ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟರಿಂದ ಆನೆಮಡುವಿನ ಕೆರೆ ತುಂಬಿಸುವ ಯೋಜನೆಗೆ ಚಾಲನೆ
ಚಾಮರಾಜನಗರ

ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟರಿಂದ ಆನೆಮಡುವಿನ ಕೆರೆ ತುಂಬಿಸುವ ಯೋಜನೆಗೆ ಚಾಲನೆ

February 25, 2019

ಚಾಮರಾಜನಗರ: ತಾಲೂಕಿನ ಆನೆ ಮಡುವಿನ ಕೆರೆ ತುಂಬಿಸುವ ಯೋಜನೆ ಕಾಮ ಗಾರಿಗೆ ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಆನೆ ಮಡುವಿನ ಕೆರೆಗೆ ನೀರು ತುಂಬಿಸಬೇಕೆಂಬುದು ಈ ಭಾಗದ ರೈತರ ಬಹುದಿನಗಳ ಬೇಡಿಕೆಯಾಗಿತ್ತು. ಹಾಗಾಗಿ 1.20 ಕೋಟಿ ರೂ. ವೆಚ್ಚದ ಈ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ ಎಂದರು.

ಕೆರೆಗಳಿಗೆ ನೀರು ತುಂಬಿಸುವ ಪೈಪ್‍ಲೈನ್‍ನಿಂದ ಮತ್ತೊಂದು ಸಂಪರ್ಕ ಪೈಪ್‍ಲೈನ್ ನಿರ್ಮಾಣ ಮಾಡಲಾಗುವುದು. ನಂತರ ಅಲ್ಲಿಂದ ಉಡಿಗಾಲ ಗ್ರಾಮದ ಬಳಿಯಿಂದ ಆನೆ ಮಡುವಿನ ಕೆರೆಗೆ ನೀರು ಹರಿಸ ಲಾಗುವುದು. ಬೃಹತ್ ಆನೆಮಡು ವಿನ ಕೆರೆ ತುಂಬಿದ ಬಳಿಕ ಉಡಿಗಾಲ, ವೀರ ನಪುರ ಗ್ರಾಮಗಳ ಸುತ್ತಲಿನ ಸಾವಿರಾರು ಎಕರೆ ಪ್ರದೇಶದ ಅಂತರ್ಜಲ ವೃದ್ಧಿಯಾಗ ಲಿದೆ. ಜನ, ಜಾನುವಾರುಗಳಿಗೆ ನೀರಿನ ಸಮಸ್ಯೆ ನಿವಾರಣೆ ಯಾಗಲಿದ್ದು, ರೈತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸಂಸದ ಆರ್.ಧ್ರುವನಾರಾಯಣ್ ಮಾತನಾಡಿ, ದಿ.ಹೆಚ್.ಎಸ್.ಮಹದೇವಪ್ರಸಾದ್ ಇದ್ದಾಗಲೇ ಈ ಕೆರೆಗೆ ನೀರು ತುಂಬಿಸಬೇ ಕೆಂಬ ಬೇಡಿಕೆ ಕೇಳಿ ಬಂದಿತ್ತು. ಅವರು ಸಹ ಪ್ರಯತ್ನಿಸಿದ್ದರೂ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಲಿಲ್ಲ ಎಂದರಲ್ಲದೆ, ಹಿಂದಿನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾ ಗಿದ್ದ ಸಿದ್ದರಾಮಯ್ಯ ಅವರು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದರು. ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ಮಂಜೂರು ಮಾಡಿ ಹಣ ನೀಡಿದ್ದರು ಎಂದು ತಿಳಿಸಿದರು.

ರಾಜ್ಯದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಪ್ರೋತ್ಸಾಹ ನೀಡುತ್ತಿದೆ. ಈ ನಿಟ್ಟಿನಲ್ಲಿ ಆನೆ ಮಡುವಿನ ಕೆರೆಗೆ ನೀರು ತುಂಬಿಸುವ ಯೋಜನೆಗೆ 1.20 ಕೋಟಿ ರೂ. ನೀಡಿದೆ. ಸಚಿವ ಪುಟ್ಟರಂಗಶೆಟ್ಟಿ ಅವರು ಮುಖ್ಯಮಂತ್ರಿ ಅವರ ಗಮನ ಸೆಳೆದು ಹಣ ಬಿಡುಗಡೆ ಮಾಡಿಸಿದ್ದಾರೆ ಎಂದರು. ಇದೇ ಸಂದ ರ್ಭದಲ್ಲಿ ತಾಪಂ ಅಧ್ಯಕ್ಷೆ ದೊಡ್ಡಮ್ಮ, ಸದಸ್ಯ ಬಾಲಚಂದ್ರ ಮೂರ್ತಿ, ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್, ಚಿಕ್ಕ ಮಹದೇವ ಗ್ರಾಪಂ ಅಧ್ಯಕ್ಷೆ ಮಹದೇವಮ್ಮ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಉಡಿಗಾಲ ಪಾಪಣ್ಣ, ನಂಜಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಮುಖಂಡರಾದ ಸೋಮಲಿಂಗಪ್ಪ, ನಂಜಪ್ಪ ಪಟೇಲ್ ಗುರುಮಲ್ಲಪ್ಪ, ಮಹದೇವ್ ಎ.ಎಸ್.ಗುರುಸ್ವಾಮಿ ಮಹಮದ್ ಅಜ್ಗರ್‍ಮುನ್ನಾ ಸಣ್ಣ ನೀರಾವರಿ ಇಲಾ ಖೆಯ ಇಂಜಿನಿಯರ್ ರಾಜಶೇಖರ್ ಸೇರಿದಂತೆ ಜನಪ್ರತಿನಿಧಿಗಳು ಗ್ರಾಮದ ಮುಖಂಡರಿದ್ದರು.

Translate »