ಮುಂಬ ರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ
ಮೈಸೂರು

ಮುಂಬ ರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ

December 12, 2018

ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲಾಗುವುದು ಎಂದು ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನ ಸಭೆಯಲ್ಲಿಂದು ಘೋಷಣೆ ಮಾಡಿದ್ದಾರೆ.

ರಾಜ್ಯದ ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ ಒಂದನೇ ತರಗತಿಯಿಂದ ಪ್ರತ್ಯೇಕವಾಗಿ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸಲು ಆದೇಶ ಹೊರಡಿಸಲಾಗಿದೆ. ಪ್ರಶ್ನೋತ್ತರ ವೇಳೆಯಲ್ಲಿ ಉಮಾನಾಥ.ಎ ಕೋಟ್ಯಾನ್ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಅವರು, 276 ಕರ್ನಾಟಕ ಪಬ್ಲಿಕ್ ಶಾಲೆಗಳು ಹಾಗೂ 6 ಮತ್ತು 7ನೇ ತರಗತಿಗಳಲ್ಲಿ ಆಂಗ್ಲ ಮಾಧ್ಯಮ ಬೋಧಿಸಲಾಗುತ್ತಿರುವ ಶಾಲೆಗಳಲ್ಲೂ ಪ್ರತ್ಯೇಕವಾಗಿ ತರಗತಿಗಳನ್ನು ಆರಂಭಿಸಲಾಗುವುದು ಎಂದರು.

ಇಂಗ್ಲೀಷ್ ಬೋಧನೆಯಲ್ಲಿ ಪರಿಣತಿ ಹೊಂದಿರುವ ಕಾರ್ಯನಿರತ ಶಿಕ್ಷಕರಿಗೆ ಆಯ್ಕೆ ಪರೀಕ್ಷೆ ನಡೆಸಿ ಆಂಗ್ಲ ಮಾಧ್ಯಮ ತರಗತಿ ಬೋಧಿಸಲು ನಿಯೋಜಿಸಲಾಗುವುದು. ಆಯ್ಕೆಗೊಂಡ ಶಿಕ್ಷಕರಿಗೆ ಪ್ರಾದೇಶಿಕ ಆಂಗ್ಲ ಭಾಷಾ ತರಬೇತಿ ಸಂಸ್ಥೆ ಮೂಲಕ 15 ದಿನಗಳ ತರಬೇತಿ ನೀಡಲಾಗುವುದು. ಅಲ್ಲದೆ ಪ್ರತೀ ತಿಂಗಳು ಆ ಸಂಸ್ಥೆ ಯೊಂದಿಗೆ ವಿಡಿಯೋ ಸಂವಾದ ನಡೆಸ ಲಾಗುವುದು ಎಂದು ಹೇಳಿದರು.

ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿ ಸಲು ಅಗತ್ಯವಿರುವ ಪಠ್ಯಪುಸ್ತಕ,ಸ್ಮಾರ್ಟ್ ತರಗತಿಗಳಲ್ಲಿ ಬೋಧಿಸಲು ಅನುಕೂಲ ವಾಗುವಂತೆ ಧ್ವನಿ ಮತ್ತು ದೃಶ್ಯವನ್ನೊಳ ಗೊಂಡ ಇ-ಕಂಟೆಂಟ್‍ಗಳನ್ನು ಡಿಎಸ್ ಆರ್‍ಟಿ ಮೂಲಕ ಸಿದ್ಧಪಡಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 1715 ಆಂಗ್ಲಭಾಷಾ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು. ರಾಜ್ಯದ ಗ್ರಾಮೀಣ ಭಾಗದ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ ಅವರು, ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಬೋಧಿಸಲಾಗುತ್ತಿದೆ ಹಾಗೂ ಭಾಷಾ ಅಲ್ಪಸಂಖ್ಯಾತ ಶಾಲೆಗಳಲ್ಲಿಯೂ ಕನ್ನಡ ವನ್ನು ಒಂದು ಭಾಷೆಯನ್ನಾಗಿ ಕಲಿಸ ಲಾಗುತ್ತಿದೆ ಎಂದರು.

ರಾಜ್ಯದ ಎಲ್ಲ ಪಠ್ಯಕ್ರಮಗಳಲ್ಲೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಪ್ರತೀ ಮಗುವೂ ಶಾಲೆಯಲ್ಲಿ ಮತ್ತು ಉತ್ತಮ ಕಲಿಕೆಯೊಂದಿಗೆ ಎಂಬ ನೀತಿಯನ್ನು ಗುರಿಯನ್ನಾಗಿಸಲಾಗಿದೆ. ಶಿಕ್ಷಣದ ಗುಣಮಟ್ಟ ಸುಧಾರಣಾ ಕಾರ್ಯಕ್ರಮ, ತಂತ್ರಜ್ಞಾನ ಆಧಾರಿತ ಕಲಿಕೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಕಾರ್ಯ ಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಒಂದರಿಂದ 3ನೇ ತರಗತಿಗಳಲ್ಲಿ ನಲಿ-ಕಲಿ ಪದ್ಧತಿಯನ್ನು ಅಳವಡಿಸಲಾಗಿದೆ. 4 ಮತ್ತು 5ನೇ ತರಗತಿಗಳಿಗೆ ಗಣಿತ ಕಲಿಕಾ ಆಂದೋಲನ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದ್ದು, ಗಣಿತ ಕಿಟ್‍ಗಳನ್ನು ನೀಡಲಾಗಿದೆ. ಹೀಗೆ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಸಾಮಗ್ರಿ, ಕ್ರೀಡಾ ಸಾಮಗ್ರಿ, ತರಗತಿ ಪ್ರಕ್ರಿಯೆ ನಿರ್ವಹಣೆಗಾಗಿ ವಾರ್ಷಿಕ 50 ಸಾವಿರ ಸಾಲ ಅನುದಾನ ನೀಡಲಾಗು ತ್ತಿದೆ. 5 ಕಿ.ಮೀ ವ್ಯಾಪ್ತಿಯಲ್ಲಿ ಪ್ರೌಢಶಾಲೆ ಲಭ್ಯವಿಲ್ಲದಿದ್ದಲ್ಲಿ 8ನೇ ತರಗತಿ ಹೊಂದಿ ರುವ ಹಿರಿಯ ಪ್ರಾಥಮಿಕ ಶಾಲೆಗಳನ್ನು 9 ಹಾಗೂ 10 ತರಗತಿಗಳಿಗೆ ಉನ್ನತೀ ಕರಿಸಲಾಗಿದೆ. ಸರ್ಕಾರಿ ಶಾಲೆಗಳ ದಾಖ ಲಾತಿ ಹೆಚ್ಚಿಸಲು ಉಚಿತ ಪಠ್ಯಪುಸ್ತಕ, ಎರಡು ಜೊತೆ ಸಮವಸ್ತ್ರ, ಬೈಸಿಕಲ್, ಕ್ಷೀರ ಯೋಜನೆ, ಮಧ್ಯಾಹ್ನ ಬಿಸಿಯೂಟ, ಶೂ, ಸಾಕ್ಸ್ ಇತ್ಯಾದಿ ಯೋಜನೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

Translate »