ಬಿಜೆಪಿಯ ಸರ್ಕಸ್‍ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ
ಮೈಸೂರು

ಬಿಜೆಪಿಯ ಸರ್ಕಸ್‍ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ

November 22, 2020

ಬೆಂಗಳೂರು: ಬಿಜೆಪಿಯ ಸರ್ಕಸ್‍ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದ್ದು, ಶೀಘ್ರವಾಗಿ ಏನಾ ದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿ ಎಂದು ಸಿದ್ದರಾಮಯ್ಯ ಆಡ ಳಿತಾರೂಢ ಬಿಜೆಪಿಯನ್ನು ಟೀಕಿಸಿದ್ದಾರೆ.

ಹಿಂದೆಲ್ಲ ಬಿಜೆಪಿ ನಾಯಕರು, ಹೈಕಮಾಂಡ್ ಸಂಸ್ಕೃತಿ' ಮೂಲ ನಿವಾಸಿಗಳು-ವಲಸೆ ಗಾರರು'ಕುಟುಂಬ ರಾಜಕಾರಣ’ ಎಂಬಿ ತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ ಅದೇ ಆರೋಪಗಳನ್ನು ಪರಸ್ಪರ ಮಾಡ್ಕೊಂಡು ಬೆತ್ತಲಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ರುವ ಅವರು, ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ಮುಖ್ಯಮಂತ್ರಿ ಬದಲಾ ವಣೆಯೋ-ಇವೆಲ್ಲ ನಿಮ್ಮ ಪಕ್ಷದ ಹಣೆ ಬರಹ. ಈ ಸರ್ಕಸ್‍ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ. ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆ ಗೊಳಿಸಿ, ಆಡಳಿತದ ಕಡೆ ಗಮನಕೊಟ್ಟು ರಾಜ್ಯವನ್ನು ಉಳಿಸಿ ಎಂದು ಒತ್ತಾಯಿಸಿದ್ದಾರೆ.

Translate »