1865 ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ
ಹಾಸನ

1865 ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ

December 1, 2018

ಹಾಸನ: ನಗರದ ಹೊಸ ಬಸ್‍ನಿಲ್ದಾಣ ಬಳಿ 1865 ಕೋಟಿಗಳ ಮೊತ್ತದ ರಾಷ್ಟ್ರೀಯ ಹೆದ್ದಾರಿ ಯೋಜನೆ ಗಳಿಗೆ ಶನಿವಾರ ಶಂಕುಸ್ಥಾಪನಾ ಸಮಾರಂಭವನ್ನು ಹಮ್ಮಿಕೊಂಡಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ಶುಕ್ರ ವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಮಧ್ಯಾಹ್ನ 3 ಗಂಟೆಗೆ ಹೊಸ ಬಸ್‍ನಿಲ್ದಾಣ ಬಳಿ ನಡೆಯುವ ಕಾರ್ಯ ಕ್ರಮದಲ್ಲಿ ಬಿಳಿಕೆರೆ-ಹಾಸನ-ಬೇಲೂರು ಮೂರು ರಸ್ತೆಗಳ ಮೂರು ಪ್ಯಾಕೇಜ್‍ಗಳಿಗೆ ಶಂಕುಸ್ಥಾಪನೆ ನಡೆಯಲಿದೆ. ಅರಸೀಕೆರೆ- ಉಳಿಯಾರು- ಬಾಣವಾರ ರಸ್ತೆಯ ತುಮ ಕೂರು ರಸ್ತೆ, ಕದಬಳಿಯಿಂದ ಚನ್ನರಾಯ ಪಟ್ಟಣ ಬೈಪಾಸ್ ಮತ್ತು ಹಾಸನ್ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಒಟ್ಟಿಗೆ ಚಾಲನೆ ದೊರಕಲಿದೆ ಎಂದ ಒಟ್ಟು ಎಲ್ಲಾ ಸೇರಿ 1865 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ದೊರಕಲಿದೆ ಎಂದರು.

ಈ ಸಮಾರಂಭಕ್ಕೆ ರಸ್ತೆ ಸಾರಿಗೆ ಹೆದ್ದಾರಿ ಮತ್ತು ಜಲಸಾರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇ ಶ್ವರ್, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇ ಗೌಡ, ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್, ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಸಂಸದರಾದ ಮುದ್ದಹನುಮೇಗೌಡ, ಪ್ರತಾಪ್ ಸಿಂಹ, ಶಾಸಕರಾದ ಪ್ರೀತಮ್ ಜೆ.ಗೌಡ, ಕೆ.ಎಸ್. ಲಿಂಗೇಶ್, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್.ಬಾಲಕೃಷ್ಣ ಸೇರಿದಂತೆ ಇತರರು ಭಾಗವಹಿಸುವರು ಎಂದು ಹೇಳಿದರು.

Translate »