ಮೈಸೂರು: ಸಾರ್ವ ಜನಿಕ ವಲಯದಲ್ಲಿ ಸರ್ಕಾರಿ ಅಧಿಕಾರಿ ಗಳು ಹಾಗೂ ರಾಜಕಾರಣಿಗಳು ಭ್ರಷ್ಟರು ಎಂಬ ಭಾವನೆ ಮೂಡದಂತೆ ಕಟ್ಟೆಚ್ಚರ ದಿಂದ ವರ್ತಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕ ರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹ ಯೋಗದಲ್ಲಿ ಆಯೋಜಿಸಿದ್ದ `ರಾಜ್ಯದ ಸರ್ಕಾರಿ ನೌಕರರ ಮೈಸೂರು ಜಿಲ್ಲಾ ಮಟ್ಟದ ಕ್ರೀಡಾಕೂಟ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ, ಕಟ್ಟಡ ದುರಸ್ತಿ, ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಹಲವು ಸಮಸ್ಯೆಗಳು ನಮ್ಮ ಮುಂದೆ ಇರುತ್ತವೆ. ಅವುಗಳನ್ನು ಗುರುತಿಸಿ ಬಗೆಹರಿಸುವಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿರು ತ್ತದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಯಲ್ಲಿರುವ ಯಾವುದೇ ಸಮಸ್ಯೆಯನ್ನು ಅಧಿಕಾರಿ ವರ್ಗ ಗುರುತಿಸಿ ನನ್ನ ಗಮನಕ್ಕೆ ತಂದರೆ ಅದನ್ನು ಮುಖ್ಯಮಂತ್ರಿಗ ಳೊಂದಿಗೆ ಚರ್ಚಿಸಿ ಬಗೆಹರಿಸುವ ಕಾರ್ಯ ವನ್ನು ಮಾಡಲಾಗುವುದು ಎಂದರು.
ಜನವರಿ ಅಂತ್ಯದಲ್ಲಿ ರಾಷ್ಟ್ರಮಟ್ಟದ ಕ್ರೀಡಾ ಕೂಟ ನಡೆಸಲು ತೀರ್ಮಾನಿಸಲಾಗಿದೆ. ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಗಳಿಗೆ ಕ್ರೀಡೆಯು ಉತ್ಸಾಹವನ್ನು ತುಂಬ ಲಿದೆ. ಕ್ರೀಡೆಯಲ್ಲಿ ಭಾಗವಹಿಸು ವಾಗ ಎಲ್ಲರೂ ಸ್ಪರ್ಧಾಳುಗಳಂತೆ ಕ್ರೀಡಾ ನಿಯಮ ಪಾಲಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾತನಾಡಿ, ಜನಸಾಮಾನ್ಯರಿಗೆ ಸರ್ಕಾರಿ ಸೌಲಭ್ಯಗಳು ಅಧಿಕಾರಿಗಳ ಮೂಲಕವೇ ತಲುಪುವುದಾಗಿದೆ. ಕೆಲಸದ ಒತ್ತಡ ಮರೆತು ಕ್ರೀಡೆಯಲ್ಲಿ ಸಂತೋಷದಿಂದ ಭಾಗವಹಿಸಿ, ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೇ, ರಾಜ್ಯ, ಅಂತಾರಾಷ್ಟ್ರೀಯ ಮಟ್ಟದ ಲ್ಲಿಯೂ ಪ್ರಶಸ್ತಿಗಳನ್ನು ಜಿಲ್ಲೆಗೆ ದೊರಕು ವಂತೆ ಮಾಡಿ ಎಂದು ಶುಭಕೋರಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್.ಕೆ.ರಾಮು ಪ್ರಾಸ್ತಾ ವಿಕವಾಗಿ ಮಾತನಾಡಿ, 10 ವರ್ಷಗಳ ಬಳಿಕ ಜಿಲ್ಲೆಯಲ್ಲಿ ರಾಜ್ಯಮಟ್ಟದ ಕ್ರೀಡಾ ಕೂಟ ನಡೆಸಲು ತೀರ್ಮಾನಿಸಲಾಗಿದೆ. ಸರ್ಕಾರಿ ನೌಕರರ ವೇತನ ಹೆಚ್ಚಳ ಹಾಗೂ ರಜೆ ಸಂಬಂಧಿಸಿದ ಬೇಡಿಕೆಗಳನ್ನು ಈಡೇ ರಿಸುವ ನಿಟ್ಟಿನಲ್ಲಿ ಸರ್ಕಾರ ಒಪ್ಪಿಗೆ ನೀಡಿದೆ ಎಂದರು.
ಹಾಕಿ, ಕುಸ್ತಿ, ಕಬಡ್ಡಿ ಸೇರಿದಂತೆ 24 ಕ್ರೀಡೆಗಳಿಗೆ ಮೈಸೂರು ತಾಲೂಕು, ನಂಜ ನಗೂಡು, ಕೆ.ಆರ್.ನಗರ, ಪಿರಿಯಾಪಟ್ಟಣ, ಟಿ.ನರಸೀಪುರ ತಾಲೂಕುಗಳಿಂದ ಸಾವಿ ರಕ್ಕೂ ಹೆಚ್ಚು ಸಿಬ್ಬಂದಿ ಎರಡು ದಿನಗಳ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದಾರೆ.ತಾಪಂ ಉಪಾಧ್ಯಕ್ಷ ಎನ್.ಬಿ.ಮಂಜು, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಸುರೇಶ್ ಇನ್ನಿತರರು ಉಪಸ್ಥಿತರಿದ್ದರು.