ಮೈಸೂರು, ಸೆ.3(ಪಿಎಂ)- ಪೌಷ್ಟಿಕ ಆಹಾರ ಸೇವನೆ ಪ್ರಯೋಜನಗಳ ಬಗ್ಗೆ ಗರ್ಭಿಣಿಯರು, ಬಾಣಂತಿಯರು ಹಾಗೂ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಜಾಗೃತಿ ಮೂಡಿಸುವ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣ್ ಮಾಸ ಆಚ ರಣೆಗೆ ಮೈಸೂರಿನಲ್ಲಿ ಚಾಲನೆ ದೊರೆಯಿತು.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನದ ಶೋಕಾಚರಣೆ ಹಾಗೂ ಕೊರೊನಾ ಭೀತಿ ಕಾರಣದಿಂದಾಗಿ ಕಾರ್ಯ ಕ್ರಮವನ್ನು ಸರಳವಾಗಿ ಏರ್ಪಡಿಸ ಲಾಗಿತ್ತು. ವಿಜಯನಗರ 2ನೇ ಹಂತದ ಕೆಡಿ ವೃತ್ತದ ಸ್ತ್ರೀಶಕ್ತಿ ಭವನದಲ್ಲಿರುವ ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಏರ್ಪ ಡಿಸಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗ ಮಿಸಿದ್ದ 30ಕ್ಕೂ ಹೆಚ್ಚು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಯರಿಗೆ ಸಂಪನ್ಮೂಲ ವ್ಯಕ್ತಿಗಳು ಪೌಷ್ಟಿಕ ಆಹಾರದ ಬಗ್ಗೆ ಉಪನ್ಯಾಸ ನೀಡಿದರು.
ಆನ್‍ಲೈನ್ ಉಪನ್ಯಾಸ: ಇಲಾಖೆ ಮೇಲ್ವಿ ಚಾರಕಿಯರು ಅಂಗನವಾಡಿ ಕೇಂದ್ರ ಗಳಿಗೆ ಭೇಟಿ ನೀಡಿ ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಅಂಗನವಾಡಿ ಹಾಗೂ ಸಮು ದಾಯ ಭವನಗಳಲ್ಲಿ ಅಂತರ ಕಾಯ್ದು ಕೊಂಡು 20-25 ಮಂದಿ ಮಾತ್ರ ಇರು ವಂತೆ ಕಾರ್ಯಕ್ರಮ ನಡೆಸಲು ಸೂಚನೆ ನೀಡಲಾಗಿದೆ. `ಗೂಗಲ್ ಮೀಟ್’ ಆನ್ ಲೈನ್‍ನಲ್ಲಿ ಸಂಪನ್ಮೂಲ ವ್ಯಕ್ತಿಗಳ ಮೂಲಕ ವಿಚಾರಗೋಷ್ಠಿ ನಡೆಸಲು ಸಿದ್ಧತೆ ಮಾಡಿ ಕೊಳ್ಳಲಾಗಿದೆ. ಸೆ.4ರಿಂದ ನಿತ್ಯ ಬೆಳಗ್ಗೆ 11ರಿಂದ 12ರವರೆಗೆ ಅಂಗನವಾಡಿ ಕಾರ್ಯ ಕರ್ತೆಯರಿಗೆ ಪೌಷ್ಟಿಕ ಆಹಾರದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿ ದ್ದಾರೆ. ಜೆಎಸ್‍ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಪೋಷಣೆ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಬಿ.ಎಂ.ವೀಣಾ, ಡಾ.ಶ್ವೇತಾ ಪೌಷ್ಟಿಕ ಆಹಾರದ ಬಗ್ಗೆ ಉಪನ್ಯಾಸ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಕೆ.ಪದ್ಮಾ, ಕಾರ್ಯಕ್ರಮ ಅಧಿಕಾರಿ ಗೀತಾಲಕ್ಷ್ಮೀ ಮತ್ತಿತರರು ಹಾಜರಿದ್ದರು.