ನಾಳೆ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ

ಪದಗ್ರಹಣ, ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ
ಮೈಸೂರು: ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕ ಹುಬ್ಬಳ್ಳಿ, ಮೈಸೂರು ಜಿಲ್ಲಾ ಘಟಕ, ಧಾರವಾಡದ ಅಪ್ನಾ ದೇಶ ಬಳಗದ ಜಂಟಿ ಆಶ್ರಯದಲ್ಲಿ ಫೆ.3ರಂದು ಮೈಸೂರು ತಾಲೂಕಿನ ಜಯಪುರ ಹೋಬಳಿಯ ಬರಡನಪುರ ಮಠದಲ್ಲಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ, ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿ ಸಲಾಗಿದೆ ಎಂದು ಸಂಘದ ಮೈಸೂರು ಜಿಲ್ಲಾಧ್ಯಕ್ಷ ಬಿ.ಎಸ್.ಮಂಜುನಾಥ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಬರಡನಪುರ ಮಠಾಧ್ಯಕ್ಷ ಶ್ರೀ ಪರಶಿವಮೂರ್ತಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಉದ್ಘಾಟನೆ ನೆರವೇರಿಸುವರು. ‘ಅಪ್ನಾದೇಶ ಅಕ್ಷರ ರತ್ನ’ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಇದೇ ಸಂದರ್ಭ ದಲ್ಲಿ ಶಾಸಕ ತನ್ವೀರ್‍ಸೇಠ್ `ಅಮೃತಧಾರೆ’ ಪುಸ್ತಕ ಬಿಡುಗಡೆ ಮಾಡುವರು ಎಂದರು.

ಧಾರವಾಡದ ದತ್ತಿ ದಾನಿ ಲೂಸಿ ಕೆ ಸಾಲ್ಡಾನಾ, ಡಿಡಿಪಿಐ ಎಸ್.ಮಮತಾ, ಧಾರವಾಡ ಗ್ರಾಮೀಣ ಬಿಇಓ ವಿದ್ಯಾ ನಾಡಗೇರ, ಉಪನ್ಯಾಸಕಿ ಡಾ.ರೇಣುಕಾ ಅಮಲಝರಿ, ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ ಎಂ ಸಜ್ಜನ, ಎಸ್‍ಸಿ-ಎಸ್‍ಟಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ವಿ.ಟಿ.ವೆಂಕಟೇಶಯ್ಯ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮಧ್ಯಾಹ್ನ 2.30ಕ್ಕೆ ರಾಜ್ಯಾಧ್ಯಕ್ಷ ಅಶೋಕ ಎಂ.ಸಜ್ಜನ ನೇತೃತ್ವದಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಗ್ರಾಮೀಣ ಭಾಗದ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆ ಗಳು ಹಾಗೂ ಹೋರಾಟದ ರೂಪು ರೇಷೆಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗು ವುದು ಎಂದರು. ಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಮಹದೇವು, ಕೆ.ನಾಗ ರಾಜು, ವಿ.ಗೋವಿಂದರಾಜು, ಟಿ.ಪುರುಷೋತ್ತಮ, ಧನಂಜಯ, ಪಿ.ಶಾಂತಮ್ಮ ಇದ್ದರು.