ಮಾ.21ರಿಂದ SSLC ಪರೀಕ್ಷೆ
ಮೈಸೂರು

ಮಾ.21ರಿಂದ SSLC ಪರೀಕ್ಷೆ

March 19, 2019

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಇದೇ ಮಾರ್ಚ್21ರಿಂದ ಏಪ್ರಿಲ್ 4ರವರೆಗೆ ನಡೆ ಯಲಿವೆ. ರಾಜ್ಯಾದ್ಯಂತ ಒಟ್ಟು 2,847 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆ ಯಲಿದ್ದಾರೆ. ರಾಜ್ಯದ ಒಟ್ಟು 5, 202 ಸರ್ಕಾರಿ, 3,244 ಅನುದಾನಿತ ಹಾಗೂ 6,004 ಅನುದಾನರಹಿತ ಶಾಲೆಗಳು ಸೇರಿ 14,450 ಶಾಲೆಗಳ ವಿದ್ಯಾರ್ಥಿ ಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿ ದ್ದಾರೆ ಎಂದು ಶಿಕ್ಷಣ ಇಲಾಖೆ ಆಯುಕ್ತ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಸಿ.ಕೆ.ಜಾಫರ್ ಹೇಳಿದ್ದಾರೆ.

ಇಂದು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಕಳೆದ ವರ್ಷಕ್ಕೆ ಹೋಲಿ ಸಿದರೆ ಈ ವರ್ಷ ವಿದ್ಯಾರ್ಥಿಗಳ ಸಂಖ್ಯೆ 3,578ರಷ್ಟು ಹೆಚ್ಚಿದೆ. ಪ್ರಸಕ್ತ ಸಾಲಿನಲ್ಲಿ 4,651 ವಿಕಲಚೇತನ ಮಕ್ಕಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 1,451 ವಿದ್ಯಾರ್ಥಿಗಳಿಗೆ ಭಾಷಾ ವಿನಾಯಿತಿ ನೀಡಲಾಗಿದೆ ಎಂದರು. 480 ವಿದ್ಯಾರ್ಥಿ ಗಳಿಗೆ ಗಣಿತ ಮತ್ತು ವಿಜ್ಞಾನದ ಬದ ಲಿಗೆ ಪರ್ಯಾಯ ವಿಷಯಗಳನ್ನು ಬರೆ ಯಲು ಅವಕಾಶ ಕಲ್ಪಿಸಲಾಗಿದೆ. ಹಾಜ ರಾತಿ ಕೊರತೆಯಿಂದ 10,575 ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲು ಅನರ್ಹರಾಗಿ ದ್ದಾರೆ ಎಂದರು. ರಾಜ್ಯದ 2,487 ಪರೀಕ್ಷಾ ಕೇಂದ್ರಗಳ ಪೈಕಿ 1,057 ಕ್ಲಸ್ಟರ್ ರಹಿತ ಹಾಗೂ 1689 ಕ್ಲಸ್ಟರ್ ಕೇಂದ್ರಗಳಿವೆ. ಖಾಸಗಿ ಅಭ್ಯರ್ಥಿ ಗಳಿಗೆ ಜಿಲ್ಲಾ ಕೇಂದ್ರಗಳಲ್ಲಿ 92 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸ್ಥಾನಿಕ ಜಾಗೃತ ದಳವನ್ನು ಒಳಗೊಂಡಂತೆ ತಾಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ವಿಚಕ್ಷಣ ದಳ ನಿಯೋಜಿಸಲಾಗುತ್ತದೆ ಎಂದರು. ಪ್ರಶ್ನೆ ಪತ್ರಿಕೆಗಳ ಸುರಕ್ಷತೆಗೆ ಪ್ರತಿ ಜಿಲ್ಲಾ ಖಜಾನೆಗಳಲ್ಲಿ ಸಿಸಿಟಿವಿ ಮೂಲಕ ನಿಗಾ ಇಡಲಾಗಿದೆ. ಪರೀಕ್ಷಾ ಕಾರ್ಯನಿರ್ವಹಿಸುವ ಎಲ್ಲ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸ್ಮಾರ್ಟ್ ವಾಚ್ ಹಾಗೂ ಮೊಬೈಲ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಕಲು ಪ್ರತಿ (ಜೆರಾಕ್ಸ್) ಅಂಗಡಿಗಳನ್ನು ಮುಚ್ಚಲು ನಿರ್ದೇಶಿಸಲಾಗಿದೆ. ಮಾ.23ರಿಂದ ಪಿಯುಸಿ ಹಾಗೂ ಏ.10ರಿಂದ ಎಸ್‍ಎಸ್ ಎಲ್‍ಸಿ ಉತ್ತರಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಏ.10ರಿಂದ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 230 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಮೌಲ್ಯಮಾಪನದ ನಂತರ ಅಂಕಗಳನ್ನು ನೇರವಾಗಿ ಅಂತರ್ಜಾಲ ಆಧರಿತ ತಂತ್ರಾಂಶದ ಮೂಲಕ ಮೌಲ್ಯಮಾಪನ ಕೇಂದ್ರಗಳಿಂದ ನೇರವಾಗಿ ಮಂಡಳಿಯ ಸರ್ವರ್‍ಗೆ ವರ್ಗಾ ಯಿಸಲಾಗುವುದು. ಫಲಿತಾಂಶವನ್ನು ವಿದ್ಯಾರ್ಥಿಗಳ, ಪೆÇೀಷಕರ ಮೊಬೈಲ್‍ಗೆ ಎಸ್‍ಎಂಎಸ್ ಮೂಲಕ ತಲುಪಿಸಲಾಗುವುದು. ಫಲಿತಾಂಶವನ್ನು ಶಾಲಾ ಲಾಗಿನ್‍ನಲ್ಲಿ ಪ್ರಕಟಿಸಲಾಗುವುದು.

Translate »