ಚಾ.ನಗರ ಜಿಲ್ಲೆ ಜನರಿಗೂ ಎಸ್.ಟಿ.ಸೋಮಶೇಖರ್ ಅವರೇ ಬೇಕಂತೆ…?
ಮೈಸೂರು

ಚಾ.ನಗರ ಜಿಲ್ಲೆ ಜನರಿಗೂ ಎಸ್.ಟಿ.ಸೋಮಶೇಖರ್ ಅವರೇ ಬೇಕಂತೆ…?

December 3, 2020

ಮದ್ದೂರು,ಡಿ.2-ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ರಾಗಿ ಅಭೂತಪೂರ್ವ ವಾಗಿ ಕಾರ್ಯನಿರ್ವ ಹಿಸುತ್ತಿರುವ ಎಸ್.ಟಿ. ಸೋಮಶೇಖರ್ ಅವ ರಿಗೆ ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಯನ್ನೂ ಕೂಡ ಕೊಡಬೇಕೆಂದು ಅಲ್ಲಿನ ಜನರು ಆಗ್ರಹಿಸುತ್ತಿ ದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಮದ್ದೂರಿನಲ್ಲಿ ನಡೆದ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಏಳೆಂಟು ತಿಂಗ ಳಿಂದ ಎಸ್.ಟಿ.ಸೋಮಶೇಖರ್ ಅವರು, ಮೈಸೂರಿನ ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಕೊಳ್ಳು ವಂತೆ ಮಾಡಿದ್ದಾರೆ. ಅದು ಮಾತ್ರವಲ್ಲದೆ ಪಕ್ಷದಲ್ಲಿಯೂ ಅನೇಕ ಕಾರ್ಯಚಟುವಟಿಕೆಗಳನ್ನು ನಡೆಸುತ್ತಾ, ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರ ಮನಸ್ಸನ್ನು ಗೆದ್ದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಜಿಲ್ಲೆಯ ಎಲ್ಲಾ ತಾಲೂಕುಗಳ ಲ್ಲಿಯೂ ಸಂಚರಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಭೆಗಳನ್ನು ನಡೆಸುವ ಮೂಲಕ ಜನ ಮೆಚ್ಚುಗೆ ಗಳಿಸಿರುವ ಸೋಮಶೇಖರ್ ಅವರ ಕಾರ್ಯವೈಖರಿಯನ್ನು ಗಮನಿಸಿರುವ ಚಾಮರಾಜನಗರ ಜಿಲ್ಲೆಯ ಜನತೆ ಮೈಸೂರು ಜೊತೆಗೆ ತಮ್ಮ ಜಿಲ್ಲೆಯ ಉಸ್ತುವಾರಿಯನ್ನೂ ಸೋಮಶೇಖರ್ ಅವರಿಗೇ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ ಎಂದು ಅಶೋಕ್ ಹೇಳಿದರು.

 

Translate »