ಒಕ್ಕಲಿಗರ ಸಂಘದ ಚುನಾವಣೆ ಮುಂದೂಡಿ ರಾಜ್ಯ ಸರ್ಕಾರ ಆದೇಶ
ಮೈಸೂರು

ಒಕ್ಕಲಿಗರ ಸಂಘದ ಚುನಾವಣೆ ಮುಂದೂಡಿ ರಾಜ್ಯ ಸರ್ಕಾರ ಆದೇಶ

April 24, 2021

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಚುನಾವಣಾಧಿಕಾರಿ, ರಾಜ್ಯ ಒಕ್ಕಲಿಗರ ಸಂಘ ಇವರ ಕೋರಿಕೆಯಂತೆ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕೋವಿಡ್ ರೋಗ ಕಡಿಮೆ ಯಾಗುವವರೆಗೂ ಚುನಾವಣೆಯನ್ನು ಮುಂದೂಡುವುದು ಅನಿವಾರ್ಯವೆಂದು ಸರ್ಕಾರ ಮನಗಂಡಿದ್ದು, ಅದರಂತೆ ಚುನಾವಣೆಯನ್ನು ಮುಂದೂಡಲು ವಿನಂತಿಸಿ ಉಚ್ಛ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಚುನಾವಣೆ ಮುಂದೂಡುವಂತೆ ಆದೇಶಿಸಿರುತ್ತದೆ ಎಂದು ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ ಎಂ.ವೆಂಕಟಸ್ವಾಮಿ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಉಚ್ಛ ನ್ಯಾಯಾಲಯವು ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಗೆ ನಿಗದಿಪಡಿಸಿದ್ದ ಮೂರು ತಿಂಗಳ ಅವಧಿ ಮಿತಿಯಿಂದ ವಿನಾಯಿತಿ ನೀಡಿ ಆದೇಶಿಸಿರುವ ಹಿನ್ನೆಲೆಯಲ್ಲಿ ಕೋವಿಡ್ ಕಡಿಮೆಯಾಗುವವರೆಗೂ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.

 

Translate »