ಮೇ ೨ನೇ ವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ
ಮೈಸೂರು

ಮೇ ೨ನೇ ವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ

April 12, 2022

ಬೆAಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯಗೊಂಡಿದೆ. ಮಂಗಳವಾರದಿAದ ಕೀ ಉತ್ತರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕ ಟಿಸಲಾಗುತ್ತದೆ. ಮೇ ೨ನೇ ವಾರ ಫಲಿತಾಂಶ ಪ್ರಕಟವಾಗಲಿದೆ. ಸೋಮ ವಾರ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ಮುಕ್ತಾಯಗೊಂಡಿದೆ. ನಾಳೆಯಿಂದ ಕೀ ಉತ್ತರಗಳನ್ನು ಎಸ್‌ಎಸ್‌ಎಲ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸ ಲಾಗುತ್ತದೆ ಎಂದು ಹೇಳಿದ್ದಾರೆ. ಮೇ ೨ನೇ ವಾರದಲ್ಲಿ ಫಲಿ ತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ. ಜೂನ್ ಕೊನೆ ವಾರದಲ್ಲಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಸಚಿವರು ಟ್ವೀಟ್‌ನಲ್ಲಿ ಮಾಹಿತಿ ನೀಡಿದ್ದಾರೆ. ಮಾರ್ಚ್ ೨೮ರಿಂದ ಏ.೧೧ರ ತನಕ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಕಳೆದ ೨ ವರ್ಷಗಳ ಕಾಲ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕೋವಿಡ್ ಇನ್ನಿಲ್ಲದಂತೆ ಕಾಡಿತ್ತು. ಈ ವರ್ಷ ಪರೀಕ್ಷೆ ಅವಧಿಯಲ್ಲಿ ಯಾವುದೇ ವಿದ್ಯಾರ್ಥಿಗೆ ಸೋಂಕು ಕಂಡು ಬಂದಿಲ್ಲ. ಉಡುಪಿಯಲ್ಲಿ ಆರಂಭವಾಗಿ ರಾಷ್ಟçಮಟ್ಟ ದಲ್ಲಿ ಸುದ್ದಿಯಾದ ಹಿಬಾಜ್ ವಿವಾದ ಸಹ ಪರೀಕ್ಷೆಗೆ ಯಾವುದೇ ರೀತಿಯ ಅಡ್ಡಿ ಉಂಟು ಮಾಡಿಲ್ಲ ಎಂದು ತಿಳಿಸಿದ್ದಾರೆ.

ಸಮವಸ್ತç ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ವಿದ್ಯಾರ್ಥಿಗಳು ಆ ನಿಯಮಗಳನ್ನು ಪಾಲನೆ ಮಾಡಿದ್ದಾರೆ. ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಸಚಿವ ಬಿ.ಸಿ. ನಾಗೇಶ್, ಮಾ.೨೮ರಂದು ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರಾಜ್ಯಾದ್ಯಂತ ಸುಸೂತ್ರವಾಗಿ ಮುಕ್ತಾಯವಾಗಿದೆ. ಒಂದು ಪರೀಕ್ಷಾ ಕೇಂದ್ರದಲ್ಲಿ ಮಾತ್ರ ಅಕ್ರಮ ವರದಿಯಾಗಿದೆ ಎಂದರು. ಅಕ್ರಮ ವರದಿಯಾದ ಕಡೆ ಕ್ರಮ ಕೈಗೊಳ್ಳಲಾಗಿದೆ. ಮೊದಲ ಬಾರಿಗೆ ಪರೀಕ್ಷಾ ಹಾಜರಾತಿ ಪ್ರಮಾಣ ಶೇ. ೯೮ಕ್ಕಿಂತ ಹೆಚ್ಚಿದೆ. ಏಪ್ರಿಲ್ ೧೨ರಿಂದ ಕೀ ಉತ್ತರ, ಆಕ್ಷೇಪಣೆ ಕರೆಯುವುದು ಸೇರಿದಂತೆ ಇತರ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದರು.

 

 

Translate »