ಹರವೆ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಚಾಮರಾಜನಗರ

ಹರವೆ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

July 25, 2018

ಚಾಮರಾಜನಗರ:  ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ವಾಗಿ ಬಲಶಾಲಿಗಳಾಗಲು ಸಾಧ್ಯವಾಗು ತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ದೈಹಿಕ ಪರಿವೀಕ್ಷಕರಾದ ಅರ್.ಶಂಕರ್ ಅಭಿಪ್ರಾಯಪಟ್ಟರು.

ನಗರದ ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಚಾಮರಾಜನಗರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಹರವೆ ವಲಯ ಮಟ್ಟದ ಕ್ರೀಡಾಕೂಟವನ್ನು ಜ್ಯೋತಿ ಬೆಳಗಿ ಮಾತನಾಡಿದರು. ಚಿಕ್ಕ ವಯಸ್ಸಿನಲ್ಲಿ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಅಂತಹ ಮಕ್ಕಳ ಆರೋಗ್ಯವೂ ಉತ್ತಮವಾಗಿರುತ್ತದೆ.

ನಮ್ಮ ಇಲಾಖೆ ವತಿಯಿಂದ ಪ್ರತಿ ವರ್ಷವು ಚಾಮರಾಜನಗರ ತಾಲ್ಲೂಕಿನ ಎಲ್ಲಾ ವಲಯ ಮಟ್ಟಗಳಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡೆಗಳನ್ನು ಹಮ್ಮಿ ಕೊಳ್ಳುತ್ತಿದ್ದೇವೆ ಎಂದರು.

ಕ್ರೀಡಾ ಕಾರ್ಯಕ್ರಮದ ಧ್ವಜಾರೋಹಣ ಮಾಡಿದ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಲಿಂಗಸ್ವಾಮಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಉತ್ತಮ ಕ್ರೀಡಾಪಟುಗಳು ಇದ್ದಾರೆ. ಅಂತಹ ವಿದ್ಯಾರ್ಥಿಗಳನ್ನು ಗುರುತಿಸುವ ನಿಟ್ಟಿನಲ್ಲಿ ದೈಹಿಕ ಶಿಕ್ಷಕರು ಕೆಲಸ ನಿರ್ವಹಿಸ ಬೇಕಿದೆ. ಕ್ರೀಡೆಗಳಿಂದ, ವ್ಯಾಯಾಮ ಮಾಡು ವುದರಿಂದ ಆರೋಗ್ಯವನ್ನು ಉತ್ತಮ ಮಟ್ಟ ದಲ್ಲಿ ನೋಡಿಕೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣ ಇಲಾಖೆ ಸಿ.ಆರ್.ಪಿ.ಕೆ.ಈಶ್ವರ್, ತಾಲೂಕು ಪ್ರಾಥ ಮಿಕ ಶಾಲಾ ಶಿಕ್ಷಕ ಸಂಘದ ಸದಸ್ಯ ಜಯ ರಾಜು, ಜಿಲ್ಲಾ ದೈಹಿಕ ಶಿಕ್ಷರ ಸಂಘದ ಗೌರವ ಅಧ್ಯಕ್ಷ ಕುಮಾರಸ್ವಾಮಿ, ಸಂಘಟನಾ ಕಾರ್ಯದರ್ಶಿ ಚಿಕ್ಕಬಸವಯ್ಯ, ಹಾಗೂ ಪಿ.ಗೋವಿಂದ, ಕೆ.ಬಿ.ಜ್ಯೋತಿ, ಶಿವಮಲ್ಲಯ್ಯ, ನಟರಾಜು, ಮೋಹನ್‍ಕುಮಾರ್ ಇದ್ದರು.

Translate »