ಬೆಂಗಳೂರು ಮಾರ್ಚ್ 26 (ಕೆಎಂಶಿ) : ಎಸ್‍ಎಸ್‍ಎಲ್‍ಸಿ ಪರೀಕ್ಷೆ ಏಪ್ರಿಲ್ 20 ರ ನಂತರ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ಈ ಮಾಹಿತಿ ನೀಡಿರುವುದಲ್ಲದೆ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದು ಎಂಬ ವದಂತಿಗೆ ಕಿವಿಗೊಡಬೇಡಿ ಎಂದಿದ್ದಾರೆ.
ಕೊರೋನಾ ವೈರಸ್ ತಡೆಗಟ್ಟಲು ಪ್ರಧಾನಿಯವರು ಮೂರು ವಾರಗಳ ಕಾಲ ವಿಧಿಸಿರುವ ಕಫ್ರ್ಯೊ ಸಡಿಲಗೊಂಡ ನಂತರ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಳ್ಳಲಿದೆ.
7 ರಿಂದ 9ನೇ ತರಗತಿಯ ಪರೀಕ್ಷೆಗಳು ಕೂಡಾ ಏಪ್ರಿಲ್ 20 ರ ನಂತರವೇ ನಡೆಯಲಿದೆ ಎಂದು ತಿಳಿಸಿದ್ದಾರೆ.