ಬೆAಗಳೂರು, ಮೇ ೧೩(ಕೆಎಂಶಿ)- ಮಾರ್ಚ್-ಏಪ್ರಿಲ್ ಮಾಹೆಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇದೇ ೧೯ ರಂದು ಪ್ರಕಟಗೊಳ್ಳಲಿದೆ.
ಅಂದು ಬೆಳಗ್ಗೆ ೧೦.೩೦ರ ನಂತರ ವಿದ್ಯಾರ್ಥಿಗಳು ವೆಬ್‌ಸೈಟ್ ನಲ್ಲಿ ಫಲಿತಾಂಶ ಪಡೆದುಕೊಳ್ಳಬಹುದು. ಕಳೆದ ಎರಡು ವರ್ಷಗಳಿಂದ ಕೋವಿಡ್-೧೯ನಿಂದ ವಿದ್ಯಾರ್ಥಿಗಳು ಶಾಲೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಪಾಠ ಕೇಳಲು ಸಾಧ್ಯವಾಗಿಲ್ಲ. ಈ ಕಾರಣದಿಂದ ಪ್ರಸಕ್ತ ವರ್ಷವೂ ಮೂರು ವಿಷಯಗಳಿಗೆ ಸಂಬAಧಿಸಿದAತೆ ಶೇಕಡ ೧೦ ರಷ್ಟು ಗ್ರೇಸ್‌ಮಾರ್ಕ್ ನೀಡಿ, ವಿದ್ಯಾರ್ಥಿ ಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ.