ನವದೆಹಲಿ, ಏ. 20- ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಗಳಿಗೆ ಎಲ್ಲಾ ರೀತಿ ಯಲ್ಲೂ ಸಹಕಾರ ನೀಡುವಂತೆ ಮೂರೂ ಸೇನಾಪಡೆ ಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಸೂಚನೆ ನೀಡಿದ್ದಾರೆ.
ಈ ಕುರಿತು ರಕ್ಷಣಾ ಇಲಾಖೆಯ ಮೂಲಗಳು ಮಾಹಿತಿ ನೀಡಿದ್ದು, ಕೊರೊನಾ ಪರಿಸ್ಥಿತಿ ನಿಭಾಯಿಸು ವಲ್ಲಿ ರಾಜ್ಯ ಸರ್ಕಾರಗಳಿಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ರಾಜನಾಥ್ ಸಿಂಗ್ ಸೇನಾಪಡೆಗಳಿಗೆ ಸೂಚನೆ ನೀಡಿದ್ದು, ಈ ಸಂಬಂಧ ವಿವಿಧ ರಾಜ್ಯಗಳಲ್ಲಿರುವ ಸೇನಾ ಘಟಕಗಳು ಆಯಾ ರಾಜ್ಯ ಸರ್ಕಾರವನ್ನು ಸಂಪರ್ಕಿಸಿ, ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ನೆರವು ನೀಡುವಂತೆ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅವರಿಗೆ ನಿರ್ದೇಶಿಸಿದ್ದಾರೆಂದು ತಿಳಿದುಬಂದಿದೆ.
ರಾಜ್ಯ ಸರ್ಕಾರಗಳಿಗೆ ನೆರವು ನೀಡುವುದರ ಜೊತೆಗೆ ಸಾಧ್ಯವಾದಲ್ಲೆಲ್ಲಾ ಸೇನಾ ಆಸ್ಪತ್ರೆಗಳಲ್ಲಿ (ವೈದ್ಯಕೀಯ ಸೌಲಭ್ಯವಿದ್ದ ಕಡೆ) ನಾಗರಿ ಕರಿಗೆ ಚಿಕಿತ್ಸೆ ನೀಡಲು ಸೇನೆ ನಿರ್ಧರಿಸಿದೆ. ಇದೇ ವೇಳೆ, ರಾಜ್ಯಗಳಿಗೆ ಯಾವ ರೀತಿಯ ನೆರವು ಬೇಕೆಂಬುದನ್ನು ತಿಳಿಯಲು ಹಿರಿಯ ಉನ್ನತ ಸೇನಾಧಿಕಾರಿಯೊಬ್ಬರಿಗೆ ಆಯಾ ರಾಜ್ಯದ ಮುಖ್ಯ ಮಂತ್ರಿಯೊಂದಿಗೆ ಸಂಪರ್ಕದಲ್ಲಿದ್ದು, ಮಾಹಿತಿ ಪಡೆದುಕೊಳ್ಳು ವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಕ್ಷಣಾ ಸಚಿವರು ತಮ್ಮ ಸಚಿವಾಲಯದ ಪ್ರಮುಖ ಅಧಿಕಾರಿಗಳು ಹಾಗೂ ರಕ್ಷಣಾ ಕ್ಷೇತ್ರದ 3 ಪಡೆಗಳ ಮುಖಂಡರೊಂದಿಗೆ ಸಂಪರ್ಕದಲ್ಲಿದ್ದು, ದೇಶದಾದ್ಯಂತ ಉಲ್ಬಣಗೊಳ್ಳುತ್ತಿರುವ ಕೊರೊನಾ ಪ್ರಕರಣಗಳನ್ನು ನಿರ್ವಹಿಸಲು, ಎಲ್ಲ ರಾಜ್ಯಗಳೊಂದಿಗೆ ಹೇಗೆ ವ್ಯವಹರಿಸ ಬೇಕು ಎಂಬುದರ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ಭಾರತೀಯ ವಾಯುಪಡೆ ಮತ್ತು ನೌಕಾಪಡೆಗಳಿಗೆ ಕೊರೊನಾ ಪ್ರಕರಣಗಳ ನಿರ್ವಹಣೆಗೆ ನೆರವು ನೀಡುವ ಸಂಬಂಧ ಸಿದ್ಧತೆ ನಡೆಸುವಂತೆ ಸೂಚಿಸಲಾಗಿದೆ.
ಕೇಂದ್ರ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್, ರಾಜ್ಯ ಸರ್ಕಾರಗಳಿಗೆ ಸೇನಾ ಪಡೆಗಳು ಯಾವ ರೀತಿ ನೆರವು ನೀಡಬಹುದು ಎಂಬುದರ ಬಗ್ಗೆ ಪರಾಮರ್ಶೆ ನಡೆಸಿದ್ದಾರೆ. ಆ ಪ್ರಕಾರ, ರಕ್ಷಣಾ ಸಚಿವಾಲಯ ದೇಶದಲ್ಲಿರುವ 67 ಸೇನಾ ಆಸ್ಪತ್ರೆಗಳಿಗೆ ಸೂಚನೆ ನೀಡಿ, ಆಯಾ ರಾಜ್ಯ ಸರ್ಕಾರ ಗಳಿಗೆ ನೆರವಾಗುವಂತೆ ತಿಳಿಸಿದ್ದಾರೆ. ಕೋವಿಡ್ ನಿರ್ವಹಣೆ ಗಾಗಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಎಲ್ಲ ರಾಜ್ಯ ಸರ್ಕಾರಗಳಿಗೂ ನೆರವಾಗುವುದಾಗಿ ತಿಳಿಸಿದೆ. ಈಗಾ ಗಲೇ ದೆಹಲಿಯ ವಿಮಾನ ನಿಲ್ದಾಣದ ಸಮೀಪ ಕೊರೊನಾ ಆರೈಕೆ ಕೇಂದ್ರವನ್ನು ಪುನರಾರಂಭಿಸಿದೆ. 250 ಹಾಸಿಗೆಗಳ ಸಾಮಥ್ರ್ಯವಿದ್ದ ಈ ಕೇಂದ್ರವನ್ನು 1 ಸಾವಿರ ಹಾಸಿಗೆಗಳ ಕೇಂದ್ರ ವಾಗಿ ಉನ್ನತೀಕರಿಸಿದೆ. ಲಖನೌದಲ್ಲೂ ಇಂತಹದ್ದೇ ಕೊರೊನಾ ಕೇರ್ ಕೇಂದ್ರವನ್ನು ಡಿಆರ್‍ಡಿಒ ಆರಂಭಿಸಿದೆ.