ಇಂದಿನಿಂದ SSLC ಪರೀಕ್ಷೆ: ಧಾರ್ಮಿಕ ಭಾವನೆ ಬಿಂಬಿಸುವ ವಸ್ತçಕ್ಕೆ ಅವಕಾಶವಿಲ್ಲ
ಮೈಸೂರು

ಇಂದಿನಿಂದ SSLC ಪರೀಕ್ಷೆ: ಧಾರ್ಮಿಕ ಭಾವನೆ ಬಿಂಬಿಸುವ ವಸ್ತçಕ್ಕೆ ಅವಕಾಶವಿಲ್ಲ

March 28, 2022

ಬೆಂಗಳೂರು, ಮಾ.೨೭- ಸೋಮ ವಾರದಿಂದ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ. ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಶಿಕ್ಷಣ ಇಲಾಖೆ ಪಾಲನೆ ಮಾಡ ಲಿದೆ. ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರದೊಳಗೆ ಹೋಗುವಂತಿಲ್ಲ.
೧೫,೩೮೭ ಶಾಲೆಗಳ ೮,೭೩,೮೪೬ ವಿದ್ಯಾರ್ಥಿ ಗಳು ಈ ಬಾರಿಯ ಪರೀಕ್ಷೆ ಬರೆಯಲಿದ್ದಾರೆ. ಹಿಜಾಬ್ ಧರಿಸಿದವರನ್ನು ಪರೀಕ್ಷಾ ಕೇಂದ್ರಕ್ಕೆ ಬಿಡದಿರಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಾತ ನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸೋಮವಾರ ಪರೀಕ್ಷೆ ಆರಂಭವಾಗಲಿದೆ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಈಗಾ ಗಲೇ ಆಯಾ ಶಾಲೆಗಳ ಮುಖ್ಯಸ್ಥರು ಪಾಲಿಸುತ್ತಿ ದ್ದಾರೆ. ಶಾಲೆಯ ಕಾಂಪೌAಡ್ ಒಳಗೆ ಹಿಜಾಬ್ ಧರಿಸಿ ಬರಬಹುದು. ಆದರೆ ಕೊಠಡಿಯೊಳಗೆ ಧರಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿದ್ಯಾರ್ಥಿಗಳು ಪರೀಕ್ಷೆ ಯನ್ನು ಯಾವುದೇ
ಆತಂಕವಿಲ್ಲದೆ, ಮುಕ್ತವಾಗಿ, ಧೈರ್ಯವಾಗಿ ಬರೆಯಬೇಕು” ಎಂದು ಕರೆ ನೀಡಿದರು.

ಪರೀಕ್ಷೆ ಬರೆಯುವವರ ವಿವರ: ೮,೭೩,೮೪೬ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ೪,೫೨,೭೩೨ ವಿದ್ಯಾರ್ಥಿಗಳು, ೪,೨೧,೧೧೦ ವಿದ್ಯಾರ್ಥಿನಿಯರು ಮತ್ತು ೪ ತೃತೀಯ ಲಿಂಗಿಗಳು. ೩,೪೪೪ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ೪೫,೨೮೯ ಪರೀಕ್ಷಾ ಕೊಠಡಿಗಳು, ೩,೪೪೪ ಮುಖ್ಯ ಅಧೀಕ್ಷಕರು, ೩೭೭ ಉಪ ಮುಖ್ಯ ಅಭಿರಕ್ಷಕರು, ೪೯,೮೧೭ ಕೊಠಡಿ ಮೇಲ್ವಿಚಾರಕರನ್ನು ಪರೀಕ್ಷಾ ಕಾರ್ಯಗಳಿಗಾಗಿ ನಿಯೋಜನೆ ಮಾಡಲಾಗಿದೆ.

ಮರು ಪರೀಕ್ಷೆ ಮಾಡುವುದಿಲ್ಲ: ಯಾವುದೇ ಉದ್ದೇಶದಿಂದ ಪರೀಕ್ಷೆಗೆ ಗೈರು ಹಾಜರಿ ಆದವರಿಗೆ ಮರು ಪರೀಕ್ಷೆ ಮಾಡುವುದಿಲ್ಲ. ಬದಲಿಗೆ ಪೂರಕ ಪರೀಕ್ಷೆ ಬರೆಯ ಬಹುದು ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಈ ಮೂಲಕ ಪರೀಕ್ಷಾ ಕೇಂದ್ರದೊಳಗೆ ಹಿಜಾಬ್ ಧರಿಸಲು ಅವಕಾಶ ಕೋರಿ ಪ್ರತಿಭಟನೆ ನಡೆಸಲು ಪರೀಕ್ಷೆಗೆ ಗೈರಾದರೆ ಅಂತಹ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ನಡೆಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಶಿಕ್ಷಣ ಇಲಾಖೆಯಿಂದ ಆದೇಶ: ಇನ್ನು ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಮವಸ್ತçವನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಕುರಿತು ವಿ. ಶ್ರೀನಿವಾಸಮೂರ್ತಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಇವರು ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ
ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ ಹಿನ್ನೆಲೆ ಯಲ್ಲಿ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಸಲು ಅವಕಾಶ ನೀಡ ಲಾಗಿದೆ. ಪರೀಕ್ಷೆಗಳು ನಡೆಯುವ ದಿನಗಳಂದು ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣ ಸಬಹು ದಾಗಿದೆ. ಈ ಕುರಿತು ಈಗಾಗಲೇ ಚಾಲಕ, ನಿರ್ವಾಹಕರಿಗೂ ಸಹ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ವಾಪಸ್ ಆಗುವಾಗ ಹಾಲ್ ಟಿಕೆಟ್ ತೋರಿಸಿ ಉಚಿತ ವಾಗಿ ಪ್ರಯಾಣ ಮಾಡಬಹುದಾಗಿದೆ.

ಸಹಾಯವಾಣ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಗೊಂದಲಗಳು ಉಂಟಾದರೆ ಸಹಾಯ ಮಾಡಲು ಸಹಾಯವಾಣ ಆರಂಭಿಸ ಲಾಗಿದೆ. ೦೮೦-೨೩೩೧೦೦೭೫/ ೭೬ ಸಂಖ್ಯೆಗೆ ವಿದ್ಯಾರ್ಥಿಗಳು ಕರೆ ಮಾಡುವ ಮೂಲಕ ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದು.
ಕೋವಿಡ್ ಪ್ರಕರಣಗಳು ಕಡಿಮೆಯಾಗಿರುವ ಕಾರಣ ಮಾಸ್ಕ್ ಧರಿಸದಿದ್ದರೂ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲು ತೀರ್ಮಾನಿಸಲಾಗಿದೆ. ಮಾರ್ಚ್ ೨೮ರಿಂದ ಏಪ್ರಿಲ್ ೧೧ರ ತನಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ.

Translate »