಪಾಧ್ಯಾಯರ ನೈತಿಕ ಜವಾಬ್ದಾರಿ. ಮುಖ್ಯ ಪರೀಕ್ಷೆ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದರು. ಹಿಂದೆ ನಡೆದುಕೊಂಡು ಬಂದಂತೆಯೇ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೂಡ ನಡೆಯಲಿದ್ದು, ಯಶಸ್ವಿಯಾಗಿ ಪರೀಕ್ಷೆಯನ್ನು ನಡೆಸುತ್ತೇವೆ ಎನ್ನುವ ಭರವಸೆ ನೀಡುತ್ತಿದ್ದೇನೆ. ವಿಶೇಷವಾಗಿ ಮಕ್ಕಳು ಮತ್ತು ಪೋಷಕರು ಯಾವುದೇ ಗೊಂದಲ, ಆಂತಕಕ್ಕೆ ಒಳಗಾಗುವುದು ಬೇಡ ಎಂದು ಹೇಳಿದ್ದಾರೆ.

Translate »