ಇಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ
ಮೈಸೂರು

ಇಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ

April 30, 2019

ಬೆಂಗಳೂರು (ಏ. 29):ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ನಾಳೆ (ಏ. 30) ಪ್ರಕಟವಾಗಲಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ತಿಳಿಸಿದ್ದಾರೆ.

ನಾಳೆ (ಏ. 30) ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ನಂತರ ಪ್ರೌಢ ಶಿಕ್ಷಣ ಮಂಡಳಿಯ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 1 ರಂದು ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳು karresults.nic.in  ಅಥವಾ kseeb.kar.nic.in ವೆಬ್‍ಸೈಟ್ ಗಳಿಗೆ ಲಾಗ್‍ಇನ್ ಆಗಿ ಫಲಿತಾಂಶ ಪಡೆಯಬಹುದು. ಅಲ್ಲದೇ ಉತ್ತೀರ್ಣರಾದ ವಿದ್ಯಾರ್ಥಿಗಳ ಪೋಷಕರ ಮೊಬೈಲ್‍ಗೆ ಎಸ್‍ಎಂಎಸ್ ಮೂಲಕವೂ ಫಲಿತಾಂಶ ರವಾನಿಸಲಾಗುವುದು ಎಂದು ಅವರು ಹೇಳಿದರು.

ಈ ಬಾರಿ ಮೌಲ್ಯಮಾಪನ ಪ್ರಕ್ರಿಯೆ ಡಿಜಿಟಲೀಕರಣಗೊಂಡಿರುವ ಕಾರಣ ಬೇಗ ಫಲಿತಾಂಶ ಹೊರ ಬೀಳುತ್ತಿದೆ. ಇಂದು ಬೆಳಿಗ್ಗೆ ಮೇ 2 ರಂದು ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಲಾಗಿತ್ತಾದರೂ ಸಂಜೆ 5 ಗಂಟೆಗೆ ಪ್ರೌಢ ಶಿಕ್ಷಣ ಮಂಡಳಿ ಸಭೆ ನಂತರ ನಾಳೆಯೇ ಫಲಿತಾಂಶ ಪ್ರಕಟಿಸುವ ನಿರ್ಧಾರ ಕೈಗೊಳ್ಳಲಾಯಿತು.

ಈ ಬಾರಿ 8,41,661 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದರು. ಮಾ. 21 ರಿಂದ ಏ. 4ರವರೆಗೆ ಪರೀಕ್ಷೆಗಳು ನಡೆದಿದ್ದವು. ಏ. 24ಕ್ಕೆ ಮೌಲ್ಯಮಾಪನ ಪೂರ್ಣಗೊಂಡಿತ್ತು.

Translate »