ವೃತ್ತಿಪರ ಕೋರ್ಸ್‍ಗಳ ಶುಲ್ಕ ಶೇ.8ರಷ್ಟು ಹೆಚ್ಚಳ
ಮೈಸೂರು

ವೃತ್ತಿಪರ ಕೋರ್ಸ್‍ಗಳ ಶುಲ್ಕ ಶೇ.8ರಷ್ಟು ಹೆಚ್ಚಳ

July 11, 2018

ಬೆಂಗಳೂರು:  ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್‍ಗಳ ಶುಲ್ಕವನ್ನು ಶೇಕಡಾ 8ರಷ್ಟು ಹೆಚ್ಚಿಸಿದೆ. ಉನ್ನತ ಶಿಕ್ಷಣ ಇಲಾಖೆ ತನ್ನ ಹಿಂದಿನ ನಿರ್ಧಾರ ದಿಂದ ಹಿಂದೆ ಸರಿದಿದೆ.

ಕಳೆದ ವರ್ಷ ವೃತ್ತಿಪರ ಶಿಕ್ಷಣಗಳ ಕೋರ್ಸ್ ಶುಲ್ಕಗಳನ್ನು ಶೇಕಡಾ 10ರಷ್ಟು ಹೆಚ್ಚಳ ಮಾಡಿತ್ತು. ಕೊನೆಗೆ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗಿ ಬರುವ ಸಾಧ್ಯತೆಯಿರುವುದರಿಂದ ಸರ್ಕಾರ ಶೇಕಡಾ 8ರಷ್ಟು ಶುಲ್ಕ ಹೆಚ್ಚಿ ಸಲು ತೀರ್ಮಾನಿಸಿದೆ. ಉನ್ನತ ಶಿಕ್ಷಣ ಇಲಾಖೆ ಮೂಲಗಳು ಹೇಳುವ ಪ್ರಕಾರ, ರಾಜ್ಯ ಸರ್ಕಾರ

ರಚಿಸಿರುವ ಶುಲ್ಕ ನಿಯಂತ್ರಣ ಸಮಿತಿ, ಶುಲ್ಕ ಹೆಚ್ಚಳಕ್ಕೆ ಶಿಫಾರಸು ಮಾಡಿದೆ. ವೈದ್ಯ ಕೀಯ ಶಿಕ್ಷಣ ಇಲಾಖೆ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರಲು ತೀರ್ಮಾನಿಸಿದೆ. ಉನ್ನತ ಶಿಕ್ಷಣ ಇಲಾಖೆ ಶೇಕಡಾ 10ರಷ್ಟು ಶುಲ್ಕ ಹೆಚ್ಚಳಕ್ಕೆ ತೀರ್ಮಾ ನಿಸಿತ್ತು. ನಿನ್ನೆ ಇಲಾಖೆಯ ಅಧಿಕಾರಿಗಳು ಖಾಸಗಿ ಎಂಜಿನಿಯರಿಂಗ್ ಕಾಲೇಜು ವ್ಯವಸ್ಥಾಪಕ ಪ್ರತಿನಿಧಿಗಳ ಜೊತೆ ಚರ್ಚೆ ನಡೆಸಿ ಕಾನೂನು ಪರಿಣಾಮಗಳ ಸಾಧ್ಯತೆ ಕುರಿತು ಚರ್ಚಿಸಿದರು. ರಾಜ್ಯ ಸರ್ಕಾರ ಶೇಕಡಾ 8ರಷ್ಟು ಶುಲ್ಕ ಹೆಚ್ಚಿಸದಿದ್ದರೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಸಮಿತಿಯ ಮುಖ್ಯಸ್ಥ ಡಿ.ವೈ.ಶೈಲೇಂದ್ರ ಕುಮಾರ್ ಹೇಳಿದರು. ಶೇಕಡಾ 8ರಷ್ಟು ಶುಲ್ಕ ಎಲ್ಲಾ ವೃತ್ತಿಪರ ಕೋರ್ಸ್‍ಗಳಿಗೆ ಅನ್ವಯವಾಗುತ್ತದೆ. ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಆಯುರ್ವೇದಗಳಿಗೆ ಅನ್ವಯ.

Translate »