ಪಶುವೈದ್ಯಕೀಯ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಚಾಲನೆ
ಮೈಸೂರು

ಪಶುವೈದ್ಯಕೀಯ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಚಾಲನೆ

September 7, 2018

ನಂಜನಗೂಡು: ನಗರದ ಎಂಜಿಎಸ್ ರಸ್ತೆಯ ಪಶುವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಅಂದಾಜು 31.43 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪಶುವೈದ್ಯಕೀಯ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಾಸಕ ಬಿ.ಹರ್ಷವರ್ಧನ್ ಗುರುವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ತಾಲೂಕಿನ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಸೇರಿದಂತೆ ಹಲವಾರು ಸೌಕರ್ಯಗಳನ್ನು ಒಳಗೊಂಡ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣವಾಗಲಿದೆ ಎಂದರು.

ತಾಲೂಕಿನಾದ್ಯಂತ ನಾಟಿ ಕಾರ್ಯ ಪ್ರಗತಿಯಲ್ಲಿದ್ದು ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಲ್ಲಿ ಪಶು ವೈದ್ಯರು, ಆಸ್ಪತ್ರೆಗಳಲ್ಲಿ ಕಾಲ ಕಳೆಯದೆ ಗ್ರಾಮ ಪ್ರವಾಸ ಮಾಡಿ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ಸೂಚನೆ ನೀಡಿದರು.

ಇದೇ ಸಂಧರ್ಭದಲ್ಲಿ ಜಿ.ಪಂ.ಸದಸ್ಯೆ ಮಂಗಳಾ ಸೋಮಶೇಖರ್, ತಾ.ಪಂ ಅಧ್ಯಕ್ಷ ಬಿ.ಎಸ್.ಮಹದೇವಪ್ಪ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹೆಮ್ಮರಗಾಲ ಶಿವಣ್ಣ ಸದಸ್ಯ ಬಿ.ಎಸ್.ರಾಮು, ನಗರಸಭಾ ಸದಸ್ಯರಾದ ದೊರೆಸ್ವಾಮಿ, ಸುಧಾ ಮಹೇಶ್, ಮಹದೇವಸ್ವಾಮಿ, ಮಾಜಿ ಸದಸ್ಯರಾದ ಸಿ.ಚಿಕ್ಕರಂಗನಾಯ್ಕ, ಎಸ್.ಎಂ.ಕೆಂಪಣ್ಣ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕುಂಬ್ರಳ್ಳಿ ಸುಬ್ಬಣ್ಣ, ಬಿಜೆಪಿ ನಗರಾಧ್ಯಕ್ಷ ಬಾಲಚಂದ್ರು, ತಾಲೂಕು ಅಧ್ಯಕ್ಷ ಕೆಂಡಗಣ್ಣಪ್ಪ, ಜಿ.ಬಸವರಾಜು, ಪ್ರಜ್ವಲ್‍ಶಶಿ, ಧನರಾಜ್‍ಬೂಲ, ಶ್ಯಾಮ್ ಪಟೇಲ, ಮಾಯಾ, ಕಸುವಿನಹಳ್ಳಿ ಗಿರೀಶ, ಪಶು ವೈದ್ಯಕೀಯ ನಿರ್ದೇಶಕ ಡಾ.ಮಂಜುನಾಥ್ ಸೇರಿದಂತೆ ಹಲವಾರು ಪ್ರಮುಖರು ಇದ್ದರು.

Translate »