ಜೆಎಸ್‍ಎಸ್ ಅಂತರ ಸಂಸ್ಥೆಗಳ 3 ದಿನಗಳ ಕ್ರೀಡಾಕೂಟ
ಮೈಸೂರು

ಜೆಎಸ್‍ಎಸ್ ಅಂತರ ಸಂಸ್ಥೆಗಳ 3 ದಿನಗಳ ಕ್ರೀಡಾಕೂಟ

November 24, 2018

ಸುತ್ತೂರು ಶ್ರೀಕ್ಷೇತ್ರದಲ್ಲಿ ಸಂಸದ ಆರ್.ಧ್ರುವನಾರಾಯಣ್ ಚಾಲನೆ
ನಂಜನಗೂಡು: ಸುತ್ತೂರು ಶ್ರೀಕ್ಷೇತ್ರದಲ್ಲಿ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಸಂಸ್ಮರಣೆಯ ಅಂಗವಾಗಿ ನಡೆಯುತ್ತಿರುವ 3 ದಿನಗಳ ಜೆಎಸ್‍ಎಸ್ ಅಂತರ-ಸಂಸ್ಥೆಗಳ ಕ್ರೀಡಾ ಕೂಟಕ್ಕೆ ಸಂಸದ ಆರ್.ಧ್ರುವನಾರಾಯಣ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ಗಳು ಓದಿನೊಂದಿಗೆ ಕ್ರೀಡೆ ಮತ್ತು ಸಾಂಸ್ಕø ತಿಕ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಸುತ್ತೂರು ಶ್ರೀಕ್ಷೇತ್ರ ರಾಜ್ಯದ ವ್ಯಾಪ್ತಿಯಲ್ಲಿ ತನ್ನ ಸಂಸ್ಥೆಗಳನ್ನು ತೆರೆಯುವ ಮೂಲಕ ಬಡ ಹಾಗೂ ರೈತ ಮಕ್ಕಳ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು, ಶಿಸ್ತು ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಕೀಡಾಕೂಟ ದಲ್ಲಿ ಭಾಗವಹಿಸಿದ್ದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಸುತ್ತೂರು ಮಠದ ಸೇವೆ ಅನುಪಮ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಜೆಎಸ್‍ಎಸ್ ಸಾಮಾಜಿಕ, ಶಿಕ್ಷಣ, ಕೃಷಿ, ಸಾಹಿತ್ಯ ಧಾರ್ಮಿಕ, ವೈಜ್ಞಾನಿಕ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದೆ. ಶಿಕ್ಷಣ ಕ್ಷೇತ್ರದಲ್ಲಂತೂ ಅಮೂಲ್ಯ ಸೇವೆ ಸಲ್ಲಿಸುತ್ತಾ ಸಹಸ್ರಾರು ವಿದ್ಯಾರ್ಥಿಗಳ ಬಾಳಿಗೆ ಉಜ್ವಲ ಭವಿಷ್ಯ ನೀಡುತ್ತಿದೆ ಎಂದರು.

ಕ್ರೀಡೆ ನಮ್ಮ ಜೀವನದ ಬಹು ಮುಖ್ಯ ಅಂಗ, ಯುವ ಜನತೆ ಮಾನಸಿಕ ಹಾಗೂ ದೈಹಿಕ ವಾಗಿ ಆರೋಗ್ಯವಾಗಿರಲು ಕ್ರೀಡೆ ಸಹಕಾರಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿ ಸುವುದನ್ನು ಕ್ರೀಡೆ ಕಲಿಸುತ್ತದೆ. ವಿದ್ಯಾರ್ಥಿಗಳ ಸರ್ವತೋಮುಖ ಬಳವಣಿಗೆಗೆ ಜೆಎಸ್‍ಎಸ್ ಎಷ್ಟು ಮಹತ್ವ ನೀಡುತ್ತಿದೆ ಎಂಬುದು ಈ ಕ್ರೀಡಾಕೂಟದಿಂದಲೇ ತಿಳಿಯುತ್ತದೆ ಎಂದು ಹರ್ಷ ವ್ಯಕ್ತಪಡಿಸಿದರು.

ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಚಿಕಾ ಗೋದ ಆಕ್ರಿಡೇಶನ್ ಕೌನ್ಸಿಲ್ ಫಾರ್ ಫಾರ್ಮಸಿ ಎಜುಕೇಷನ್‍ನ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮೈಕ್ ರೌಸ್, ಕ್ರೋಷಿಯಾ, ಸಿಪ್ರಸ್ ದೇಶಗಳ ವಿಶ್ವವಿದ್ಯಾನಿಲಯ ಸಹಾಯಕ ಪ್ರಾಧ್ಯಾಪಕ ಡಾ. ಅರಿಜಾನ್ ಮೆಸ್ಟ್ರೋವಿಕ್ ಮಾತನಾಡಿದರು.

ಕ್ರೀಡಾಪಟುಗಳ ಪರವಾಗಿ ಸುತ್ತೂರು ಶಾಲಾ ವಿದ್ಯಾರ್ಥಿ ಮೌನೇಶ್ ಹಾಗೂ ಕ್ರೀಡಾಧಿಕಾರಿಗಳ ಪರವಾಗಿ ದೈಹಿಕ ಶಿಕ್ಷಣ ಶಿಕ್ಷಕ ರವೀಂದ್ರ ಕುಮಾರ್ ಪ್ರತಿಜ್ಞಾವಿಧಿ ಸ್ವೀಕರಿಸಿದರು. 3 ದಿನಗಳ ಕ್ರೀಡಾಕೂಟ ದಲ್ಲಿ ಸುಮಾರು 2,843 ವಿದ್ಯಾರ್ಥಿಗಳು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಕಿರಿಯ ಶ್ರೀಗಳಾದ ಜಯ ರಾಜೇಂದ್ರ ಸ್ವಾಮೀಜಿ, ಜೆಎಸ್‍ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆÀಮಿಯ ಕುಲಪತಿ ಡಾ.ಎಸ್.ಸುರೇಶ್, ನಂಜನಗೂಡು ಎಪಿಎಂಸಿ ಅಧ್ಯಕ್ಷೆ ಲಕ್ಷ್ಮಮ್ಮ ಹಾಗೂ ಜೆಎಸ್‍ಎಸ್ ಸಂಸ್ಥೆಗಳ ಮುಖ್ಯಸ್ಥರಿದ್ದರು.

Translate »