ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವಕ್ಕೆ ಚಾಲನೆ
ಚಾಮರಾಜನಗರ

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವಕ್ಕೆ ಚಾಲನೆ

December 13, 2018

ಪ್ರತಿಭಾ ಕಾರಂಜಿ ಸದ್ಬಳಕೆಗೆ ಜಿಪಂ ಉಪಾಧ್ಯಕ್ಷರ ಸಲಹೆ
ಚಾಮರಾಜನಗರ: ವಿದ್ಯಾರ್ಥಿಗ ಳಲ್ಲಿ ಹುದುಗಿರುವ ವಿಭಿನ್ನ ಪ್ರತಿಭೆ ಅನಾ ವರಣಕ್ಕೆ ಅವಕಾಶ ಮಾಡಿಕೊಡುವ ಪ್ರತಿಭಾ ಕಾರಂಜಿಯಂತಹ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಪಂ ಉಪಾ ಧ್ಯಕ್ಷ ಜೆ.ಯೋಗೀಶ್ ಸಲಹೆ ನೀಡಿದರು.
ನಗರದ ರಾಮಸಮುದ್ರದ ಸಿ.ಆರ್.ಬಾಲ ರಪಟ್ಟಣ ಶಾಲಾ ಆವರಣದಲ್ಲಿ ಬುಧ ವಾರ ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವ ಜನಿಕ ಶಿಕ್ಷಣ ಇಲಾಖೆಯಿಂದ ಹಮ್ಮಿ ಕೊಂಡಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿರುವ ಕಲೆ, ಸಂಸ್ಕøತಿ ಚಟುವಟಿಕೆಗಳ ಪ್ರದರ್ಶನಕ್ಕೆ ಅವಕಾಶ ನೀಡಿ ಉತ್ತೇಜಿಸುವ ಉದ್ದೇಶದಿಂದ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಇದರಿಂದ ವಿದ್ಯಾ ರ್ಥಿಗಳ ಪ್ರತಿಭೆ ಹೊರಸೂಸಲು ಸೂಕ್ತ ವೇದಿಕೆ ಲಭಿಸುತ್ತಿದೆ. ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಹೆಚ್ಚು ಉಪಯೋಗವಾಗ ಲಿದೆ ಎಂದು ತಿಳಿಸಿದರು.

ಸ್ಪರ್ಧೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ. ಭಾಗವಹಿಸುವಿಕೆ ಮಾತ್ರ ಮುಖ್ಯ ವಾಗಿದೆ. ಜಿಲ್ಲಾಮಟ್ಟದಲ್ಲಿ ವಿಜೇತರಾಗುವ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ನಡೆಯುವ ಸ್ಪರ್ಧೆಯಲ್ಲಿಯೂ ಅಗ್ರಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಕೌಶಲ ಗುರುತಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಪ್ರತಿಯೊಬ್ಬರಲ್ಲೂ ಒಂದಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ. ವಿದ್ಯಾರ್ಥಿಗಳು ಪಠ್ಯೇ ತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಎಲ್ಲ ಸ್ಪರ್ಧೆಗಳಲ್ಲಿ ಮೊದಲಿಗ ರಾಗಿ ವಿಜೇತರಾಗಬೇಕು. ಜಿಲ್ಲೆಗೆ ಉತ್ತಮ ಹೆಸರು ತರುವಂತಾಗಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳ ಮಾತನಾಡಿ, ಗ್ರಾಮೀಣ ಭಾಗದ ಹಲವು ವಿದ್ಯಾರ್ಥಿಗಳು ಸಂಸ್ಕøತಿ, ಕಲೆ ಪ್ರದರ್ಶನವನ್ನು ಸಮರ್ಥವಾಗಿ ನೀಡ ಬಲ್ಲವರಾಗಿದ್ದಾರೆ. ಎಲೆಮರೆಯ ಕಾಯಿಯಂತೆ ಇರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೆರ ವಾಗುವ ಉದ್ದೇಶದಿಂದ ಕಳೆದ ಒಂದೂವರೆ ದಶಕದಿಂದಲೂ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗು ತ್ತಿದೆ. ಶಾಲಾ, ಕ್ಲಸ್ಟರ್, ತಾಲೂಕು ಹಂತ ದಲ್ಲಿ ಸ್ಪರ್ಧೆ ನಡೆಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾ ಯಿತಿ ಅಧ್ಯಕ್ಷೆ ದೊಡ್ಡಮ್ಮ, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪನಿರ್ದೇಶಕಿ ಭಾರತಿ, ಸರ್ವ ಶಿಕ್ಷಣ ಅಭಿಯಾನ ಅಧಿಕಾರಿ ಸಿ.ಎನ್. ರಾಜು, ಬಾಲರಪಟ್ಟಣ ವಿದ್ಯಾಸಂಸ್ಥೆಯ ಮುಖ್ಯಸ್ಥ ರೆವರೆಂಡ್ ಬ್ರದರ್ ಅಲ್ಬನ್ ಪಿಂಟೋ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವ ಅಧ್ಯಕ್ಷ ರಂಗಸ್ವಾಮಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್, ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ, ಕ್ಷೇತ್ರ ಶಿಕ್ಷÀಣಾಧಿಕಾರಿ ಲಕ್ಷ್ಮೀಪತಿ, ಸ್ವಾಮಿ, ಮಲ್ಲಿಕಾರ್ಜುನ್, ಇತರರು ಹಾಜರಿದ್ದರು.

ವೇದಿಕೆ ಕಾರ್ಯಕ್ರಮದ ಬಳಿಕ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳು ನಡೆಯಿತು. ವಿವಿಧ ವೇಷಭೂಷಣ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪುಟಾಣಿಗಳು ನೋಡು ಗರ ಗಮನ ಸೆಳೆದರು.

Translate »