ಇಂದಿನಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು
ಮೈಸೂರು

ಇಂದಿನಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು

June 21, 2018

ಮೈಸೂರು: ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು ನಾಳೆ (ಜೂ. 21)ಯಿಂದ 28ರವರೆಗೆ ನಡೆಯಲಿವೆ. ಮೈಸೂರಿನ ಜಯಲಕ್ಷ್ಮಿಪುರಂನ ವಿವೇಕಾನಂದ ಪ್ರೌಢಶಾಲೆ, ಸತ್ಯಸಾಯಿ ಪ್ರೌಢಶಾಲೆ, ಪೀಪಲ್ಸ್ ಪಾರ್ಕ್‍ನ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು, ಎನ್‍ಆರ್ ಮೊಹಲ್ಲಾದ ಸರ್ಕಾರಿ ಹೈಸ್ಕೂಲ್, ಗಾಯಿತ್ರಿಪುರಂನ ಶ್ರೀಕಂಠೇಶ್ವರ ಪ್ರೌಢ ಶಾಲೆ, ಸೇಂಟ್ ಆಂಟೋಣ ಹೈಸ್ಕೂಲ್, ನಜರ್‍ಬಾದಿನ ವಿಭಜಿತ ಮಹಾರಾಜ ಕಾಲೇಜು, ತಿಲಕನಗರದ ಫಾರೂಕಿಯಾ ಹೈಸ್ಕೂಲ್, ಸರಸ್ವತಿಪುರಂನ ಜೆಎಸ್‍ಎಸ್ ಬಾಲಕಿಯರ ಪ್ರೌಢಶಾಲೆ, ಚಾಮುಂಡಿಪುರಂನ ಸೇಂಟ್ ಮೇರಿಸ್ ಹೈಸ್ಕೂಲ್, ವಿದ್ಯಾರಣ್ಯಪುರಂನ ಟಿ.ಎಸ್. ಸುಬ್ಬಣ್ಣ, ಸಾರ್ವಜನಿಕ ಪ್ರೌಢಶಾಲೆ, ಕುವೆಂಪುನಗರದ ಸರ್ಕಾರಿ ಪ್ರೌಢಶಾಲೆ, ಜ್ಞಾನಗಂಗಾ ಪ್ರೌಢಶಾಲೆ, ಹಿನಕಲ್‍ನ ಚಿಕ್ಕಮ್ಮ ಪ್ರೌಢಶಾಲೆ ಹಾಗೂ ನಾಡನಹಳ್ಳಿಯ ವಿದ್ಯಾಜ್ಯೋತಿ ಪ್ರೌಢಶಾಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ.

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಮಾಡಲಾಗಿದ್ದು, ಉಪ ನಿರ್ದೇಶಕ ಮಮತ ಅವರು ಇಂದು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪೂರ್ವಸಿದ್ಧತಾ ಕಾರ್ಯದ ಪರಿಶೀಲನೆ ನಡೆಸಿದರು. ಪರೀಕ್ಷೆ ಹಿನ್ನೆಲೆಯಲ್ಲಿ ಜೂನ್ 21 ರಿಂದ 28ರವರೆಗೆ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಸಿಆರ್‍ಪಿಸಿ ಸೆಕ್ಷನ್ 144 ರೀತ್ಯಾ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಿರುವ ಮೈಸೂರುನಗರ ಪೊಲೀಸ್ ಕಮೀಷ್ನರ್ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ಅವರು, ಪರೀಕ್ಷಾರ್ಥಿಗಳು ಹಾಗೂ ಸಿಬ್ಬಂದಿ ಗಳನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸುಳಿಯದಂತೆ ಸೂಚನೆ ನೀಡಿದ್ದಾರೆ.

Translate »