ಜ.28 ರಿಂದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಟಿ.ಯೋಗೇಶ್
ಮೈಸೂರು

ಜ.28 ರಿಂದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಟಿ.ಯೋಗೇಶ್

January 6, 2019

ಮೈಸೂರು: ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಮೈಸೂರು ಜಿಲ್ಲೆಯಲ್ಲಿ ಜ.28 ರಿಂದ 30ರವರೆಗೆ ಸಂಘಟಿಸಲಾಗುವುದು. ಕ್ರೀಡಾಕೂಟ ವನ್ನು ಉತ್ತಮ ರೀತಿಯಲ್ಲಿ ಆಯೋಜಿ ಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ತಿಳಿಸಿದರು.

ಅವರು ಇಂದು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆ ಉದ್ದೇಶಿಸಿ ಮಾತನಾಡಿದರು. ಜ.28ರಂದು ಸಂಜೆ 4 ಗಂಟೆಗೆ ಉದ್ಘಾಟನಾ ಸಮಾರಂಭ ವನ್ನು ಚಾಮುಂಡಿ ವಿಹಾರ ಕ್ರೀಡಾಂಗಣ, ಮೈಸೂರು ಇಲ್ಲಿ ನಡೆಸಲು ಮತ್ತು ಜ.29 ಮತ್ತು 30ರಂದು ಕ್ರೀಡಾ ಸ್ಪರ್ಧೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ನಡೆಸಲಾಗು ವುದು ಎಂದರು.

ಕ್ರೀಡಾಕೂಟ ಆಯೋಜನೆ ಕುರಿತಂತೆ ಸ್ವಾಗತ, ಹಣಕಾಸು, ಆಹಾರ ವಸತಿ, ವೇದಿಕೆ, ಸಾರಿಗೆ, ಆರೋಗ್ಯ, ಸಾಂಸ್ಕøತಿಕ, ನೋಂದಣಿ, ಸ್ವಚ್ಛತೆ ಕುರಿತಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಅಧಿಕಾರಿ ಗಳು ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು.
ಹಾಕಿ, ಕುಸ್ತಿ, ಕಬಡ್ಡಿ, ವಾಲಿಬಾಲ್, ಬ್ಯಾಸ್ಕೆಟ್ ಬಾಲ್, ಅಥ್ಲೆಟಿಕ್ಸ್, ಟೆನಿಕಾಯ್ಟ್, ವೇಯ್ಟ್ ಲಿಫ್ಟಿಂಗ್, ಬೆಸ್ಟ್ ಫಿಸಿಕ್, ಚೆಸ್, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್, ಈಜು, ಕೇರಂ, ಫುಟ್‍ಬಾಲ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಬ್ರಿಡ್ಜ್ ಮತ್ತು ಕ್ರಿಕೆಟ್ ಸ್ಪರ್ಧೆಗಳನ್ನು ಚಾಮುಂಡಿವಿಹಾರ ಕ್ರೀಡಾಂಗಣ, ಮೈಸೂರು ವಿಶ್ವವಿದ್ಯಾ ಲಯ ಕ್ರೀಡಾಂಗಣ ಹಾಗೂ ಅಗತ್ಯವಿ ದ್ದಲ್ಲಿ ಬೇರೆ ಸೂಕ್ತ ಸ್ಥಳಗಳಲ್ಲಿ ಆಯೋಜಿ ಸುವಂತೆ ತಿಳಿಸಿದರು.

ಸಾಂಸ್ಕøತಿಕ ಸ್ಪರ್ಧೆಗಳಾದ ಶಾಸ್ತ್ರೀಯ ಗಾಯನ, ಹಿಂದೂಸ್ತಾನಿ ಮತ್ತು ಕರ್ನಾ ಟಕ ಶಾಸ್ತ್ರೀಯ ಸಂಗೀತ, ಲಘು ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ನೃತ್ಯ-ಭರತನಾಟ್ಯ, ಕಥಕ್, ಮಣಿಪುರಿ, ಕುಚಿ ಪುಡಿ, ಒಡಿಸ್ಸಿ, ಶಾಸ್ತ್ರೀಯ ವಾದ್ಯ ಸಂಗೀತ, ಜನಪದ ಗೀತೆ, ಜನಪದ ನೃತ್ಯ, ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಕಿರುನಾಟಕ ಕಾರ್ಯಕ್ರಮಗಳನ್ನು ಕಲಾಮಂದಿರ ಹಾಗೂ ರಂಗಾಯಣದ ಆವರಣದಲ್ಲಿ ಆಯೋಜಿಸುವಂತೆ ತಿಳಿಸಿದರು.
ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಯಾಗಿರುವವರು ರಾಜ್ಯಮಟ್ಟದಲ್ಲಿ ಭಾಗ ವಹಿಸಲು ಆಗಮಿಸುತ್ತಿದ್ದು, ಜಿಲ್ಲಾ ಮಟ್ಟ ದಲ್ಲಿ ಆಯ್ಕೆಯಾಗಿರುವ ಕ್ರೀಡಾಪಟುಗಳ ಮೊಬೈಲ್ ಸಂಖ್ಯೆ ಪಡೆದುಕೊಳ್ಳಿ. ಕ್ರೀಡಾ ಕೂಟದಲ್ಲಿ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ವಸತಿ ವ್ಯವಸ್ಥೆಯ ಮಾಹಿತಿ ನೀಡಬಹುದು. ನೋಂದಣಿ ಸಮಯ ದಲ್ಲಿ ಸರ್ಕಾರಿ ನೌಕರರ ಕೆ.ಜಿ.ಐ.ಡಿ ಸಂಖ್ಯೆ ಯನ್ನು ಪಡೆದುಕೊಂಡು ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದರು.

ಕ್ರೀಡಾಪಟುಗಳಿಗೆ ಮಾಹಿತಿ ನೀಡಲು ಮಾಹಿತಿ ಕೇಂದ್ರ ತೆರೆಯುವಂತೆ ಹಾಗೂ ಸಹಾಯವಾಣಿ ವ್ಯವಸ್ಥೆ ಮಾಡಿ. ಸಹಾಯವಾಣಿ ಸಂಖ್ಯೆಯನ್ನು ಎಲ್ಲಾ ಜಿಲ್ಲೆಗಳಿಗೆ ಕಳುಹಿಸಿಕೊಡಬೇಕು. ಕ್ರೀಡಾ ಕೂಟ ನಡೆಯುವ ಸ್ಥಳದಲ್ಲಿ ಆಂಬುಲೆನ್ಸ್, ವೈದ್ಯರು ಹಾಗೂ ಸಹಾಯಕರನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘ ಬೆಂಗಳೂರು ಮತ್ತು ಜಿಲ್ಲಾ ಶಾಖೆ ಅಧ್ಯಕ್ಷ ಹೆಚ್.ಕೆ. ರಾಮು, ಮೈಸೂರು ಉಪವಿಭಾಗಾಧಿಕಾರಿ ಶಿವೇ ಗೌಡ, ಆಹಾರ ಇಲಾಖೆ ಜಂಟಿ ನಿರ್ದೇ ಶಕ ಶಿವಣ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಸುರೇಶ್ ಹಾಗೂ ಇನ್ನಿತರ ಅಧಿಕಾರಿ ಗಳು ಉಪಸ್ಥಿತರಿದ್ದರು.

Translate »