`ಬೆಳಕು’ ವಿಷಯದ ಸಂಚಾರಿ  ವಿಜ್ಞಾನ ಪ್ರಯೋಗಾಲಯಕ್ಕೆ ಚಾಲನೆ

ಮೈಸೂರು: ವಿಜ್ಞಾನ ಕಲಿಕೆ ಬಗ್ಗೆ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಕುತೂಹಲ ಮತ್ತು ಆಸಕ್ತಿ ಉಂಟು ಮಾಡುವ ನಿಟ್ಟಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಶಾಲೆಗಳಲ್ಲಿ ವಿಜ್ಞಾನಾಭಿವೃದ್ಧಿ ಸಮಿತಿ (ಸಿಡಿ ಎಸ್‍ಎಸ್) ಮತ್ತು ಎಕ್ಸೆಲ್ ಟ್ರಸ್ಟ್ ಜಂಟಿ ಯಾಗಿ 2018-19ನೆ ಸಾಲಿನ ವಿಜ್ಞಾನ ಕಾರ್ಯಕ್ರಮಗಳು ಮತ್ತು `ಬೆಳಕು’ ವಿಷ ಯದ ಸಂಚಾರಿ ವಿಜ್ಞಾನ ಪ್ರಯೋಗಾ ಲಯಕ್ಕೆ ಮೈಸೂರಿನ ಹೊರವಲಯದ ಹೂಟಗಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಚಾಲನೆ ನೀಡಲಾಯಿತು.

ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಗಣಿತ, ಪ್ರಾಣಿಶಾಸ್ತ್ರಗಳಲ್ಲಿ ಬೆಳಕಿನ ಮಹತ್ವ ಕುರಿತಂತೆ ಸಂಪನ್ಮೂಲ ವ್ಯಕ್ತಿಗಳಿಂದ ಪ್ರಾತ್ಯ ಕ್ಷಿಕೆ ಮತ್ತು ಉಪನ್ಯಾಸಗಳು ನಡೆದವು. 2 ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (ಕೆಎಸ್‍ಎಸ್ ಟಿಎ) ಹಾಗೂ ಇಸ್ರೋ ಯು.ಆರ್.ರಾವ್ ಉಪಗ್ರಹ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಎಸ್.ಕೆ.ಶಿವಕುಮಾರ್ ಮಾತನಾಡಿ, ತಾಂತ್ರಿಕ ಮತ್ತು ವೈದ್ಯಕೀಯ ವೃತ್ತಿಪರ ಶಿಕ್ಷ ಣದ ಕಡೆಗೆ ಒಲವು ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಮೂಲ ವಿಜ್ಞಾನದ ಕಲಿಕೆಗೆ ತೊಡ ಕಾಗುವ ಸಂಭವವಿದೆ. ಈ ನಿಟ್ಟಿನಲ್ಲಿ ಪ್ರಯೋ ಗಾಲಯಗಳ ಮೂಲಕ ವಿದ್ಯಾರ್ಥಿಗಳಿಗೆ ವಿಜ್ಞಾನದ ಕಡೆಗೆ ಆಸಕ್ತಿ ಉಂಟು ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಪ್ರಯೋ ಗಾಲಯದ ಮೂಲಭೂತ ಸೌಕರ್ಯಗಳಿ ಲ್ಲದೆ ವಿಜ್ಞಾನ ಕಲಿಕೆಗೆ ತೊಂದರೆಯಾಗಿ ರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ವಿಜ್ಞಾ ನದ ಬಗ್ಗೆ ಕುತೂಹಲ ಮತ್ತು ಆಸಕ್ತಿ ಉಂಟು ಮಾಡುತ್ತಿದ್ದೇವೆ ಎಂದರು. ಕುವೆಂಪು ವಿವಿ ವಿಶ್ರಾಂತ ಕುಲಪತಿ, ಶಾಲೆಗಳಲ್ಲಿ ವಿಜ್ಞಾನಾಭಿ ವೃದ್ಧಿ ಸಮಿತಿ ಅಧ್ಯಕ್ಷ ಪ್ರೊ.ಪಿ.ವೆಂಕಟ ರಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯ ಕ್ರಮದಲ್ಲಿ ಮೈಸೂರು ವಿವಿ ಕುಲಸಚಿವ ಪ್ರೊ. ಆರ್.ರಾಜಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಎಂ.ಪಿ.ಮಾದೇಗೌಡ, ಶಾಲೆ ಗಳಲ್ಲಿ ವಿಜ್ಞಾನಾಭಿವೃದ್ಧಿ ಸಮಿತಿಯ ಪ್ರೊ. ಕೆ.ಎ.ರವೀಶ್, ಸಂಯೋಜಕ ಡಾ.ಎಂ.ಎಸ್. ಚಂದ್ರಶೇಖರ್, ಎಕ್ಸೆಲ್ ಟ್ರಸ್ಟ್‍ನ ಪ್ರಸಾದ್, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾ ಧ್ಯಾಯಿನಿ ಸಂಗೀತ, ವಿಜ್ಞಾನ ಶಿಕ್ಷಕ ಸೋಮ ಶೇಖರ್ ಇನ್ನಿತರರು ಉಪಸ್ಥಿತರಿದ್ದರು.