ಮೈಸೂರಲ್ಲಿ ನಾಳೆಯಿಂದ ರಾಜ್ಯಮಟ್ಟದ ಪಿಯು ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟ
ಮೈಸೂರು

ಮೈಸೂರಲ್ಲಿ ನಾಳೆಯಿಂದ ರಾಜ್ಯಮಟ್ಟದ ಪಿಯು ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟ

November 22, 2018

ಮೈಸೂರು:  ಪದವಿ ಪೂರ್ವ ಶಿಕ್ಷಣ ಇಲಾಖೆ, ವಿಜಯ ವಿಠಲ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯ ದಲ್ಲಿ ನ.23ರಿಂದ 26ರವರೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ 2018-19ನೇ ಸಾಲಿನ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯ ಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೈಸೂರು ಜಿಲ್ಲಾ ಉಪ ನಿರ್ದೇಶಕ ಡಾ.ದಯಾನಂದ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಕ್ರೀಡಾ ಕೂಟದ ವಿವರಗಳನ್ನು ನೀಡಿದ ಅವರು, 23ರಂದು ಸಂಜೆ 4 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಕ್ರೀಡಾ ಕೂಟಕ್ಕೆ ಚಾಲನೆ ನೀಡಲಿದ್ದಾರೆ.

ಶಾಸಕ ತನ್ವೀರ್‍ಸೇಠ್ ಅಧ್ಯಕ್ಷತೆ ವಹಿಸ ಲಿದ್ದಾರೆ. ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಕ್ರೀಡಾಜ್ಯೋತಿ ಹಸ್ತಾಂತರಿಸಲಿ ದ್ದಾರೆ. ಇದೇ ಸಂದರ್ಭದಲ್ಲಿ ಮೈಸೂರಿನ ಖ್ಯಾತ ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾ ಪಟು ಕುಮಾರಿ ರೀನಾ ಜಾರ್ಜ್ ಅವ ರನ್ನು ಸನ್ಮಾನಿಸಲಾಗುವುದು ಎಂದರು.

ನ.24ರಿಂದ 26ರವರೆಗೆ ನಡೆಯುವ ಕ್ರೀಡಾಕೂಟದಲ್ಲಿ ರಾಜ್ಯದ 32 ಜಿಲ್ಲೆಗಳಿಂದ ಸುಮಾರು 2500 ಸಾವಿರಕ್ಕೂ ಹೆಚ್ಚು ಬಾಲಕ, ಬಾಲಕಿಯರು ಭಾಗವಹಿಸಲಿದ್ದು, ಸ್ಪರ್ಧೆಯ ವಿಜೇತ ಕ್ರೀಡಾಪಟುಗಳಿಗೆ ಪದಕ, ಪ್ರಮಾಣ ಪತ್ರದ ಜತೆಗೆ ರಾಷ್ಟ್ರಮಟ್ಟದ ಅಥ್ಲೆಟಿಕ್ ಸ್ಪರ್ಧೆಗೆ ಕ್ರೀಡಾಪಟುಗಳ ಆಯ್ಕೆಯನ್ನು ಈ ಕ್ರೀಡಾಕೂಟದಲ್ಲಿ ಮಾಡಲಾಗುತ್ತದೆ.

ಕ್ರೀಡಾಕೂಟಕ್ಕೆ ಆಗಮಿಸುವ ಕ್ರೀಡಾ ಪಟು ಗಳಿಗೆ ಸಿದ್ದಾರ್ಥನಗರದ ಟೆರಿಷಿಯನ್ ಪ್ರಾಥಮಿಕ ಶಾಲೆ (ಬಾಲಕರಿಗೆ) ಹಾಗೂ ಗುಡ್‍ಷೆಫರ್ಡ್ ಪದವಿ ಪೂರ್ವ ಕಾಲೇಜಿ ನಲ್ಲಿ ವಸತಿ ಸೌಕರ್ಯ ನೀಡಲಾಗುತ್ತದೆ. ಮೈಸೂರಿನ ಜೆಎಸ್‍ಎಸ್, ಸದ್ವಿದ್ಯಾ, ಮರಿ ಮಲ್ಲಪ್ಪ ಹಾಗೂ ಇನ್ನಿತರ ಪದವಿಪೂರ್ವ ಕಾಲೇಜುಗಳು ಸ್ಪರ್ಧೆಗಳಲ್ಲಿ ಭಾಗವಹಿ ಸುವ ಬಾಲಕ, ಬಾಲಕಿಯರಿಗೆ ಭೋಜನದ ವ್ಯವಸ್ಥೆ ಕಲ್ಪಿಸಿದ್ದಾರೆ. ಕ್ರೀಡಾಕೂಟದ ಸಮಾ ರೋಪ ಸಮಾರಂಭ ನ.26ರಂದು ಮಧ್ಯಾಹ್ನ 3.30ಕ್ಕೆ ಚಾಮುಂಡಿ ವಿಹಾರ ಕ್ರೀಡಾಂ ಗಣದಲ್ಲಿ ನಡೆಯಲಿದೆ ಎಂದು ಹೇಳಿ ದರು. ಸುದ್ದಿಗೋಷ್ಠಿಯಲ್ಲಿ ವಿಜಯವಿಠಲ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಚ್.ಸತ್ಯಪ್ರಸಾದ್, ಮೈಸೂರು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾ ರ್ಯರ ಸಂಘದ ಅಧ್ಯಕ್ಷ ಎಸ್.ಎಂ. ತುಳಸಿದಾಸ್ ಇನ್ನಿತರರು ಉಪಸ್ಥಿತರಿದ್ದರು.

Translate »