ರಾಜ್ಯದ ಎಲ್ಲಾ ಸರ್ಕಾರಿ ಮೆಡಿಕಲ್ ಕಾಲೇಜಲ್ಲಿ ಕ್ಯಾನ್ಸರ್ ಕೇಂದ್ರ ಆರಂಭ
ಮೈಸೂರು

ರಾಜ್ಯದ ಎಲ್ಲಾ ಸರ್ಕಾರಿ ಮೆಡಿಕಲ್ ಕಾಲೇಜಲ್ಲಿ ಕ್ಯಾನ್ಸರ್ ಕೇಂದ್ರ ಆರಂಭ

February 2, 2021

ಪರಿಷತ್‍ನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಘೋಷಣೆ
ಬೆಂಗಳೂರು, ಫೆ. 1(ಕೆಎಂಶಿ)- ರಾಜ್ಯದ ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕ್ಯಾನ್ಸರ್ ಕೇಂದ್ರ ತೆರೆಯಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿಧಾನಪರಿಷತ್ ನಲ್ಲಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಅ.ದೇವೇ ಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ತುಮಕೂರು, ವಿಜಯಪುರ, ಹಾಸನ, ಮಂಡ್ಯ ವೈದ್ಯಕೀಯ ಕಾಲೇಜಿನಲ್ಲಿ ಕ್ಯಾನ್ಸರ್ ಕೇಂದ್ರ ಪ್ರಾರಂಭಿಸಲು ಉದ್ದೇಶಿಸಿದ್ದು, ಉಳಿದ ಕಾಲೇಜುಗಳಲ್ಲೂ ಹಂತ ಹಂತವಾಗಿ ಕ್ಯಾನ್ಸರ್ ಕೇಂದ್ರ ಆರಂಭಿಸಲಾಗುವುದು ಎಂದರು. ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ವಿಭಾಗಾವಾರು ಕ್ಯಾನ್ಸರ್ ಆಸ್ಪತ್ರೆ ಆರಂಭಿ ಸುವ ಉದ್ದೇಶವಿದೆ, ರಾಜ್ಯದಲ್ಲಿ ಪ್ರತಿ ವರ್ಷ 65 ಸಾವಿರ ಜನರು ವಿವಿಧ ಕ್ಯಾನ್ಸರ್ ರೋಗಕ್ಕೆ ಒಳಗಾಗುತ್ತಿದ್ದಾರೆ, ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರಗಿಯಲ್ಲಿ ಕಿದ್ವಾಯಿ ಸಂಸ್ಥೆಯ ಅಂಗಸಂಸ್ಥೆ ಯಾಗಿ ಪೆರಿಫೆರಲ್ ಕ್ಯಾನ್ಸರ್ ಸಂಸ್ಥೆ ಸ್ಥಾಪಿಸಲಾಗಿದೆ, ತುಮಕೂರಿನಲ್ಲಿ ಇಂತಹ ಕೇಂದ್ರ ನಿರ್ಮಿಸಲು ಆಡಳಿ ತಾತ್ಮಕ ಅನುಮೋದನೆ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.

Translate »