ಮೈಸೂರು: ಮೈಸೂರು ದಸರಾ ಮಹೋತ್ಸವ ಸಂದರ್ಭದಲ್ಲಿ ಪ್ರವಾಸಿಗರ ಅನುಕೂಲತೆ ದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಮೈಸೂರಿನಿಂದ ಹೆಚ್ಚುವರಿ 50 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಿದೆ. ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಬಸ್‍ಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಕೆಎಸ್ ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಉಮಾಶಂಕರ್, ವಿಭಾಗೀಯ ನಿಯಂತ್ರಣಾಧಿಕಾರಿ ವಾಸು, ಅಧಿಕಾರಿ ಗಳಾದ ವೀರೇಶ್, ದಶರಥ್, ಜೆ.ಗಂಗಾಧರ್ ಇನ್ನಿ ತರರು ಉಪಸ್ಥಿತರಿದ್ದರು. ಇಂದು ಚಾಲನೆ ನೀಡಲಾದ ಹೆಚ್ಚುವರಿ ಬಸ್‍ಗಳು ಮೈಸೂರಿನಿಂದ ವಿವಿಧ ಊರು ಗಳಿಗೆ ಪ್ರವಾಸಿಗರ ಅಗತ್ಯಕ್ಕೆ ಅನುಗುಣವಾಗಿ ಸೇವೆಗೆ ನೀಡಲಾಗಿದೆ. ದಸರಾ ಸಂದರ್ಭದಲ್ಲಿ ಮೈಸೂರಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆ ಯಲ್ಲಿ ಈ ಬಸ್‍ಗಳನ್ನು ಒದಗಿಸಲಾಗಿದೆ.