ಕುಡಿಯುವ ನೀರು, ಜಾನುವಾರುಗಳ ಮೇವು ಪೂರೈಕೆಗೆ ಮುಂಜಾಗ್ರತೆ ವಹಿಸಿ
ಹಾಸನ

ಕುಡಿಯುವ ನೀರು, ಜಾನುವಾರುಗಳ ಮೇವು ಪೂರೈಕೆಗೆ ಮುಂಜಾಗ್ರತೆ ವಹಿಸಿ

January 31, 2019

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್ ಸಿಂಗ್ ಸೂಚನೆ
ಹಾಸನ: ಜಿಲ್ಲೆಯ 8 ತಾಲೂಕು ಗಳು ಈಗಾಗಲೇ ಬರಪೀಡಿತ ಪ್ರದೇಶ ಗಳೆಂದು ಘೋಷಣೆಯಾಗಿದ್ದು, ಮುಂಬ ರುವ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ಪೂರೈ ಕೆಗೆ ಯಾವುದೇ ಸಮಸ್ಯೆ ತಲೆದೋರದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಸಿದ್ಧತೆ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಬೇಸಿಗೆ ಯಲ್ಲಿ ಎದುರಾಗುವ ಸವಾಲುಗಳ ನಿರ್ವ ಹಣೆಗೆ ವ್ಯವಸ್ಥಿತ ಪೂರ್ವ ತಯಾರಿ ನಡೆಸುವಂತೆ ನಿರ್ದೇಶನ ನೀಡಿದರು.

ರಾಜ್ಯದ ಬರ ಅಧ್ಯಯನಕ್ಕೆ ಕೇಂದ್ರ ತಂಡ ಆಗಮಿಸಲಿದ್ದು, ಜಿಲ್ಲೆಗೂ ಭೇಟಿ ನೀಡಲಿದೆ. ಆಗ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡಿ ನೈಜ ಸ್ಥಿತಿ ವಿವರಿಸಬೇಕು ಎಂದರು.
ಆತ್ಮಹತ್ಯೆ ಮಾಡಿಕೊಂಡ 125 ಮಂದಿ ರೈತರ ಸಂಬಂಧಿಕರಿಗೆ ಈಗಾಗಲೇ ಪರಿ ಹಾರ ವಿತರಣೆಯಾಗಿದೆ. ಉಳಿದ 3 ಕುಟುಂಬಗಳಿಗೆ 2 ದಿನಗಳಲ್ಲಿ ತಲಾ 5 ಲಕ್ಷ ರೂ.ಗಳ ನೆರವು ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹೇಳಿದರು.

ಅಧಿಕಾರಿಗಳ ನಡುವೆ ಪರಸ್ಪರ ಸಮನ್ವ ಯತೆ ಅಗತ್ಯ. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗಗಳ ನಡುವೆ ಹೊಂದಾಣಿಕೆ ಸುಧಾರಣೆಯಾಗಬೇಕು ಎಂದು ತಿಳಿಸಿದರು.

ಕುಡಿಯುವ ನೀರು ಯೋಜನೆಗಳಿಗೆ ಜಿಲ್ಲಾ ಪಂಚಾಯಿತಿ ಮತ್ತು ಗ್ರಾಮ ಪಂಚಾ ಯಿತಿಗಳಲ್ಲಿ ಲಭ್ಯವಿರುವ ಅನುದಾನವನ್ನು ಬಳಸಬೇಕು. ಹೆಚ್ಚುವರಿ ಹಣವನ್ನು ಜಿಲ್ಲಾಧಿಕಾರಿಯಿಂದ ಪಡೆಯುವುದು ಸೂಕ್ತ ಎಂದ ನವೀನ್‍ರಾಜ್‍ಸಿಂಗ್, ಎಲ್ಲಾ ಸಂಬಂಧ ಪಟ್ಟ ಇಲಾಖೆಗಳ ಹೊಣೆಗಾರಿಕೆ ಅರಿತು ಕರ್ತವ್ಯ ನಿರ್ವಹಿಸಬೇಕು ಎಂದರು.
ಜಿಲ್ಲೆಯ ಮಳೆ ಮತ್ತು ಬೆಳೆ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಅವರು, ರೈತರಿಗೆ ಸಕಾಲದಲ್ಲಿ ಪರಿಹಾರ ಧನಗಳನ್ನು ಒದಗಿಸುವ ಜೊತೆಗೆ ಪರ್ಯಾಯ ಬೆಳೆ ಗಳ ಬಗ್ಗೆ ಅರಿವು ಮೂಡಿಸಿ ಎಂದರು.

ಅರಸೀಕೆರೆ ತಾಲೂಕಿನಲ್ಲಿ ಸತತ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಈಗಾಗಲೇ ಅನುಷ್ಠಾನ ಗೊಳ್ಳುತ್ತಿರುವ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯಲ್ಲಿ ಈ ಹಿಂದೆ ಟ್ಯಾಂಕರ್‍ಗಳ ಮೂಲಕ ನೀರು ಪೂರೈಸುತ್ತಿದ್ದ ಗ್ರಾಮಗಳು ಒಳಗೊಂಡಿ ರುವ ಬಗ್ಗೆ ಖಾತರಿ ಪಡಿಸಿಕೊಂಡು ಬಿಟ್ಟು ಹೋಗಿದ್ದಲ್ಲಿ ಸೇರ್ಪಡೆಗೊಳಿಸಿ ಎಂದು ನಿರ್ದೇಶನ ನೀಡಿದರು.
ಅರಸೀಕೆರೆ, ಬೇಲೂರು ಹಾಗೂ ಚನ್ನ ರಾಯಪಟ್ಟಣ ತಾಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಿದಂತೆ ಕಾಣುತ್ತಿದ್ದು, ಮುಂದಿನ ಮುಂಗಾರಿನವರೆಗೆ, ಜನ ಜೀವನಕ್ಕೆ ತೊಂದರೆ ಯಾಗದಂತೆ ಎಚ್ಚರ ವಹಿಸಲು ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿ ತಿಳಿಸಿದರು.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲಾ ದ್ಯಂತ ಉದ್ಯೋಗ ಖಾತರಿ ಯೋಜನೆ ಯಡಿ ದನಕರುಗಳಿಗೆ ನೀರಿನ ತೊಟ್ಟಿ ನಿರ್ಮಿಸಲು ಆದ್ಯತೆ ನೀಡಬೇಕು. ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿರ್ವ ಹಣಾಧಿಕಾರಿಗಳು ಗ್ರಾಮವಾರು ನೀರಿನ ಪೂರೈಕೆ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ಸಮ ಸ್ಯಾತ್ಮಕ ಗ್ರಾಮಗಳ ಪಟ್ಟಿ ನೀಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಹೆಚ್.ಸಿ.ಪುಟ್ಟಸ್ವಾಮಿ ಮಾತನಾಡಿ, ಉದ್ಯೋಗ ಖಾತರಿ ಯೋಜನೆ ಯಡಿ ಈ ವರ್ಷ 15 ಲಕ್ಷ ಹೆಚ್ಚುವರಿ ಮಾನವ ದಿನಗಳ ಕೆಲಸ ಸೃಜಿಸಲು ಸೂಚನೆ ನೀಡ ಲಾಗಿದೆ. ದನದ ಕೊಟ್ಟಿಗೆ, ನೀರಿನ ತೊಟ್ಟಿ ಗಳ ನಿರ್ಮಾಣಕ್ಕೆ ಆದ್ಯತೆ ನೀಡಲು ತಿಳಿಸ ಲಾಗಿದೆ ಎಂದು ಮಾಹಿತಿ ನೀಡಿದರು.
ಜಂಟಿ ಕೃಷಿ ನಿರ್ದೇಶಕ ಡಾ.ಮಧು ಸೂದನ್ ಹಾಗೂ ತೋಟಗಾರಿಕೆ ಉಪನಿರ್ದೇಶಕ ಡಾ.ಸಂಜಯ್ ಅವರು ಮಳೆ ಬೆಳೆ ಹಾಗೂ ರೈತರ ಪರಿಹಾರಗಳ ಬಗ್ಗೆ ವಿವರಿಸಿದರು.
ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ವೀರಭದ್ರಯ್ಯ ಮೇವಿನ ಲಭ್ಯತೆ ಬಗ್ಗೆ ವಿವರಿಸಿದರು. ಅಗತ್ಯವೆನಿಸಿದ ಸಂದರ್ಭ ದಲ್ಲಿ ಅರಸೀಕೆರೆ, ಬೇಲೂರು ಹಾಗೂ ಚನ್ನರಾಯಪಟ್ಟಣ ತಾಲೂಕುಗಳಲ್ಲಿ ಗೋಶಾಲೆ ಹಾಗೂ ಮೇವು ಬ್ಯಾಂಕ್ ಗಳನ್ನು ತೆರೆಯುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಇಂಜಿನಿಯ ರಿಂಗ್ ವಿಭಾಗದ ಕಾರ್ಯಪಾಲಿಕೆ ಅಭಿಯಂತರ ಆನಂದ್ ಬರ ನಿರ್ವಹಣೆ ಹಾಗೂ ಕುಡಿಯುವ ನೀರು ಪೂರೈಕೆಗೆ ಈವರೆಗೆ ಕೈಗೊಂಡಿರುವ ಕ್ರಮಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸಭೆಗೆ ವಿವರಿಸಿದರು.

ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿಗಳಾದ ಡಾ.ಹೆಚ್. ಎಲ್.ನಾಗರಾಜ್, ಗಿರೀಶ್ ನಂದನ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Translate »