ಶಾಲೆ ಆರಂಭ: ಮಕ್ಕಳಿಗೆ ಧೈರ್ಯ ತುಂಬಿದ ಸಚಿವ ನಾರಾಯಣಗೌಡ
ಮಂಡ್ಯ

ಶಾಲೆ ಆರಂಭ: ಮಕ್ಕಳಿಗೆ ಧೈರ್ಯ ತುಂಬಿದ ಸಚಿವ ನಾರಾಯಣಗೌಡ

August 24, 2021

ಮಂಡ್ಯ, ಆ.23(ಮೋಹನ್‍ರಾಜ್)- ಇಂದಿನಿಂದ ಶಾಲೆಗಳು ಪ್ರಾರಂಭವಾಗುತ್ತಿ ರುವ ಹಿನ್ನೆಲೆಯಲ್ಲಿ ಮಕ್ಕಳು ಆತಂಕಕ್ಕೆ ಒಳ ಗಾಗದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಧೈರ್ಯ ತುಂಬಿದ್ದಾರೆ.

ಸೋಮವಾರ ನಗರದ ಪೊಲೀಸ್ ಕಾಲೋನಿಯ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಮಕ್ಕಳಿಗೆ ಮಾಸ್ಕ್, ಸಾನಿಟೈಸರ್ ಹಾಗೂ ಚಾಕಲೇಟ್ ನೀಡಿ ಸಿಹಿ ಹಂಚುವ ಮೂಲಕ ಶುಭ ಹಾರೈಸಿ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ 1 ನೇ ಅಲೆ ಹಾಗೂ 2ನೇ ಅಲೆ ನಂತರ ಅಗಸ್ಟ್ 23 ರಿಂದ ಶಾಲಾ- ಕಾಲೇಜುಗಳು ಪುನರ್ ಆರಂಭಗೊಂಡಿದ್ದು, ಈ ದಿನ ಮುಖ್ಯ ಮಂತ್ರಿಗಳು ಶಾಲೆ- ಕಾಲೇಜುಗಳಿಗೆ ಬೇಟಿ ನೀಡಿ 9 ರಿಂದ 12 ನೇ ತರಗತಿ ಮಕ್ಕಳಿಗೆ ಧೈರ್ಯ ತುಂಬಿದ್ದಾರೆ ಎಂದರು.

ಸರ್ಕಾರಿ ಹಾಗೂ ಖಾಸಗಿ ಶಾಲೆಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಮಕ್ಕಳನ್ನು ಶಾಲೆಗೆ ಕಳಿಸಲು ಪಾಲಕರ ಅನುಮತಿ, ಕೋವಿಡ್ ಸುರಕ್ಷತೆಯೊಂದಿಗೆ ಕಲಿಕೆ, ಶಾಲೆಗಳನ್ನು ಸ್ಯಾನಿಟೈಸ್ ಮಾಡಿಸಲಾಗಿದೆ ಎಂದರು.

ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವು ದನ್ನು ಕಡ್ಡಾಯವಾಗಿ ಪಾಲಿಸಿ. ಜಿಲ್ಲಾಡ ಳಿತ ಮತ್ತು ಜಿಲ್ಲಾ ಮುಖ್ಯ ಕಾರ್ಯನಿರ್ವಾ ಹಕ ಅಧಿಕಾರಿಗಳು ಹೆಚ್ಚಿನ ಜವಬ್ದಾರಿಯೊಂ ದಿಗೆ ಜಿಲ್ಲೆಯ ಪ್ರತಿಯೊಂದು ಶಾಲೆಗಳಿಗೆ ಭೇಟಿ ನೀಡಿ ಮೂಲ ಸೌಕರ್ಯ ಹಾಗೂ ಶಾಲಾ- ಕಾಲೇಜುಗಳ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಪಂಚಾ ಯತ್ ಸಿಇಒ ದಿವ್ಯಾ ಪ್ರಭು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜವರೇ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಹೆಬ್ಬಕವಾಡಿಗೆ ಜಿಲ್ಲಾಧಿಕಾರಿ ಭೇಟಿ: ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆ ಯಲ್ಲಿ ಮಕ್ಕಳು ಆತಂಕಕ್ಕೆ ಒಳಗಾಗದೇ ಶಾಲೆಗೆ ಹಾಜರಾಗಿ ಹಾಗೂ ಶಾಲಾ ಶಿಕ್ಷಕರು ಮಕ್ಕಳ ಸುರಕ್ಷತೆ ಬಗ್ಗೆ ಎಚ್ಚರವಹಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಹೇಳಿದರು.

ಮಂಡ್ಯ ತಾಲೂಕು ಹೆಬ್ಬಕವಾಡಿ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂ ದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಇಂದಿನಿಂದ ಶಾಲಾ- ಕಾಲೇಜು ಗಳು ಪುನರ್ ಆರಂಭಗೊಂಡಿದ್ದು, ಶಾಲೆ ಆರಂಭಕ್ಕೆ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.
ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವು ದನ್ನು ಕಡ್ಡಾಯವಾಗಿ ಪಾಲಿಸಿ. ಕರೋನಾ ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳಲ್ಲಿ ಅರಿವು ಮೂಡಿಸಿ. ಶಾಲೆಗಳಲ್ಲಿ ಮೂಲ ಸೌಕರ್ಯ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಎಂದು ಪ್ರಾಂಶುಪಾಲರಿಗೆ ಸೂಚಿಸಿದರು
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜವರೇ ಗೌಡ, ಶಾಲಾ ಪ್ರಾಂಶುಪಾಲರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ನಾಗಮಂಗಲ ವರದಿ: ತಾಲೂಕಿನಲ್ಲಿ ಶಾಲೆಗಳು ಆರಂಭವಾದ ಹಿನ್ನೆಲೆಯಲ್ಲಿ ಮಕ್ಕಳು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಶಾಲೆಗೆ ಹಾಜರಾಗುವಂತೆ ನಾಗಮಂಗಲ ದಂಡಾಧಿಕಾರಿ ಕು.ಞ. ಅಹಮ್ಮದ್ ಧೈರ್ಯ ತುಂಬಿದರು.
ನಂತರ ಮಾತನಾಡಿದ ಅವರು, ಶಿಕ್ಷಣ ಇಲಾಖೆ ನಿರ್ದೇಶನದಂತೆ ಇಂದಿನಿಂದ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕವಾಗಿ ತರಗತಿಗಳನ್ನು ಪ್ರಾರಂಭಿಸಲಾ ಗಿದೆ ಎಂದು ತಿಳಿಸಿ ಮಕ್ಕಳಿಗೆ ಹೂ ಮತ್ತು ಸಿಹಿ ನೀಡುವ ಮೂಲಕ ಮಕ್ಕಳನ್ನು ಸ್ವಾಗತಿಸಿದರು.

ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಪ್ರಸನ್ನಕುಮಾರ್ ಮಾತನಾಡಿ, ಸಾಮಾ ಜಿಕ ಅಂತರವನ್ನು ಕಾಪಾಡುವುದರಿಂದ ಕೊರೊನಾ ರೋಗವನ್ನು ತಡೆಗಟ್ಟಬಹುದು ಎಂದು ಮಕ್ಕಳಿಗೆ ಮಾಹಿತಿ ನೀಡಿದರು.

ಕೊರೊನಾ ಹಿನ್ನೆಲೆಯಲ್ಲಿ ಒಂದೊವರೆ ವರ್ಷದಿಂದ ವಿದ್ಯಾರ್ಥಿಗಳು ಶಾಲೆ ಕಡೆ ಮುಖ ಮಾಡಿರಲಿಲ್ಲ. ಬೋಧಕರಿಂದ ಹಾಲಿ ತರಗತಿ ಕಲಿಕೆ ಕುಂಠಿತಗೊಂಡಿತ್ತು. ಶಾಲೆಗೆ ಬರುವ ಮಕ್ಕಳು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕುಳಿತುಕೊಳ್ಳಬೇಕು. ಈ ಬಗ್ಗೆ ಶಾಲಾ ಸಿಬ್ಬಂದಿ ಗಳು ವ್ಯವಸ್ಥೆ ಮಾಡಬೇಕಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಮಹದೇವಪ್ಪ ತಿಳಿ ಹೇಳಿದರು. ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ್, ತಾಲೂಕು ದೈಹಿಕ ಶಿಕ್ಷಣ ಪರಿ ವೀಕ್ಷಕ ಶಿವಣ್ಣಗೌಡ ಹಾಗೂ ಪ್ರೌಢ ಶಾಲೆಯ ಮುಖ್ಯ ಶಿಕ್ಷಣ ಸಂಯೋಜಕರು, ಸಹಶಿಕ್ಷರು ಹಾಜರಿದ್ದರು.

ತಾಲೂಕಿನಲ್ಲಿ ಒಟ್ಟು 50 ಪ್ರೌಢ ಶಾಲೆ ಗಳಿದ್ದು, ಮೊದಲ ದಿನವೇ 9ನೇ ತರಗತಿ ಯಲ್ಲಿ ದಾಖಲಾದ 1999 ವಿದ್ಯಾರ್ಥಿಗಳಲ್ಲಿ 1337 ವಿದ್ಯಾರ್ಥಿಗಳು ಹಾಗೂ 10ನೇ ತರಗ ತಿಯ 1938 ವಿದ್ಯಾರ್ಥಿಗಳಲ್ಲಿ 1537 ವಿದ್ಯಾರ್ಥಿ ಗಳು ಹಾಜರಾಗಿದ್ದಾರೆ ಎಂದರು.

Translate »