ಅಧಿಕಾರಿಗಳೊಂದಿಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಭೆ, ಚರ್ಚೆ
ಮೈಸೂರು, ಜೂ.29(ಆರ್‍ಕೆಬಿ)- ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮ ಶೇಖರ್ ಜು.1ರಂದು ಬುಧವಾರ ಮೈಸೂರು, ಕೊಡಗು, ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದಾರೆ. ಜು.1ರಂದು ಬೆಳಗ್ಗೆ 9 ಗಂಟೆಗೆ ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕೋವಿಡ್-19 ಸಾಂಕ್ರಾಮಿಕ ವೈರಸ್ ನಿಯಂ ತ್ರಣದ ಬಗ್ಗೆ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಬೆಳಗ್ಗೆ 9.30ಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರ ಕರ್ತರ ಸಂಘ ಆಯೋಜಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗ ವಹಿಸುವರು. ಬೆಳಗ್ಗೆ 11.30ಕ್ಕೆ ಹೊಸ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ತಮ್ಮ ಕಚೇರಿಯಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಅಧಿಕಾರಿಗಳ ಸಭೆ ನಡೆಸುವರು.
ಮಧ್ಯಾಹ್ನ 12.30ಕ್ಕೆ ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಪಾಲಿಕೆ ಕೈಗೊಂಡಿ ರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುವರು. 1.30 ಗಂಟೆಗೆ ನಗರೋತ್ಥಾನ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡುವ ಬಗ್ಗೆ ಸಭೆ, ನಂತರ 3.30ಕ್ಕೆ ಚಾಮುಂಡಿಬೆಟ್ಟದಲ್ಲಿ ನೂತನವಾಗಿ ನಿರ್ಮಿಸ ಲಾಗುತ್ತಿರುವ ಅಂಗಡಿ ಮಳಿಗೆಗಳ ಪರಿಶೀಲನೆ ನಡೆಸುವರು. ಬಳಿಕ ರಸ್ತೆ ಮೂಲಕ ಕೊಡಗು ಜಿಲ್ಲೆಗೆ ತೆರಳಿ ಅಲ್ಲಿ ವಾಸ್ತವ್ಯ ಹೂಡುವರು. ಜು.2ರಂದು ಬೆಳಗ್ಗೆ 10.30ಕ್ಕೆ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಆಶಾ ಕಾರ್ಯಕರ್ತೆಯರಿಗೆ ಸಾಂಕೇತಿಕವಾಗಿ ಪ್ರೋತ್ಸಾಹಧನದ ಚೆಕ್ ವಿತರಿಸುವರು. ಮಧ್ಯಾಹ್ನ 12 ಗಂಟೆಗೆ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 2.30ಕ್ಕೆ ಕೊಡಗಿ ನಿಂದ ದಕ್ಷಿಣ ಕನ್ನಡ ಜಿಲ್ಲೆಗೆ (ಮಂಗಳೂರಿಗೆ) ರಸ್ತೆ ಮೂಲಕ ತೆರಳುವರು.